Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. Bengaluru | ಇಎಸ್‍ಐ, ಪಿಎಫ್ ಸೇರಿ...

Bengaluru | ಇಎಸ್‍ಐ, ಪಿಎಫ್ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ನೌಕರರಿಂದ ಧರಣಿ

ವಾರ್ತಾಭಾರತಿವಾರ್ತಾಭಾರತಿ23 March 2026 8:53 PM IST
share
Bengaluru | ಇಎಸ್‍ಐ, ಪಿಎಫ್ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ನೌಕರರಿಂದ ಧರಣಿ

ಬೆಂಗಳೂರು : ಅಂಗನವಾಡಿ ನೌಕರರನ್ನು ಕನಿಷ್ಠ ಕೂಲಿ ವ್ಯಾಪ್ತಿಗೆ ತಂದು ಇಎಸ್‍ಐ, ಪಿಎಫ್ ಜಾರಿಗೊಳಿಸುವುದು ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ನಗರದ ಫ್ರೀಡಂ ಪಾರ್ಕ್‍ನಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ನೇತೃತ್ವದಲ್ಲಿ ಅನಿರ್ಧಿಷ್ಟಾವಧಿ ಧರಣಿ ಪ್ರಾರಂಭಿಸಲಾಗಿದೆ.

ರಾಜ್ಯದ ವಿವಿಧ ಭಾಗಗಳಿಂದ ಬಂದಿದ್ದ ಅಂಗನವಾಡಿ ಕಾರ್ಯಕರ್ತೆಯರು, 2025ರ ನ.14ರಂದು ಶಿಕ್ಷಣ ಇಲಾಖೆ ಹೊರಡಿಸಿರುವ ಆದೇಶವನ್ನು ತಕ್ಷಣವೇ ರದ್ದುಗೊಳಿಸಬೇಕು. ಬಜೆಟ್‍ನಲ್ಲಿ ಘೀಷಿಸಿರುವಂತೆ 800 ಪಬ್ಲಿಕ್ ಶಾಲೆಗಳಲ್ಲಿ ಎಲ್‍ಕೆಜಿ, ಯುಕೆಜಿ ತರಗತಿ ಆರಂಭಿಸುವಾಗ ಗ್ರಾಮಗಳಲ್ಲಿನ ಅಂಗನವಾಡಿ ಕೇಂದ್ರಗಳ ಪರಿಸ್ಥಿತಿಯನ್ನು ಅವಲೋಕಿಸಬೇಕು ಎಂದು ಆಗ್ರಹಿಸಿದರು.

ಅಂಗನವಾಡಿ ಕಾರ್ಯಕರ್ತೆಯರನ್ನು ‘ಕನಿಷ್ಠ ಕೂಲಿಯ ಕಾಯ್ದೆ’ಯ ವ್ಯಾಪ್ತಿಗೆ ತಂದು ಇಎಸ್‍ಐ ಹಾಗೂ ಪಿಎಫ್ ಸೌಲಭ್ಯ ಕಲ್ಪಿಸಬೇಕು. ಅಂಗನವಾಡಿ ಕೇಂದ್ರಕ್ಕೆ ಪೂರೈಸುವ ಆಹಾರ ಪದಾರ್ಥಗಳ ಗುಣಮಟ್ಟ ಸರಿಯಿಲ್ಲದ ಕಾರಣ ಬಿಐಎಸ್ ಪರವಾನಿಗೆಯನ್ನು ರದ್ದು ಮಾಡಬೇಕು. ಆಯಾ ಪ್ರದೇಶಗಳಿಗೆ ಅನುಗುಣವಾಗಿ ಆಹಾರ ಪೂರೈಕೆ ಮಾಡಬೇಕು ಎಂದು ಒತ್ತಾಯಿಸಿದರು.

ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗಳನ್ನು ಸರಕಾರ ಕೂಡಲೇ ಭರ್ತಿ ಮಾಡಬೇಕು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಖಾಲಿಯಿರುವ ಮೇಲ್ವಿಚಾರಕಿ, ಸಿಡಿಪಿಒ ಹುದ್ದೆಗಳನ್ನು ಭರ್ತಿ ಮಾಡಬೇಕು. ಅಂಗನವಾಡಿ ನೌಕರರಿಗೆ ಚುನಾವಣೆ ಕೆಲಸಗಳನ್ನು ವಹಿಸಬಾರದು ಎಂದು ಒತ್ತಾಯಿಸಿದರು.

