ಬೆಂಗಳೂರು ಕಾಲ್ತುಳಿತ ಪ್ರಕರಣ: ನ್ಯಾ. ಮೈಕಲ್ ಕುನ್ಹಾ ವರದಿ ರದ್ದು ಕೋರಿ ಡಿಎನ್ಎ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

PC: PTI
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ್ದ ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ವಿಚಾರಣಾ ಆಯೋಗ ಸರ್ಕಾರಕ್ಕೆ ಸಲ್ಲಿಸಿರುವ ವರದಿ ರದ್ದು ಕೋರಿ ಡಿಎನ್ಎ ಎಂಟರ್ಟೇನ್ಮೆಂಟ್ ನೆಟ್ವರ್ಕ್ಸ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಆರ್ಸಿಬಿ ವಿಜಯೋತ್ಸವ ಕಾರ್ಯಕ್ರಮ ಆಯೋಜಿಸಿದ್ದ ಡಿಎನ್ಎ ಎಂಟರ್ಟೇನ್ಮೆಂಟ್ ನೆಟ್ವರ್ಕ್ಸ್ನ ನಿರ್ದೇಶಕ ಸುನೀಲ್ ಮ್ಯಾಥ್ಯೂ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಡಿ.ಕೆ. ಸಿಂಗ್ ಹಾಗೂ ನ್ಯಾಯಮೂರ್ತಿ ತಾರಾ ವಿತಾಸ್ತಾ ಗಂಜು ಅವರಿದ್ದ ವಿಭಾಗೀಯ ನ್ಯಾಯಪೀಠ ಶುಕ್ರವಾರ ಪ್ರಕಟಿಸಿತು.
ರಾಜ್ಯ ಸರ್ಕಾರದ ನಿಲುವನ್ನು ಪರಿಗಣಿಸಿ, ಡಿಎನ್ಎ ಎಂಟರ್ಟೇನ್ಮೆಂಟ್ ಯಾವುದೇ ಆತಂಕಕ್ಕೆ ಒಳಗಾಗಬೇಕಾಗಿಲ್ಲ ಎಂಬುದನ್ನು ಮನಗಂಡು ಅರ್ಜಿಯನ್ನು ವಜಾಗೊಳಿಸಲಾಗಿದೆ ಎಂದು ನ್ಯಾಯಪೀಠ ಆದೇಶಿಸಿದೆ. ವಿಸ್ತೃತ ತೀರ್ಪಿನ ಪ್ರತಿ ಇನ್ನಷ್ಟೇ ಲಭ್ಯವಾಗಬೇಕಿದೆ.
Next Story





