Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬೆಂಗಳೂರು: ನಟ ರಜನೀಕಾಂತ್ ಪತ್ನಿ...

ಬೆಂಗಳೂರು: ನಟ ರಜನೀಕಾಂತ್ ಪತ್ನಿ ಕೋರ್ಟ್‍ಗೆ ಹಾಜರು, ಜಾಮೀನು ಮಂಜೂರು

ವಾರ್ತಾಭಾರತಿವಾರ್ತಾಭಾರತಿ26 Dec 2023 9:23 PM IST
share
ಬೆಂಗಳೂರು: ನಟ ರಜನೀಕಾಂತ್ ಪತ್ನಿ ಕೋರ್ಟ್‍ಗೆ ಹಾಜರು, ಜಾಮೀನು ಮಂಜೂರು

ಬೆಂಗಳೂರು: ‘ಕೊಚ್ಚಾಡಿಯನ್’ ಸಿನಿಮಾ ವ್ಯವಹಾರಕ್ಕೆ ಸಂಬಂಧಿಸಿದಂತೆ ನಕಲಿ ದಾಖಲೆ ಸೃಷ್ಟಿಸಿದ ಆರೋಪದಡಿ ದಾಖಲಾಗಿರುವ ಪ್ರಕರಣದಲ್ಲಿ ನಟ ರಜನೀಕಾಂತ್ ಪತ್ನಿ ಲತಾ ಅವರಿಗೆ ಬೆಂಗಳೂರಿನ 1ನೇ ಎಸಿಎಂಎಂ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಕೋರ್ಟ್‍ಗೆ ಖುದ್ದು ಹಾಜರಾಗಿದ್ದ ಲತಾ ರಜನೀಕಾಂತ್ ಅವರು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನಗರದ 1ನೇ ಎಸಿಎಂಎಂ ನ್ಯಾಯಪೀಠದ ನ್ಯಾಯಾಧೀಶ ಆನಂದ್ ಎಸ್. ಕರಿಯಮ್ಮನವರ್ ಅವರು ಪುರಸ್ಕರಿಸಿದ್ದಾರೆ.

ಲತಾ ಅವರಿಗೆ ನ್ಯಾಯಪೀಠವು ತಾನು ಸೂಚಿಸಿದಾಗ ಕೋರ್ಟ್‍ಗೆ ಹಾಜರಾಗಬೇಕು, ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು ಎಂಬಿತ್ಯಾದಿ ಷರತ್ತುಗಳನ್ನು ವಿಧಿಸಿ, ಅವರಿಗೆ ಜಾಮೀನು ಮಂಜೂರು ಮಾಡಿದೆ.

ಡಿ.1ರಂದು ವಿಚಾರಣೆ ನಡೆಸಿದ್ದ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಲತಾ ರಜನೀಕಾಂತ್ ಅವರಿಗೆ ಜ.6ರಂದು ಖುದ್ದು ವಿಚಾರಣೆಗೆ ಹಾಜರಾಗಬೇಕು ಎಂದು ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಲತಾ ಅವರು ಜಾಮೀನು ಪಡೆದುಕೊಂಡಿದ್ದಾರೆ.

