ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಶೇ.86.38ರಷ್ಟು ಮತದಾನ

ಸಾಂದರ್ಭಿಕ ಚಿತ್ರ
ಬೆಂಗಳೂರು: ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳಿಲ್ಲದೆ ಶಾಂತಿಯುವಾಗಿ ಶೇ.86.38ರಷ್ಟು ಮತದಾನವಾಗಿದೆ ಎಂದು ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತ ಹಾಗೂ ಚುನಾವಣಾಧಿಕಾರಿಯ ಪ್ರಕಟಣೆ ತಿಳಿಸಿದೆ.
ಬೆಂಗಳೂರು ಶಿಕ್ಷಕರ ಕ್ಷೇತ್ರದ ವ್ಯಾಪ್ತಿಯಲ್ಲಿ ಒಟ್ಟು 19,152 ಮತದಾರರಿದ್ದು, ಈ ಉಪ ಚುನಾವಣೆಯಲ್ಲಿ 16,544 ಮಂದಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ. ಈ ಹಿಂದೆ ಬೆಂಗಳೂರು ಶಿಕ್ಷಕರ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಪುಟ್ಟಣ್ಣ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಇಂದು ಉಪ ಚುನಾವಣೆ ನಡೆದಿದೆ.
ಕಾಂಗ್ರೆಸ್ ಅಭ್ಯರ್ಥಿಯಾಗಿ ಪುಟ್ಟಣ್ಣ ಹಾಗೂ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮೈತ್ರಿ ಅಭ್ಯರ್ಥಿಯಾಗಿ ಎ.ಪಿ.ರಂಗನಾಥ್ ಕಣಕ್ಕಿಳಿದಿದ್ದಾರೆ. ಫೆ.20ರಂದು ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ.
Next Story





