Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಭದ್ರಾವತಿ ಉಕ್ಕು ಕಾರ್ಖಾನೆ...

ಭದ್ರಾವತಿ ಉಕ್ಕು ಕಾರ್ಖಾನೆ ಪುನಶ್ಚೇತನಕ್ಕೆ ಕೇಂದ್ರ ಸರಕಾರ ಒಪ್ಪಿಗೆ : ಎಚ್‍ಡಿಕೆ

ವಾರ್ತಾಭಾರತಿವಾರ್ತಾಭಾರತಿ23 May 2025 7:46 PM IST
share
ಭದ್ರಾವತಿ ಉಕ್ಕು ಕಾರ್ಖಾನೆ ಪುನಶ್ಚೇತನಕ್ಕೆ ಕೇಂದ್ರ ಸರಕಾರ ಒಪ್ಪಿಗೆ : ಎಚ್‍ಡಿಕೆ

ಹೊಸದಿಲ್ಲಿ : ಭದ್ರಾವತಿಯ ಸರ್.ಎಂ.ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು ಪುನಶ್ಚೇತನಗೊಳಿಸುವ ಪ್ರಯತ್ನ ನಡೆಯುತ್ತಿದ್ದು, ವಿಸ್ತೃತ ಯೋಜನಾ ವರದಿ ಎರಡು ತಿಂಗಳಲ್ಲಿ ಸಿದ್ಧವಾಗಲಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಶುಕ್ರವಾರ ದಿಲ್ಲಿಯಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಮಾಡುವ ಪ್ರಶ್ನೆ ಇಲ್ಲ. ಈ ವರ್ಷಾಂತ್ಯಕ್ಕೆ ಪುನಶ್ಚೇತನ ಯೋಜನೆಯನ್ನು ಕಾರ್ಯರೂಪಕ್ಕೆ ತರಲಾಗುವುದು. ಪುನಃ ಇಡೀ ಕಾರ್ಖಾನೆಯನ್ನು ಹೊಸದಾಗಿ ಅತ್ಯಾಧುನಿಕವಾಗಿ ನಿರ್ಮಾಣ ಮಾಡಲಾಗುವುದು. ಪ್ರಧಾನಿ ಮೋದಿ ಅವರೇ ಈ ಯೋಜನೆಗೆ ಅಡಿಗಲ್ಲು ಹಾಕಲಿದ್ದಾರೆ ಎಂದು ಹೇಳಿದರು.

ಇಡೀ ಕಾರ್ಖಾನೆಯನ್ನು ಹೊಸದಾಗಿ ಮರು ನಿರ್ಮಾಣ ಮಾಡಬೇಕಿದೆ. ಸುಮಾರು 8 ರಿಂದ 10ಸಾವಿರ ಕೋಟಿ ರೂ.ಹೂಡಿಕೆ ಮಾಡುವ ಬಗ್ಗೆ ಚಿಂತನೆ ನಡೆದಿದೆ. ಈಗಾಗಲೇ ಆ ಕಾರ್ಖಾನೆ ಭಾರತೀಯ ಉಕ್ಕು ಪ್ರಾಧಿಕಾರದ ಅಧೀನದಲ್ಲಿದೆ. ಮುಂದಿನ ದಿನಗಳಲ್ಲಿ ರಾಷ್ಟ್ರದಲ್ಲಿ ಉಕ್ಕು ಕ್ಷೇತ್ರದಲ್ಲಿ ಪ್ರಾಧಿಕಾರ ಒಂದು ಲಕ್ಷ ಕೋಟಿ ರೂ. ಮೊತ್ತ ಹೂಡಿಕೆ ಮಾಡಲಿದೆ. ಅದೇ ಸಂದರ್ಭದಲ್ಲಿ ವಿಐಎಸ್‍ಎಲ್ ಕಾರ್ಖಾನೆಯನ್ನು ಪುನಶ್ಚೇತನಗೊಳಿಸಲಾಗುವುದು ಎಂದು ಅವರು ಹೇಳಿದರು.

ಪ್ರಧಾನಿ ಮೋದಿ ಅವರು 2030ರ ಹೊತ್ತಿಗೆ ದೇಶೀಯವಾಗಿ ವಾರ್ಷಿಕ 300 ದಶಲಕ್ಷ ಟನ್ ಸ್ಟೀಲ್ ಉತ್ಪಾದನೆ ಗುರಿ ನಿಗದಿ ಮಾಡಿದ್ದು, ಅದಕ್ಕೆ ಪೂರಕವಾಗಿ ಸರಕಾರಿ ಸ್ವಾಮ್ಯದಲ್ಲಿರುವ ಉಕ್ಕು ಸ್ಥಾವರಗಳನ್ನು ಬಲಪಡಿಸುವ ಕೆಲಸವನ್ನು ಕೇಂದ್ರ ಸರಕಾರ ಮಾಡುತ್ತಿದೆ ಎಂದು ಕುಮಾರಸ್ವಾಮಿ ಇದೇ ವೇಳೆ ತಿಳಿಸಿದರು.

ಬಡವರು, ಮಧ್ಯಮ ವರ್ಗದ ಜನರಿಗೆ ಕಡಿಮೆ ಬೆಲೆಯಲ್ಲಿ ಸಿಗುತ್ತಿದ್ದ ಔಷಧಗಳನ್ನು ತಪ್ಪಿಸಿ ಯಾವುದೋ ಲಾಬಿಗೆ ಅನುಕೂಲ ಮಾಡಿಕೊಡುವ ಕುತಂತ್ರ ಇದರ ಹಿಂದೆ ಅಡಗಿರುವಂತೆ ತೋರುತ್ತಿದೆ. ಜನೌಷಧ ಮಳಿಗೆಗಳನ್ನು ತೆರವು ಮಾಡಿ ಮದ್ಯವನ್ನು ಅಥವಾ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತೀರಾ? ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು

ಇವರು ತಮ್ಮ ಗ್ಯಾರಂಟಿ ಯೋಜನೆಗಳು ವಿಶ್ವಕ್ಕೆ ಮಾದರಿ ಎಂದು ಹೇಳಿಕೊಳ್ಳುತ್ತಾರೆ. ಆದರೆ, ಜನರ ಹತ್ತಿರಕ್ಕೆ ಹೋಗಿ ಒಮ್ಮೆ ನೋಡಲಿ. ಅಸಲಿ ಸಮಸ್ಯೆ ಏನೆಂದು ಗೊತ್ತಾಗುತ್ತದೆ. ಈ ಸರಕಾರಕ್ಕೆ ನಾಚಿಕೆಯಾಗಬೇಕು. ಜನರಿಗೆ ಉಚಿತ ಮಾತ್ರೆ ಕೊಡುವ ಯೋಗ್ಯತೆ ನಿಮ್ಮ ಸರಕಾರಕ್ಕೆ ಇಲ್ಲ. ಮುಡ ಪ್ರಕರಣದಲ್ಲಿ ಸಿದ್ದರಾಮಯ್ಯ ಪರ ವಕೀಲ ಕಪಿಲ್ ಸಿಬಲ್ ವಾದ ಮಾಡಲು 1.49 ಕೋಟಿ ರೂ.ಹಣ ಕೊಡ್ತಾ ಇದ್ದೀರಿ. ಆ ಹಣ ಯಾರದು? ಸಿದ್ದರಾಮಯ್ಯ ಮನೆಯ ಹಣವಾ? ಎಂದು ಅವರು ಪ್ರಶ್ನಿಸಿದರು.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X