Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬೆಟ್ಟಿಂಗ್ ಆರೋಪ; ಗೃಹ ಸಚಿವ...

ಬೆಟ್ಟಿಂಗ್ ಆರೋಪ; ಗೃಹ ಸಚಿವ ಜಿ.ಪರಮೇಶ್ವರ್, ತುಮಕೂರು ಡಿಸಿ ವಿರುದ್ಧ ತನಿಖೆಗೆ ಜನಪ್ರತಿ‌ನಿಧಿಗಳ ಕೋರ್ಟ್ ಆದೇಶ

ವಾರ್ತಾಭಾರತಿವಾರ್ತಾಭಾರತಿ21 April 2026 8:31 PM IST
share
ಬೆಟ್ಟಿಂಗ್ ಆರೋಪ; ಗೃಹ ಸಚಿವ ಜಿ.ಪರಮೇಶ್ವರ್, ತುಮಕೂರು ಡಿಸಿ ವಿರುದ್ಧ ತನಿಖೆಗೆ ಜನಪ್ರತಿ‌ನಿಧಿಗಳ ಕೋರ್ಟ್ ಆದೇಶ

​ಬೆಂಗಳೂರು: ತುಮಕೂರು ನಗರದಲ್ಲಿ ಕಳೆದ ವರ್ಷ ಅಕ್ಟೋಬರ್‌ನಲ್ಲಿ ನಡೆದಿದ್ದ ಕಬಡ್ಡಿ ಪಂದ್ಯಾವಳಿಯಲ್ಲಿ ಕಾನೂನುಬಾಹಿರ ಬೆಟ್ಟಿಂಗ್‌ನಲ್ಲಿ ತೊಡಗಿಸಿಕೊಂಡ ಆರೋಪಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ.ಪರಮೇಶ್ವರ್ ಹಾಗೂ ತುಮಕೂರು ಜಿಲ್ಲಾಧಿಕಾರಿಗಳ ವಿರುದ್ಧ ಎಫ್ಐ‌ಆರ್ ದಾಖಲಿಸಿ ತನಿಖೆ ನಡೆಸುವಂತೆ ಜನಪ್ರತಿ‌ನಿಧಿಗಳ ವಿಶೇಷ‌ ನ್ಯಾಯಾಲಯ ಆದೇಶಿಸಿದೆ.

ಈ ಸಂಬಂಧ ​ಎಚ್.ಆರ್. ನಾಗಭೂಷಣ್ ಎಂಬುವವರು ಸಲ್ಲಿಸಿದ್ದ ಖಾಸಗಿ ದೂರನ್ನು ಮಂಗಳವಾರ ವಿಚಾರಣೆ ನಡೆಸಿದ ಬೆಂಗಳೂರಿನ 42ನೇ ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್‌ (ಎಸಿಜೆಎಂ) ಕೆ.ಎನ್‌. ಶಿವಕುಮಾರ್ ಅವರು ಪ್ರಕರಣದ ಸಂಬಂಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ತುಮಕೂರಿನ ಕೊರಟಗೆರೆ ತಾಲೂಕಿನ‌ ಕೊಡಿಗೇಹಳ್ಳಿ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್‌ಗೆ ನಿರ್ದೇಶಿಸಿ, ವಿಚಾರಣೆಯನ್ನು ಏಪ್ರಿಲ್ 30ಕ್ಕೆ ಮುಂದೂಡಿದ್ದಾರೆ.