ಪ್ರಕರಣವೇನು?: ಚೆನ್ನೈನ ಆಡ್ ಬ್ಯುರೊ ಅಡ್ವರ್ಟೈಸಿಂಗ್ ಪ್ರೈವೇಟ್ ಲಿಮಿಟೆಡ್ ನೀಡಿರುವ ದೂರಿನ ಅನ್ವಯ ಆಡ್ ಬ್ಯೂರೊ ಅಡ್ವರ್ಟೈಸಿಂಗ್ ಕಂಪೆನಿಯಾಗಿದ್ದು, ಸಿನಿಮಾ ನಿರ್ಮಾಣದಲ್ಲಿ ಪೋಸ್ಟ್ ಪ್ರೋಡಕ್ಷನ್ ಮಾಡುತ್ತದೆ. ತಮಿಳಿನ ಕೊಚ್ಚಾಡಿಯನ್ ಸಿನಿಮಾದ ಪೋಸ್ಟ್ ಪ್ರೋಡಕ್ಷನ್ ಅನ್ನು 14.9 ಕೋಟಿ ರೂ.ಗೆ ಆಡ್ ಬ್ಯುರೊ ಕಂಪೆನಿಯು ಮೀಡಿಯಾ ಒನ್ ಗ್ಲೋಬಲ್ ಕಂಪೆನಿಯ ಜೊತೆಗೆ ನಡೆಸಿತ್ತು. ಇದಕ್ಕೆ ಲತಾ ರಜನೀಕಾಂತ್ ಅವರು ಖಾತರಿ ನೀಡಿದ್ದು, ಈ ಸಂಬಂಧ ಒಪ್ಪಂದ ಸಹ ಆಗಿತ್ತು. ಸಿನಿಮಾ ಬಿಡುಗಡೆಯಾದ ಬಳಿಕ 8.70 ಕೋಟಿ ರೂ.ಗಳನ್ನು ಲತಾ ಅವರು ಪಾವತಿಸಿದ್ದು, 6.20 ಕೋಟಿ ರೂ.ಬಾಕಿ ಪಾವತಿಸಬೇಕಿತ್ತು. ಇದನ್ನು ಪಾವತಿಸಲು ಇಚ್ಛಿಸದ ಲತಾ ಅವರು ದಿ ಪಬ್ಲಿಷರ್ಸ್ ಮತ್ತು ಬ್ರಾಡಕಾಸ್ಟರ್ಸ್ ವೆಲ್‍ಫೇರ್ ಅಸೋಸಿಯೇಶನ್ ಇಂಡಿಯಾ ಪ್ರೆಸ್ ಕ್ಲಬ್ ಹೆಸರಿನಲ್ಲಿ ನಕಲಿ ಪತ್ರ ಸೃಷ್ಟಿಸಿದ್ದು, ಅದನ್ನು ಬೆಂಗಳೂರಿನ ಸತ್ರ ನ್ಯಾಯಾಲಯಕ್ಕೆ ತಡೆಯಾಜ್ಞೆ ಕೋರಿ ಸಲ್ಲಿಸಿದ್ದರು. ಇದನ್ನು ನ್ಯಾಯಾಲಯವು ವಜಾ ಮಾಡಿತ್ತು.

ಲತಾ ಅವರು ನ್ಯಾಯಾಲಯಕ್ಕೆ ವಂಚಿಸಿದ್ದು, ದೂರುದಾರ ಆಡ್ ಬ್ಯುರೊ ಕಂಪೆನಿಗೆ ವಂಚಿಸುವ ಉದ್ದೇಶದಿಂದ ನಕಲಿ ಪತ್ರ ಸೃಷ್ಟಿಸಿದ್ದಾರೆ ಎಂದು ಚೆನ್ನೈನ ಆಡ್ ಬ್ಯುರೊ ಅಡ್ವರ್ಟೈಸಿಂಗ್ ಪ್ರೈವೇಟ್ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕ ಅಬಿರ್ ಚಂದ್ ನಹರ್ ಅವರು 2015ರ ಜೂ.9ರಂದು ದೂರು ನೀಡಿದ್ದರು. ಇದನ್ನು ಆಧರಿಸಿ ಬೆಂಗಳೂರಿನ ಹಲಸೂರು ಗೇಟ್ ಠಾಣೆಯ ಪೊಲೀಸರು ಲತಾ ಅವರ ವಿರುದ್ಧ ಐಪಿಸಿ ಸೆಕ್ಷನ್‍ಗಳಾದ 196 ಸೇರಿ ವಿವಿಧ ಸೆಕ್ಷನ್‍ಗಳ ಅಡಿ ಎಫ್‍ಐಆರ್ ದಾಖಲಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X