Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬೆಂಗಳೂರು ತಂತ್ರಜ್ಞಾನ ಶೃಂಗಸಭೆಗೆ ತೆರೆ:...

ಬೆಂಗಳೂರು ತಂತ್ರಜ್ಞಾನ ಶೃಂಗಸಭೆಗೆ ತೆರೆ: ಡೀಪ್ಟೆಕ್ ನವೋದ್ಯಮಗಳಿಗೆ 400 ಕೋಟಿ ನೆರವು ಘೋಷಣೆ

ವಾರ್ತಾಭಾರತಿವಾರ್ತಾಭಾರತಿ20 Nov 2025 9:26 PM IST
share
ಬೆಂಗಳೂರು ತಂತ್ರಜ್ಞಾನ ಶೃಂಗಸಭೆಗೆ ತೆರೆ: ಡೀಪ್ಟೆಕ್ ನವೋದ್ಯಮಗಳಿಗೆ 400 ಕೋಟಿ ನೆರವು ಘೋಷಣೆ

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸತತ ಮೂರು ದಿನಗಳ ಕಾಲ ನಡೆದ ಬೆಂಗಳೂರು ತಂತ್ರಜ್ಞಾನ ಶೃಂಗಸಭೆ ತೆರೆ ಕಂಡಿದ್ದು, ರಾಜ್ಯ ಸರಕಾರ ಮತ್ತು ನವೋದ್ಯಮಗಳಲ್ಲಿ ಹೂಡಿಕೆ ಮಾಡುವವರಿಂದ (ವಿಸಿ) ಡೀಪ್ಟೆಕ್ ನವೋದ್ಯಮಗಳಿಗೆ ನೆರವಾಗಲು 400 ಕೋಟಿ ಘೋಷಣೆ ಮಾಡಲಾಗಿದೆ.

ಇಲ್ಲಿನ ತುಮಕೂರು ರಸ್ತೆಯಲ್ಲಿನ ಬೆಂಗಳೂರು ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ (ಬಿಐಇಸಿ) ಕೊನೆಯ ದಿನವಾದ ಗುರುವಾರ ಹಮ್ಮಿಕೊಂಡಿದ್ದ ಬೆಂಗಳೂರು ತಂತ್ರಜ್ಞಾನ ಶೃಂಗಸಭೆ ಸಮಾರೋಪ ಸಮಾರಂಭದಲ್ಲಿ ಡೀಪ್ಟೆಕ್ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನವೋದ್ಯಮಗಳಿಗೆ ಇದೇ ಮೊದಲ ಬಾರಿಗೆ 400 ಕೋಟಿ ಮೊತ್ತದ ನೆರವು ನೀಡಲಾಗಿದೆ.

ಈ ಶೃಂಗಸಭೆಯ ಸಮಾರೋಪ ಸಮಾರಂಭದಲ್ಲಿ ಟೆನಿಸ್ ತಾರೆ ಸಾನಿಯಾ ಮಿರ್ಜಾ, ಗಗನಯಾನಿ ಶುಭಾಂಶು ಶುಕ್ಲಾ, ಕ್ರಿಕೆಟ್ ಆಟಗಾರ್ತಿ ರಿಚಾ ಘೋಷ್ ಸೇರಿದಂತೆ ಹಲವು ಗಣ್ಯರ ಆಗಮನ ಗಮನ ಸೆಳೆಯಿತು. ಜತೆಗೆ, 57ಕ್ಕೂ ಹೆಚ್ಚು ದೇಶಗಳ 20,680 ಪ್ರತಿನಿಧಿಗಳು ತಂತ್ರಜ್ಞಾನ ಶೃಂಗಸಭೆಯ ವಿವಿಧ ಸಮ್ಮೇಳನಗಳಲ್ಲಿ ಭಾಗವಹಿಸಿದ್ದರು.