ನಗರ ಪ್ರದೇಶಗಳಲ್ಲಿ ಸಹಾಯಕಿಯರ ಆಯ್ಕೆಗೆ ಇರುವ ಮಾನದಂಡಗಳನ್ನು ಬದಲಾವಣೆ ಮಾಡಬೇಕು. ಜೊತೆಗೆ ಸಾಮೂಹಿಕ ಆರೋಗ್ಯ ವಿಮೆ ಜಾರಿಗೆ ತರಬೇಕು. ಮುಟ್ಟಿನ ರಜೆಯನ್ನು ಅಂಗನವಾಡಿ ಕಾರ್ಯಕರ್ತೆಯರಿಗೂ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ಅಂಗನವಾಡಿ ಕಾರ್ಯಕರ್ತೆಯರಿಗೆ ಆರೋಗ್ಯ ಸಂಜೀವಿನಿ ಯೋಜನೆಯನ್ನೂ ಅನ್ವಯ ಮಾಡಬೇಕು. ನಿವೃತ್ತರಿಗೆ ನೀಡುವ ಇಡುಗಂಟು ಹೆಚ್ಚಳ ಮಾಡಬೇಕು. ತಿಂಗಳಿಗೆ 10 ಸಾವಿರ ಪಿಂಚಣಿ ನೀಡಬೇಕು ಎಂದು ಆಗ್ರಹಿಸಿದರು.

ಬೆಲೆ ಏರಿಕೆಗೆ ಅನುಗುಣವಾಗಿ ಕನಿಷ್ಠ ವೇತನ ಜಾರಿಗೊಳಿಸಬೇಕು. ಐಸಿಡಿಎಸ್ ಪ್ರತ್ಯೇಕ ನಿರ್ದೇಶನಾಲಯ ಮಾಡಬೇಕು. ಮೊಟ್ಟೆ ನೀಡುವ ಬದಲಿಗೆ ನೇರ ನಗದು ಜಮಾವಣೆ ಡಿಬಿಟಿ ತರುತ್ತಿರುವುದನ್ನು ಕೈಬಿಡಬೇಕು. ಬಜೆಟ್‍ನಲ್ಲಿ ಅಂಗನವಾಡಿ ನೌಕರರಿಗೆ ಗೌರವಧನ ಹೆಚ್ಚಳ ಮಾಡಿಲ್ಲ. ಚುನಾವಣಾ ಸಂದರ್ಭದಲ್ಲಿಯ ಭರವಸೆ ನೀಡದಂತೆ ತಕ್ಷಣ ವೇತನ ಹೆಚ್ಚಳ ಮಾಡಬೇಕು ಎಂದು ಆಗ್ರಹಿಸಿದರು.

ಇದೇ ವೇಳೆ ಧರಣಿ ಸ್ಥಳಕ್ಕೆ ಭೇಟಿ ನೀಡಿದ್ದ ವೈದ್ಯಕೀಯ ಶಿಕ್ಷಣ ಮತ್ತು ಕೌಶಲಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ ಅವರಿಗೆ ಮನವಿ ಸಲ್ಲಿಸಲಾಯಿತು.

ಧರಣಿಯಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಎಸ್.ವರಲಕ್ಷ್ಮಿ, ಪ್ರದಾನ ಕಾರ್ಯದರ್ಶಿ ಎಚ್.ಎಸ್.ಸುನಂದಾ ಸೇರಿ ಸಾವಿರಾರು ಅಂಗನವಾಡಿ ಕಾರ್ಯಕರ್ತೆರು ಭಾಗವಹಿಸಿದ್ದರು.

ಅಹೋರಾತ್ರಿ ಧರಣಿ ಮುಂದುವರಿಕೆ: ರಾಜ್ಯ ಸರಕಾರದ ಪ್ರತಿನಿಧಿಗಳಾಗಿ ವೈದ್ಯಕೀಯ ಶಿಕ್ಷಣ ಸಚಿವರಾದ ಶರಣಪ್ರಕಾಶ ಪಾಟೀಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಇಲಾಖೆಯ ಕಾರ್ಯದರ್ಶಿ ಶಮ್ಲಾ ಇಕ್ಬಾಲ್ ಮತ್ತು ನಿರ್ದೇಶಕರು ಹಾಗೂ ಜಂಟಿ ನಿರ್ದೇಶಕರು ಧರಣಿ ಸ್ಥಳಕ್ಕೆ ಬಂದು ಹೋರಾಟವನ್ನು ಹಿಂಪಡೆಯಲು ವಿನಂತಿಸಿದ್ದಾರೆ. ಆದರೆ ಸರಕಾರದಿಂದ ಖಚಿತವಾದ ಭರವಸೆ ಸಿಗುವ ತನಕ ಹೋರಾಟ ಹಿಂಪಡೆಯುವುದಿಲ್ಲ. ಆದ್ದರಿಂದ ಅಹೋರಾತ್ರಿ ಧರಣಿ ನಡೆಸುತ್ತೇವೆ ಎಂದು ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಎಸ್.ವರಲಕ್ಷ್ಮಿ ಮಾಹಿತಿ ನೀಡಿದ್ದಾರೆ.

Tags

BengaluruAnganwadi workersprotestESI
share
ವಾರ್ತಾಭಾರತಿ
ವಾರ್ತಾಭಾರತಿ
Next Story
X