Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ʼಬಿಯಾಂಡ್ ಬೆಂಗಳೂರುʼ ಕೈಗಾರಿಕಾ...

ʼಬಿಯಾಂಡ್ ಬೆಂಗಳೂರುʼ ಕೈಗಾರಿಕಾ ಅಭಿವೃದ್ಧಿಗೆ ಐದು ನಗರ ಗುರುತಿಸಲು ಸಿಎಂ ಸೂಚನೆ

ವಾರ್ತಾಭಾರತಿವಾರ್ತಾಭಾರತಿ28 Aug 2026 5:09 PM IST
share
  • ʼಬಿಯಾಂಡ್ ಬೆಂಗಳೂರುʼ ಕೈಗಾರಿಕಾ ಅಭಿವೃದ್ಧಿಗೆ ಐದು ನಗರ ಗುರುತಿಸಲು ಸಿಎಂ ಸೂಚನೆ
  • ʼಬಿಯಾಂಡ್ ಬೆಂಗಳೂರುʼ ಕೈಗಾರಿಕಾ ಅಭಿವೃದ್ಧಿಗೆ ಐದು ನಗರ ಗುರುತಿಸಲು ಸಿಎಂ ಸೂಚನೆ

ಬೆಂಗಳೂರು : ರಾಜ್ಯದ ವಿವಿಧ ಭಾಗಗಳಲ್ಲಿ ಕೈಗಾರಿಕಾ ಅಭಿವೃದ್ಧಿಯ ಉದ್ದೇಶದಿಂದ ಬೆಂಗಳೂರನ್ನು ಹೊರತು ಪಡಿಸಿ ಬೇರೆ ಐದು ನಗರಗಳನ್ನು ಗುರುತಿಸುವಂತೆ ಸಿಎಂ ಡಿ.ಕೆ. ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ರಾಜ್ಯದ ವಿವಿಧ ನಗರಗಳಲ್ಲಿ ಉದ್ಯೋಗ ಸೃಷ್ಟಿಯ ಉದ್ದೇಶದಿಂದ ಹೂಡಿಕೆದಾರರಿಗೆ ವಿಶೇಷ ರಿಯಾಯಿತಿ ಸೌಲಭ್ಯಗಳನ್ನು ನೀಡುವ ಮೂಲಕ ಕೈಗಾರಿಕೆಗಳಿಗೆ ಉತ್ತೇಜನ ನೀಡಲು ಉದ್ದೇಶಿಸಲಾಗಿದೆ. ಇದಕ್ಕೆ ಸೂಕ್ತ ಐದು ನಗರಗಳನ್ನು ಗುರುತಿಸುವಂತೆ ತಿಳಿಸಿದರು.

ಏಕಗವಾಕ್ಷಿ ಅನುಮೋದನೆ ಬಲಪಡಿಸಿ

ಕೈಗಾರಿಕೋದ್ಯಮಗಳ ಸ್ಥಾಪನೆಗೆ ಏಕಗವಾಕ್ಷಿ ಅನುಮೋದನೆಯ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಲು ಸಂಬಂಧಿಸಿದ ಎಲ್ಲ ಇಲಾಖೆಗಳಿಗೆ ನಿಗದಿತ ಕಾಲ ಮಿತಿಯೊಳಗೆ ಅನುಮೋದನೆ ಪ್ರಕ್ರಿಯೆ ಪೂರ್ಣಗೊಳಿಸಲು ಸೂಚನೆ ನೀಡಿದರು. ಈ ಕುರಿತು ಆಯಾ ಇಲಾಖಾ ಸಚಿವರೊಂದಿಗೆ ಚರ್ಚಿಸುವುದಾಗಿ ತಿಳಿಸಿದರು.

ಈ ವ್ಯವಸ್ಥೆಯಲ್ಲಿ 22 ಇಲಾಖೆಗಳು ಹಾಗೂ 119 ಸೇವೆಗಳನ್ನು ಸಂಯೋಜಿಸಲಾಗಿದ್ದು, ಡಿಜಿಟಲ್ ಹಾಗೂ ಸಮಯೋಚಿತ ಅನುಮೋದನೆಗೆ ಒತ್ತು ನೀಡಲಾಗಿದೆ. ನೀತಿ ಆಯೋಗದ ಹೂಡಿಕೆದಾರ ಸ್ನೇಹಿ ಸೂಚ್ಯಂಕದಲ್ಲಿ ಕರ್ನಾಟಕ 9ನೇ ಸ್ಥಾನದಲ್ಲಿದೆ. ಇದನ್ನು ಇನ್ನಷ್ಟು ಉತ್ತಮ ಪಡಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಆಂಧ್ರ ಪ್ರದೇಶ, ಉತ್ತರ ಪ್ರದೇಶ, ತಮಿಳುನಾಡು ಹಾಗೂ ಮಧ್ಯಪ್ರದೇಶ ಮತ್ತಿತರ ರಾಜ್ಯಗಳಲ್ಲಿ ಹೂಡಿಕೆ ಆಕರ್ಷಿಸಲು ಕೈಗೊಳ್ಳುತ್ತಿರುವ ಕ್ರಮಗಳ ಕುರಿತು ಸಹ ಚರ್ಚಿಸಲಾಯಿತು.

ಹೂಡಿಕೆದಾರರು ರಾಜ್ಯದಿಂದ ಅಪೇಕ್ಷಿಸುವ ಸುಧಾರಣೆಗಳ ಕುರಿತು ಸಮಾಲೋಚಿಸಲಾಯಿತು.

ಮೈಸೂರು, ಮಂಗಳೂರು, ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಕಲಬುರಗಿ ಬಿಯಾಂಡ್ ಬೆಂಗಳೂರು ಕ್ಲಸ್ಟರ್ ಗಳಾಗಿ ಅಭಿವೃದ್ಧಿ ಪಡಿಸಲಾಗುತ್ತಿದೆ. ಸೆಮಿಕಂಡಕ್ಟರ್ಸ್, ಏರೋಸ್ಪೇಸ್ & ಡಿಫೆನ್ಸ್, ಕ್ಲೀನ್ ಮೊಬಿಲಿಟಿ/ ಸೆಲ್ ಉತ್ಪಾದನೆ, ಇತರ ಉದಯೋನ್ಮುಖ ವಲಯಗಳಲ್ಲಿ ಹೂಡಿಕೆಗೆ ವಿಶೇಷ ಉತ್ತೇಜನ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ವಿವರಿಸಿದರು.

ರಾಜ್ಯದಲ್ಲಿ ಉತ್ಪಾದನಾ ವಲಯವನ್ನು ಇನ್ನಷ್ಟು ಸುಧಾರಿಸಲು “ಉತ್ಪಾದನಾ ಮಂಥನ” ಎಂಬ ಸಮಾಲೋಚನಾ ಸಭೆಯಲ್ಲಿ 80 ಸಿಇಓಗಳೊಂದಿಗೆ ಚರ್ಚಿಸಲಾಯಿತು. ಸಭೆಯಲ್ಲಿ ಸ್ವೀಕರಿಸಲಾದ 55 ಸಲಹೆಗಳಲ್ಲಿ 35 ಸಲಹೆಗಳನ್ನು ಈಗಾಗಲೇ ಬಗೆಹರಿಸಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಸಿಎಂ ಆರ್ಥಿಕ ಸಲಹೆಗಾರ ಎಲ್.ಕೆ. ಅತೀಕ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್ ಮತ್ತಿತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Tags

‘Beyond Bangalore’ Mission
share
ವಾರ್ತಾಭಾರತಿ
ವಾರ್ತಾಭಾರತಿ
Next Story
X