46,389ಕ್ಕೂ ಹೆಚ್ಚು ಉದ್ದಿಮೆ ಸಂದರ್ಶಕರು ವಹಿವಾಟು ವೃದ್ಧಿ ಅವಕಾಶಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಟೇಕ್ ಮೇಳಕ್ಕೆ ಭೇಟಿ ನೀಡಿದವರ ಒಟ್ಟಾರೆ ಸಂಖ್ಯೆಯು 92,500 ಸಾವಿರ ಮೀರಿತ್ತು. ಶೃಂಗಸಭೆಯಲ್ಲಿ ಕೃತಕ ಜಾಣ್ಮೆ, ಡೀಪ್‍ಟೆಕ್, ಜೈವಿಕ ತಂತ್ರಜ್ಞಾನ ಕ್ಷೇತ್ರದ ನವೋದ್ಯಮಗಳಿಗೆ ಸಂಬಂಧಿಸಿದಂತೆ ವಿವಿಧ ವಿಷಯಗಳ ಕುರಿತ 100 ವಿಚಾರಗೋಷ್ಠಿಗಳಲ್ಲಿ ಉದ್ಯಮದ 630ಕ್ಕೂ ಹೆಚ್ಚು ಭಾಷಣಕಾರರು ತಮ್ಮ ಚಿಂತನೆಗಳನ್ನು ಹಂಚಿಕೊಂಡರು.

1,015 ಪ್ರದರ್ಶಕರು ತಮ್ಮ ಉತ್ಪನ್ನಗಳು ಮತ್ತು ಸೇವೆಗಳನ್ನು ಪ್ರದರ್ಶಿಸಿದರು. ಭಾಗವಹಿಸಿದ 12,000ಕ್ಕೂ ಹೆಚ್ಚು ಜನರಲ್ಲಿ ಸುಸ್ಥಿರತೆಯ ಜಾಗೃತಿ ಮೌಲ್ಯಮಾಪನ, ಸುಸ್ಥಿರ ಮಳಿಗೆ ಪ್ರಶಸ್ತಿಗಳಿಗಾಗಿ 850 ಮಳಿಗೆಗಳ ಮೌಲ್ಯಮಾಪನ. ನವೋದ್ಯಮಗಳು 36 ಹೂಡಿಕೆದಾರರಿಗೆ 146 ಹೂಡಿಕೆ ಪ್ರಸ್ತಾವನೆಗಳನ್ನು ಮುಂದಿಟ್ಟಿದ್ದವು.

ಜತೆಗೆ, ಶೃಂಗಸಭೆಯ ಸಮಯದಲ್ಲಿ ಒಟ್ಟು 107 ಮಾರ್ಗದರ್ಶಕರ ಸಭೆಗಳು ನಡೆದಿದ್ದು, ಒಟ್ಟಾರೆ, ಮೂರು ದಿನಗಳವರೆಗೆ ನಡೆದ ಬೆಂಗಳೂರು ಟೆಕ್ ಶೃಂಗಸಭೆಯು ಗುರುವಾರ ಸಂಜೆ ಯಶಸ್ವಿಯಾಗಿ ಸಂಪನ್ನಗೊಂಡಿತು.

ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಐಟಿ, ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ಭವಿಷ್ಯದ ಹತ್ತು ವರ್ಷಗಳು ವೈಜ್ಞಾನಿಕ ನಾವೀನ್ಯತೆ ಆಧರಿಸಿದ ತಂತ್ರಜ್ಞಾನಗಳಾದ ಕೃತಕ ಜಾಣ್ಮೆ, ರೋಬೊಟಿಕ್ಸ್, ಕ್ವಾಂಟಂ ಕಂಪ್ಯೂಟಿಂಗ್ ಮತ್ತು ಜೈವಿಕ ತಂತ್ರಜ್ಞಾನಗಳ ದಶಕವಾಗಿರಲಿದ್ದು, ಬೆಂಗಳೂರಿನ ಟೆಕ್ ಸಮ್ಮೇಳನವು ಅದಕ್ಕೆ ಮುನ್ನುಡಿ ಬರೆದಿದೆ ಎಂದು ಹೇಳಿದರು.

