Bengaluru | ಎಸ್ಐಆರ್ ವಿರುದ್ಧ ಫ್ರೀಡಂ ಪಾರ್ಕ್‍ನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು : ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ(ಎಸ್‍ಐಆರ್) ಪ್ರಕ್ರಿಯೆಯಿಂದ ಉಂಟಾಗಿರುವ ಅನ್ಯಾಯ ಮತ್ತು ಮತದಾರರ ಹಕ್ಕುಗಳ ಮೇಲಿನ ಪರಿಣಾಮಗಳ ವಿರುದ್ಧ ಎಸ್‍ಐಆರ್ ವಿರೋಧಿ ಒಕ್ಕೂಟ ಹಾಗೂ ವಿವಿಧ ನಾಗರಿಕ ಹಕ್ಕುಗಳ ಸಂಘಟನೆಗಳ ವತಿಯಿಂದ ನಗರದ ಫ್ರೀಡಂ ಪಾರ್ಕ್‍ನಲ್ಲಿ ಇಂದು (ಅ.8) ಜನತಾ ನ್ಯಾಯಾಲಯ ಹಾಗೂ ಬೃಹತ್ ಪ್ರತಿಭಟನೆ ನಡೆಯುತ್ತಿದೆ.
ಜನತಾ ನ್ಯಾಯಾಲಯದಲ್ಲಿ ಸುಪ್ರೀಂ ಕೋರ್ಟ್‌ನ ಮೂವರು ನಿವೃತ್ತ ನ್ಯಾಯಮೂರ್ತಿಗಳು ಸಂತ್ರಸ್ತರ ಸಮಸ್ಯೆಯನ್ನು ಆಲಿಸಲಿದ್ದಾರೆ.
ಸಾಹಿತಿ ದೇವನೂರ ಮಹಾದೇವ, ನಟ ಪ್ರಕಾಶ್ ರಾಜ್, ಸಿಜೆಪಿ ಮುಖಂಡರಾದ ಅಭಿಜಿತ್ ದೀಪ್ಕೆ, ಸೌರವ್ ದಾಸ್, ಅಶುತೋಷ್ ರಾಂಕಾ, ಯೂಟ್ಯೂಬರ್ ಧ್ರುವ ರಾಠಿ ಸೇರಿ ಹಲವು ಚಿಂತಕರು, ಕಲಾವಿದರು, ಸಾಹಿತಿಗಳು ಪಾಲ್ಗೊಳ್ಳಲಿದ್ದಾರೆ.
Next Story




