ರೌಡಿಶೀಟರ್ ಹತ್ಯೆ ಪ್ರಕರಣ | ಕೊಲೆ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ : ಭೈರತಿ ಬಸವರಾಜ್
"ಏಕಾಏಕಿ ನನ್ನ ವಿರುದ್ದ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ"

ಭೈರತಿ ಬಸವರಾಜ್
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ ಸಂಬಂಧ ಎಫ್ಐಆರ್ ದಾಖಲಿಸುವ ಮೊದಲು ನನ್ನಿಂದ ಮಾಹಿತಿ ಪಡೆದಿದ್ದಾರಾ?ಎಂದು ಬಿಜೆಪಿ ಶಾಸಕ ಭೈರತಿ ಬಸವರಾಜ್ ಪ್ರಶ್ನಿಸಿದ್ದಾರೆ.
ಬುಧವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಲೆ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಏಕಾಏಕಿ ನನ್ನ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಯಾರೇ ದೂರು ಕೊಟ್ಟರೂ ಎಫ್ಐಆರ್ ದಾಖಲಿಸಬಹುದಾ? ದಾಖಲಿಸುವುದಕ್ಕೂ ಮುನ್ನ ನನ್ನಿಂದ ಮಾಹಿತಿ ಪಡೆದಿದ್ದಾರಾ?ಎಂದು ಪ್ರಶ್ನಿಸಿದ್ದಾರೆ.
ಇದರ ಹಿಂದೆ ರಾಜಕೀಯ ದುರುದ್ದೇಶ ಇರಬಹುದು. ನಾನು ಕಾನೂನು ಹೋರಾಟ ಮಾಡುತ್ತೇನೆ. ಅಲ್ಲದೆ, ಕೊಲೆಯಾದವನ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಪೊಲೀಸರು ವಿವಾರಣೆ ಮಾಡದೇ ಪ್ರಕರಣ ದಾಖಲಿಸಿದ್ದಾರೆ.ಇದರ ಹಿಂದೆ ಕುತಂತ್ರ ಅಡಗಿದೆ ಎಂದು ಟೀಕಿಸಿದರು.
Next Story