ತಂತ್ರಜ್ಞಾನ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಹಾಗೂ ಮಾರುಕಟ್ಟೆಗಳನ್ನು ಸೃಷ್ಟಿಸುವಲ್ಲಿ ಡೀಪ್ಟೆಕ್ ಕ್ಷೇತ್ರಗಳಲ್ಲಿನ ಆವಿಷ್ಕಾರಗಳನ್ನು, ಮಾರುಕಟ್ಟೆ ಅವಕಾಶಗಳ ಮಹತ್ವ ಮನದಟ್ಟು ಮಾಡಿಕೊಡುವಲ್ಲಿ ತಂತ್ರಜ್ಞಾನ ಶೃಂಗಸಭೆಯು ಗಮನಾರ್ಹ ಯಶಸ್ಸು ಸಾಧಿಸಿದೆ. ಡೀಪ್ಟೆಕ್ ಪ್ರಯೋಜನವು ಬರೀ ಕರ್ನಾಟಕಕ್ಕೆ, ಭಾರತಕ್ಕೆ ಸೀಮಿತವಾಗಿರದೆ ಇಡೀ ವಿಶ್ವಕ್ಕೆ ದೊರೆಯಲಿದೆ ಎಂದು ಅವರು ತಿಳಿಸಿದರು.

ಭವಿಷ್ಯ ರೂಪಿಸುವವರು, ವೆಂಚರ್ ಕ್ಯಾಪಿಟಲಿಸ್ಟ್ ಹೂಡಿಕೆದಾರರು ಸರಕಾರದ ಜೊತೆ ಕೈಜೋಡಿಸಲು ಮುಂದೆ ಬಂದಿರುವುದು ಸ್ವಾಗತಾರ್ಹವಾಗಿದೆ. ನವೋದ್ಯಮಗಳಲ್ಲಿ ವಿಶಿಷ್ಟ ಛಾಪು ಮೂಡಿಸಿರುವ ಕರ್ನಾಟಕವು ಜಾಗತಿಕ ನವೋದ್ಯಮಗಳಲ್ಲಿ ಮುಂಚೂಣಿ ಐದನೆ ಸ್ಥಾನ ಗಳಿಸುವ ಮಹತ್ವಾಕಾಂಕ್ಷೆ ಸಾಕಾರಗೊಳ್ಳಲು ಭವಿಷ್ಯ ರೂಪಿಸುವವರ ಕೊಡುಗೆ ತುಂಬ ಮಹತ್ವದ್ದಾಗಿದೆ ಎಂದು ಅವರು ಉಲ್ಲೇಖಿಸಿದರು.

ಕಾರ್ಯಕ್ರಮದಲ್ಲಿ ಕಿಯೊನಿಕ್ಸ್ ಅಧ್ಯಕ್ಷ ಶರತ್ ಬಚ್ಚೇಗೌಡ, ಮಾಹಿತಿ ಹಾಗೂ ಜೈವಿಕ ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿ ಡಾ.ಎನ್.ಮಂಜುಳ, ನಿರ್ದೇಶಕ ರಾಹಲ್ ಸಂಕನೂರ್ ಸೇರಿದಂತೆ ಪ್ರಮುಖರು ಪಾಲ್ಗೊಂಡಿದ್ದರು.