ಪ್ರಕರಣದ ದಾಖಲೆಗಳನ್ನು ಗಮನಿಸಿದರೆ, ಮೇಲ್ನೋಟಕ್ಕೆ ಇದೊಂದು ತನಿಖೆಗೆ ಅರ್ಹವಾದ ಪ್ರಕರಣವಾಗಿದೆ. ದೂರುದಾರರು ಒದಗಿಸಿರುವ ಪತ್ರಿಕಾ ವರದಿಗಳನ್ನು ಗಮನಿಸದೆ ಅಥವಾ ದೂರುದಾರರಿಂದ ಯಾವುದೇ ಸಾಕ್ಷ್ಯಗಳನ್ನು ಪಡೆಯದೆ ಪೊಲೀಸರು ದೂರನ್ನು ಮುಕ್ತಾಯಗೊಳಿಸಿದ್ದಾರೆ. ದೂರುದಾರರು ಆರೋಪಿಗಳ ವಿರುದ್ಧ ಬೆಟ್ಟಿಂಗ್‌ನಲ್ಲಿ ತೊಡಗಿದ ಆರೋಪ ಮಾಡಿದ್ದಾರೆ. ಇದು ಶಾಸಕರ ಅಥವಾ ಜಿಲ್ಲಾಧಿಕಾರಿಗಳ ಅಧಿಕೃತ ಕರ್ತವ್ಯದ ಭಾಗವಲ್ಲ. ಆದ್ದರಿಂದ, ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಸಂಬಂಧಪಟ್ಟ ಪ್ರಾಧಿಕಾರ ಅಥವಾ ಸರ್ಕಾರದ ಪೂರ್ವಾನುಮತಿಯ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿರುವ ನ್ಯಾಯಾಲಯ, ಆರೋಪಿಗಳ ವಿರುದ್ಧ ಬಿಎನ್‌ಎಸ್‌ಎಸ್ ಸೆಕ್ಷನ್ 175(3) ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ಪೊಲೀಸರಿಗೆ ನಿರ್ದೇಶಿಸಿದೆ. ಜತೆಗೆ, ಕೈಗೊಂಡ ಕ್ರಮದ ಬಗ್ಗೆ ಮುಂದಿನ ವಿಚಾರಣೆ ವೇಳೆ ಈ ಸಂಬಂಧ ವರದಿ ಸಲ್ಲಿಸುವಂತೆ ಪೊಲೀಸರಿಗೆ ಸೂಚಿಸಿದೆ.

ದೂರುದಾರರ ಆರೋಪವೇನು?

ಕಳೆದ ವರ್ಷ ಅಕ್ಟೋಬರ್ 19ರಂದು ತುಮಕೂರು ನಗರದಲ್ಲಿ ನಡೆದ ಕಬಡ್ಡಿ ಪಂದ್ಯದ ವೇಳೆ ಕೊರಟೆಗೆರೆ ಶಾಸಕರೂ ಆದ ಗೃಹ ಸಚಿವ ಜಿ. ಪರಮೇಶ್ವರ್ ಹಾಗೂ ತುಮಕೂರು ಜಿಲ್ಲಾಧಿಕಾರಿಗಳು ಗೆದ್ದ ತಂಡವಾದ ದಕ್ಷಿಣ ಕನ್ನಡ ತಂಡದ ವಿರುದ್ಧ 500 ರೂ. ಬೆಟ್ಟಿಂಗ್ ಕಟ್ಟಿದ್ದಾರೆ ಹಾಗೂ ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಈ ಮೂಲಕ ದೊಡ್ಡ ಮಟ್ಟದಲ್ಲಿ ಸಾರ್ವಜನಿಕರನ್ನು ಬೆಟ್ಟಿಂಗ್‌ಗೆ ಪ್ರೇರೇಪಿಸಿದ್ದಾರೆ ಎಂದು ಖಾಸಗಿ ದೂರಿನಲ್ಲಿ ಆರೋಪಿಸಿದ್ದ ನಾಗಭೂಷಣ್, ಪ್ರಕರಣಕ್ಕೆ ಸಂಬಂಧಿಸಿದ ಪತ್ರಿಕಾ ವರದಿಗಳ ಪ್ರತಿ ಹಾಗೂ ಆರೋಪಿಗಳ ವಿರುದ್ಧ ಕ್ರಮ ಜರುಗಿಸುವಂತೆ ಕೋರಿ ಸಲ್ಲಿಸಲಾಗಿದ್ದ ದೂರನ್ನು 'ಆಧಾರರಹಿತ' ಎಂಬ ಕಾರಣ ನೀಡಿ ಮುಕ್ತಾಯಗೊಳಿಸಿ 2025ರ ಅಕ್ಟೋಬರ್ 29ರಂದು ಕೊಡಿಗೇಹಳ್ಳಿ ಪೊಲೀಸರು ನೀಡಿದ್ದ ಹಿಂಬರಹದ ಪ್ರತಿಗಳನ್ನೂ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

Tags

BettingCourtInvestigationG.ParameshwarTumakuru DC
share
ವಾರ್ತಾಭಾರತಿ
ವಾರ್ತಾಭಾರತಿ
Next Story
X