Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಚಿವ ಡಿ.ಸುಧಾಕರ್ ನಿಧನ

ಸಚಿವ ಡಿ.ಸುಧಾಕರ್ ನಿಧನ

ವಾರ್ತಾಭಾರತಿವಾರ್ತಾಭಾರತಿ10 May 2026 7:31 AM IST
share
ಸಚಿವ ಡಿ.ಸುಧಾಕರ್ ನಿಧನ

ಬೆಂಗಳೂರು, ಮೇ 10: ಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಸಚಿವ ಡಿ. ಸುಧಾಕರ್ ಅವರು ರವಿವಾರ ಬೆಳಗಿನಜಾವ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಡಿಯಲ್ಲಿರುವ ಕಿಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಸುಧಾಕರ್ ಅವರಿಗೆ (66) ವಯಸ್ಸಾಗಿತ್ತು. ಒಂದು ತಿಂಗಳಿನಿಂದ ಅನಾರೋಗ್ಯಕ್ಕೀಡಾಗಿದ್ದ ಅವರಿಗೆ ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯ ತುರ್ತುನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಬೆಳಗ್ಗೆ 3:15ರ ಸುಮಾರಿಗೆ ನಿಧನರಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ಪ್ರಕಟಿಸಿವೆ.

ಮೊದಲು ಮೊಣಕಾಲು ಸಂಬಂಧ ಶಸ್ತ್ರ ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಸಚಿವ ಡಿ. ಸುಧಾಕರ್ ಅವರು ದಾಖಲಾಗಿದ್ದರು. ಶಸ್ತ್ರಚಿಕಿತ್ಸೆಯ ಬಳಿಕ ಅವರಿಗೆ ಶ್ವಾಸಕೋಶದ ಸೋಂಕು ಕಾಣಿಸಿಕೊಂಡಿತ್ತು. ಬಳಿಕ ಅವರನ್ನು ಮಣಿಪಾಲ್‌ ಆಸ್ಪತ್ರೆಯಿಂದ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯ ತುರ್ತುನಿಗಾ ಘಟಕದಲ್ಲಿಯೇ ಸುಧಾಕರ್ ನೀಡಲಾಗುತ್ತಿತ್ತು.

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ಮೂಲದ ಡಿ. ಸುಧಾಕರ್ ಅವರು, 1961 ಮಾರ್ಚ್​28ರಂದು ಎನ್. ದಶರಥಯ್ಯ ಮತ್ತು ಕಾಂಚನಮಾಲಮ್ಮ ದಂಪತಿಯ ಪುತ್ರನಾಗಿ ಜನಿಸಿದರು.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪಟ್ಟಣದಲ್ಲಿ ಹಾಗೂ, ಶಿವಮೊಗ್ಗದ ನ್ಯಾಷನಲ್ ಕಾಲೇಜಿನಲ್ಲಿ ಬಿ.ಕಾಂ ಪದವಿ ಪೂರ್ಣಗೊಳಿಸಿದರು.

ವೃತ್ತಿಜೀವನದಲ್ಲಿ ತಂದೆಯಿಂದ ಬಳುವಳಿಯಾಗಿ ಬಂದಿದ್ದ ಕೃಷಿ ಮತ್ತು ಲಿಕ್ಕರ್ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದ ಇವರು, ನಂತರ ರಾಜಕೀಯದತ್ತ ಆಕರ್ಷಿತರಾದರು. ಮಾಜಿ ಶಾಸಕ ಎನ್. ಜಯಣ್ಣ ಅವರಿಂದ ರಾಜಕೀಯ ಪಟ್ಟುಗಳನ್ನು ಕಲಿತ ಸುಧಾಕರ್, ಹಂತ-ಹಂತವಾಗಿ ಬೆಳೆದು ಚಿತ್ರದುರ್ಗ ಜಿಲ್ಲೆಯ ಪ್ರಭಾವಿ ನಾಯಕರಾಗಿ ಇದೀಗ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿ ಗುರುತಿಸಿಕೊಂಡಿದ್ದರು.

ಮೃತ ಸಚಿವ ಡಿ. ಸುಧಾಕರ್ ಅವರು ಪತ್ನಿ ಹರ್ಷಿಣಿ, ಮಗ ಸುಹಾಸ್ ಹಾಗೂ ಪುತ್ರಿ ಸ್ಫೂರ್ತಿ ಸೇರಿದಂತೆ ಅಪಾರ ಸಂಖ್ಯೆಯ ಬಂಧುಮಿತ್ರರರು ಹಾಗೂ ಪಕ್ಷದ ಕಾರ್ಯಕರ್ತರನ್ನು ಅಗಲಿದ್ದಾರೆ.

Tags

BengaluruD. Sudhakar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X