ಮುಂಬರುವ ವರ್ಷಗಳಲ್ಲಿ ಭಾರತವು ಬಾಹ್ಯಾಂತರಿಕ್ಷ ಕಾರ್ಯಕ್ರಮಗಳಲ್ಲಿ ಗಮನಾರ್ಹವಾಗಿ ತೊಡಗಿಕೊಳ್ಳಲಿದೆ. ಈ ಕ್ಷೇತ್ರದಲ್ಲಿನ ಭಾರತದ ಭವಿಷ್ಯ ಪ್ರಖರವಾಗಿದೆ. ಭಾರತೀಯರು ಹೆಚ್ಚಿನ ಸಂಖ್ಯೆಯಲ್ಲಿ ಗಗನಯಾನ ಕೈಗೊಳ್ಳಿದ್ದಾರೆ. ಈ ಕ್ಷೇತ್ರದಲ್ಲಿನ ನವೋದ್ಯಮಗಳಿಗೆ ಉಜ್ವಲ ಭವಿಷ್ಯ ಇದೆ. ದೇಶದ 300 ನವೋದ್ಯಮಗಳು ಈಗಾಗಲೇ ಈ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಮುಂಬರುವ ವರ್ಷಗಳಲ್ಲಿ ಇಂತಹ ನವೋದ್ಯಮಗಳ ಸಂಖ್ಯೆ ಗಮನಾರ್ಹವಾಗಿ ಹೆಚ್ಚಲಿದೆ.

- ಶುಭಾಂಶು ಶುಕ್ಲಾ, ಗಗನಯಾನಿ

ನವೋದ್ಯಮಗಳಿಗೆ ವಿಶ್ವಾಸಾರ್ಹತೆಯೇ ಮುಖ್ಯ. ಉದ್ಯೋಗಿಗಳು, ಗ್ರಾಹಕರು, ಸರಕಾರದ ಜೊತೆ ವಿಶ್ವಾಸಾರ್ಹತೆಯಿಂದ ವರ್ತಿಸುವುದನ್ನು ರೂಢಿಸಿಕೊಂಡರೆ ಯಶಸ್ಸು ಕಟ್ಟಿಟ್ಟ ಬುತ್ತಿ. ಉದ್ಯಮ ವಹಿವಾಟಿನಲ್ಲಿ ವಿಶ್ವಾಸಾರ್ಹತೆ ರೂಢಿಸಿಕೊಂಡರೆ ಹಣ, ಸಂಪತ್ತು ಯಶಸ್ಸು ತನ್ನಷ್ಟಕ್ಕೆ ತಾವೇ ಹಿಂಬಾಲಿಸಿಕೊಂಡು ಬರುತ್ತವೆ.

-ಅಂಕೂರ್ ವಾರಿಕು, ಲೇಖಕ

ಭಾರತದ ಮಹಿಳಾ ಕ್ರಿಕೆಟ್ ತಂಡವು ಏಕದಿನ ವಿಶ್ವ ಕಪ್ ಗೆದ್ದ ನಂತರ ಹೆಣ್ಣು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಕ್ರಿಕೆಟ್‍ನತ್ತ ಆಕರ್ಷಿತರಾಗುತ್ತಿದ್ದಾರೆ. ಕ್ರೀಡಾಂಗಣಕ್ಕೆ ಮಹಿಳೆಯರು, ಹೆಣ್ಣು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿರುವುದು ಸ್ವಾಗತಾರ್ಹ ಬೆಳವಣಿಗೆಯಾಗಿದೆ.

-ರಿಚಾ ಘೋಷ್, ಕ್ರಿಕೆಟ್ ಆಟಗಾರ್ತಿ

ಕ್ರೀಡಾಂಗಣದಲ್ಲಿ ಒತ್ತಡವನ್ನು ಸಮಚಿತ್ತದಿಂದ ಎದುರಿಸಿದರೆ ಸೋಲನ್ನೂ ಗೆಲುವಾಗಿ ಬದಲಾಯಿಸಬಹುದು. ಕ್ರೀಡೆಯಲ್ಲಿನ ಸೋಲು ಹಲವಾರು ಪಾಠ ಕಲಿಸುತ್ತದೆ. ಯಾವುದೇ ಕ್ಷೇತ್ರದಲ್ಲಿರಲಿ ಸೋಲಿನಿಂದ ಧೃತಿಗೆಡಬಾರದು.

-ಸಾನಿಯಾ ಮಿರ್ಝಾ, ಟೆನಿಸ್ ತಾರೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X