ಬೆಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ನವ ವಿವಾಹಿತೆ ಮೃತದೇಹ ಪತ್ತೆ

ಸಾಂದರ್ಭಿಕ ಚಿತ್ರ
ಬೆಂಗಳೂರು, ಸೆ.8: ನವ ವಿವಾಹಿತೆಯೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಇಲ್ಲಿನ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.
ಕೃಷ್ಣವೇಣಿ(26) ಮೃತ ನವ ವಿವಾಹಿತೆ ಎಂದು ಗುರುತಿಸಲಾಗಿದೆ.
ಮೃತ ಕೃಷ್ಣವೇಣಿ ಅವರನ್ನು ಮೂರು ತಿಂಗಳ ಹಿಂದೆ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ ಕೋಲಾರ ಮೂಲದ ಪೃಥ್ವಿರಾಜ್ ಎಂಬುವವರ ಜೊತೆ ವಿವಾಹ ಮಾಡಿಕೊಡಲಾಗಿತ್ತು. ಈ ಘಟನೆಗೆ ಆಕೆಯ ಪತಿಯೇ ಕಾರಣ ಎಂದು ಮೃತಳ ಕುಟುಂಬಸ್ಥರು ಆರೋಪಿಸಿದ್ದಾರೆ.
ಈ ಸಂಬಂಧ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Next Story





