Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ...

ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳಿಗೆ ‘ಪ್ರಜಾ ಸೇವಾ ಕೇಂದ್ರ’ ಎಂದು ಮರುನಾಮಕರಣ

ರಾಜ್ಯಾದ್ಯಂತ ಏಕರೂಪದ ಬ್ರ್ಯಾಂಡಿಂಗ್‌ಗೆ ಸರಕಾರದ ಆದೇಶ

ReshmaReshma19 Nov 2026 10:16 AM IST
share
ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳಿಗೆ  ‘ಪ್ರಜಾ ಸೇವಾ ಕೇಂದ್ರ’ ಎಂದು ಮರುನಾಮಕರಣ

ಬೆಂಗಳೂರು : ರಾಜ್ಯದಾದ್ಯಂತ ವಿವಿಧ ಹೆಸರುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನಾಗರಿಕ ಸೇವಾ ಕೇಂದ್ರಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ‘ಪ್ರಜಾ ಸೇವಾ ಕೇಂದ್ರ’ ಎಂದು ಮರುನಾಮಕರಣ ಮಾಡಿ ಕರ್ನಾಟಕ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಪ್ರಜಾಸೇವಾ ಇಲಾಖೆಯ ವಿದ್ಯುನ್ಮಾನ ನಾಗರಿಕ ಸೇವಾ ವಿತರಣಾ ನಿರ್ದೇಶನಾಲಯದ (EDCS) ಅಡಿಯಲ್ಲಿ ಬೆಂಗಳೂರು ನಗರದಲ್ಲಿ ‘ಬೆಂಗಳೂರು ಒನ್’, ಇತರೆ ನಗರ ಹಾಗೂ ಪಟ್ಟಣಗಳಲ್ಲಿ ‘ಕರ್ನಾಟಕ ಒನ್’ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ‘ಗ್ರಾಮ ಒನ್’ ಎಂಬ ಹೆಸರುಗಳಲ್ಲಿ ಸಾರ್ವಜನಿಕರಿಗೆ ಸರ್ಕಾರಿ ಸೇವೆಗಳನ್ನು ಒದಗಿಸಲಾಗುತ್ತಿತ್ತು. ರಾಜ್ಯಾದ್ಯಂತ ಈ ಕೇಂದ್ರಗಳು ಬೇರೆ ಬೇರೆ ಹೆಸರುಗಳಿಂದ ಕರೆಯಲ್ಪಡುತ್ತಿದ್ದ ಹಿನ್ನೆಲೆಯಲ್ಲಿ, ಸೇವೆಗಳ ವಿತರಣೆಯಲ್ಲಿ ಏಕರೂಪತೆ ತರುವ ಉದ್ದೇಶದಿಂದ ಮುಖ್ಯಮಂತ್ರಿ ಅವರ ಸೂಚನೆಯ ಮೇರೆಗೆ ಮರುನಾಮಕರಣ ಮಾಡಲಾಗಿದೆ.

ನವೆಂಬರ್ 18, 2026ರಿಂದ ರಾಜ್ಯದ ಎಲ್ಲ ಬೆಂಗಳೂರು ಒನ್, ಕರ್ನಾಟಕ ಒನ್ ಮತ್ತು ಗ್ರಾಮ ಒನ್ ಕೇಂದ್ರಗಳನ್ನು ‘ಪ್ರಜಾ ಸೇವಾ ಕೇಂದ್ರ’ ಎಂದು ಕರೆಯಲಾಗುತ್ತದೆ. ಇನ್ನು ಮುಂದೆ ಅಧಿಕೃತ ಪತ್ರ ವ್ಯವಹಾರಗಳು, ನಾಮಫಲಕಗಳು, ವೆಬ್ ಪೋರ್ಟಲ್‌ಗಳು, ತಂತ್ರಾಂಶಗಳು, ರಸೀದಿಗಳು ಹಾಗೂ ಪ್ರಚಾರ ಸಾಮಗ್ರಿಗಳಲ್ಲಿ ‘ಪ್ರಜಾ ಸೇವಾ ಕೇಂದ್ರ’ ಎಂಬ ಹೆಸರನ್ನೇ ಬಳಸುವಂತೆ ಸೂಚಿಸಲಾಗಿದೆ.

ರಾಜ್ಯದ ಎಲ್ಲ ಪ್ರಜಾ ಸೇವಾ ಕೇಂದ್ರಗಳಿಗೆ ಏಕರೂಪದ ಬ್ರ್ಯಾಂಡಿಂಗ್, ನಾಮಫಲಕದ ವಿನ್ಯಾಸ, ಲಾಂಛನ ಹಾಗೂ ಬಣ್ಣದ ವಿನ್ಯಾಸ ರೂಪಿಸಿ ಸರ್ಕಾರದಿಂದ ಅನುಮೋದನೆ ಪಡೆಯುವಂತೆ ವಿದ್ಯುನ್ಮಾನ ನಾಗರಿಕ ಸೇವಾ ವಿತರಣಾ ನಿರ್ದೇಶನಾಲಯದ ನಿರ್ದೇಶಕರಿಗೆ ಸೂಚಿಸಲಾಗಿದೆ.

ಅತ್ಯಂತ ಆದ್ಯತೆಯ ಮೇರೆಗೆ ಅನುಷ್ಠಾನ :

ಕೇಂದ್ರಗಳ ನಿರ್ವಾಹಕರು ಹಾಗೂ ಫ್ರಾಂಚೈಸಿಗಳೊಂದಿಗಿನ ಒಪ್ಪಂದಗಳಲ್ಲಿಯೂ ಹೊಸ ಹೆಸರನ್ನು ಅಳವಡಿಸಬೇಕು. ಈ ಆದೇಶವನ್ನು ರಾಜ್ಯಾದ್ಯಂತ ಅತ್ಯಂತ ಆದ್ಯತೆಯ ಮೇರೆಗೆ ಜಾರಿಗೊಳಿಸುವಂತೆ ಪ್ರಜಾಸೇವಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತ ಅವರು ಆದೇಶದಲ್ಲಿ ತಿಳಿಸಿದ್ದಾರೆ.

Tags

Bengaluru OneKarnataka OneGrama OnePraja Seva Kendra
share
Reshma
Reshma
Next Story
X