Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬೆಂಗಳೂರು: ಪ್ರತಿಷ್ಠಿತ ಬ್ರಾಂಡ್‍ನ...

ಬೆಂಗಳೂರು: ಪ್ರತಿಷ್ಠಿತ ಬ್ರಾಂಡ್‍ನ ಹೆಸರಿನಡಿ ನಕಲಿ ಬಟ್ಟೆಗಳನ್ನು ತಯಾರಿಸಿ ಮಾರುತ್ತಿದ್ದ ಗೋದಾಮುಗಳ ಮೇಲೆ ಸಿಸಿಬಿ ದಾಳಿ

ವಾರ್ತಾಭಾರತಿವಾರ್ತಾಭಾರತಿ30 Nov 2023 9:02 PM IST
share
ಬೆಂಗಳೂರು: ಪ್ರತಿಷ್ಠಿತ ಬ್ರಾಂಡ್‍ನ ಹೆಸರಿನಡಿ ನಕಲಿ ಬಟ್ಟೆಗಳನ್ನು ತಯಾರಿಸಿ ಮಾರುತ್ತಿದ್ದ ಗೋದಾಮುಗಳ ಮೇಲೆ ಸಿಸಿಬಿ ದಾಳಿ

ಬೆಂಗಳೂರು: ಬೊಮ್ಮನಹಳ್ಳಿ ಮತ್ತು ಕೆ.ಆರ್.ಮಾರ್ಕೆಟ್ ವ್ಯಾಪ್ತಿಯಲ್ಲಿ ಪ್ರತಿಷ್ಠಿತ ಬ್ರಾಂಡ್‍ನ ಹೆಸರಿನಡಿ ನಕಲಿ ಬಟ್ಟೆಗಳನ್ನು ತಯಾರಿಸಿ ಮಾರುತ್ತಿದ್ದ ವ್ಯಾಪಾರಸ್ಥರ ಅಂಗಡಿ, ಗೋದಾಮುಗಳ ಮೇಲೆ ಸಿಸಿಬಿ ಆರ್ಥಿಕ ಅಪರಾಧ ದಳದ ಪೊಲೀಸರು ದಾಳಿ ನಡೆಸಿ ಮಾಲುಗಳನ್ನು ಜಪ್ತಿ ಮಾಡಿದ್ದಾರೆ.

ಈ ಕುರಿತ ಖಚಿತ ಮಾಹಿತಿ ಮೇರೆಗೆ ಬೊಮ್ಮನಹಳ್ಳಿಯ ಪಟೇಲ್ ಎಕ್ಸ್ ಪರ್ಟ್ ಹಾಗೂ ಆರ್.ಬಿ. ಫ್ಯಾಷನ್ ಗೋದಾಮುಗಳ ಮೇಲೆ ದಾಳಿ ಮಾಡಿದ ಸಿಸಿಬಿ, 1.5 ಕೋಟಿ ರೂಪಾಯಿ ಮೌಲ್ಯದ ನಕಲಿ ಬಟ್ಟೆಗಳು, ಇನ್ನಿತರೆ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದು, ಭರತ್ ಕುಮಾರ್, ರಾಧ ಎಂಬವರ ವಿರುದ್ಧ ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅರ್ಮಾನಿ, ಬರ್ಬರಿ, ಗ್ಯಾಂಟ್ ಸೇರಿದಂತೆ ಹೆಸರಾಂತ ಕಂಪೆನಿಗಳ ಬಟ್ಟೆ ಎಂದು ಗ್ರಾಹಕರನ್ನು ನಂಬಿಸುತ್ತಿದ್ದ ಆರೋಪಿಗಳು ಅಕ್ರಮ ಮಾರಾಟದಲ್ಲಿ ತೊಡಗಿದ್ದರು. ಪರಿಶೀಲನೆಯ ವೇಳೆ ಎಸ್.ಆರ್.ನಗರ, ಮಾಗಡಿ ರೋಡ್, ಬೇಗೂರು ಸೇರಿದಂತೆ ಗೋದಾಮುಗಳಲ್ಲಿ ಪ್ರತಿಷ್ಠಿತ ಬ್ರಾಂಡ್ ಹೆಸರಿನಡಿ ನಕಲಿ ಬಟ್ಟೆಗಳನ್ನು ಸಿದ್ದಗೊಳಿಸುತ್ತಿರುವುದು ಬೆಳಕಿಗೆ ಬಂದಿದೆ.

ಕೆ.ಆರ್.ಮಾರ್ಕೆಟ್ ಬಳಿ ಸ್ರೀಕೇಟ್ ಚೇಂಬರ್ : ಕೆ.ಆರ್.ಮಾರ್ಕೆಟ್ ಬಳಿ ನಡೆದ ಸಿಸಿಬಿ ದಾಳಿ ವೇಳೆ ಸೀಕ್ರೆಟ್ ಚೇಂಬರ್ ನಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ವಿದೇಶಿ ನಕಲಿ ಸಿಗರೇಟ್‍ಗಳು ಪತ್ತೆಯಾಗಿವೆ. ಪ್ರತಿಷ್ಠಿತ ಐಟಿಸಿ ಬ್ರಾಂಡ್ ಸಹ ನಕಲಿ ಮಾಡಲಾಗಿದೆ. ಬ್ಲಾಕ್, ಮಾಂಡ್, ಸಿಗರ್ ಎಸ್ಸೆಲೈಟ್ಸ್ ಸೇರಿ ಹಲವಾರು ವಿದೇಶಿ ಬ್ರಾಂಡ್‍ಗಳು ನಕಲಿ ಮಾಡಿ ಮಾರಾಟ ಮಾಡಲಾಗುತ್ತಿತ್ತು.

ನಗರದ ವಿವಿಧ ಬೀಡಾ ಸ್ಟಾಲ್ ಪಾನ್ ಶಾಪ್‍ಗಳಿಗೆ ಈ ನಕಲಿ ಬ್ರಾಂಡ್ ಸಿಗರೇಟ್‍ಗಳನ್ನು ಪೂರೈಕೆ ಮಾಡಲಾಗುತ್ತಿತ್ತು. ಆರೋಪಿಗಳ ಬಳಿ ಅಕ್ರಮ ಹುಕ್ಕಾ ಜಾರ್ ಗಳು ಪತ್ತೆಯಾಗಿದ್ದು, ಘಟನೆ ಸಂಬಂಧ ಲಲಿತ್ ಎಂಬಾತನ ವಿರುದ್ಧ ಸಿಟಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಗೊತ್ತಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X