Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬೀದರ್ ಕರ್ನಾಟಕದಲ್ಲೆ ಉಳಿಯಲು ಭೀಮಣ್ಣ...

ಬೀದರ್ ಕರ್ನಾಟಕದಲ್ಲೆ ಉಳಿಯಲು ಭೀಮಣ್ಣ ಖಂಡ್ರೆ ಹೋರಾಟವೂ ಕಾರಣ: ಸಿಎಂ ಸಿದ್ದರಾಮಯ್ಯ

"ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಾಪಾಡಿಕೊಳ್ಳಬೇಕಾದರೆ ಸಾಮಾಜಿಕ, ಆರ್ಥಿಕ ತಾರತಮ್ಯ ಹೋಗಬೇಕು"

ವಾರ್ತಾಭಾರತಿವಾರ್ತಾಭಾರತಿ2 Dec 2023 6:57 PM IST
share
ಬೀದರ್ ಕರ್ನಾಟಕದಲ್ಲೆ ಉಳಿಯಲು ಭೀಮಣ್ಣ ಖಂಡ್ರೆ ಹೋರಾಟವೂ ಕಾರಣ: ಸಿಎಂ ಸಿದ್ದರಾಮಯ್ಯ

ಬೀದರ್: ಭೀಮಣ್ಣ ಖಂಡ್ರೆ ಹುಟ್ಟು ಹೋರಾಟಗಾರರು. ಬೀದರ್ ಕರ್ನಾಟಕದಲ್ಲೆ ಉಳಿಯಲು ಭೀಮಣ್ಣ ಖಂಡ್ರೆ ಅವರ ಹೋರಾಟವೂ ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಶನಿವಾರ ಬೀದರ್ ನಲ್ಲಿ ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಮತ್ತು ಡಾ.ಭೀಮಣ್ಣ ಖಂಡ್ರೆ ಜನ್ಮ ಶತಮಾನೋತ್ಸವ ಸಮಿತಿ ಜಂಟಿಯಾಗಿ ಹಮ್ಮಿಕೊಂಡಿದ್ದ ಭೀಮಣ್ಣ ಖಂಡ್ರೆ ಜನ್ಮ ಶತಮಾನೋತ್ಸವವನ್ನು ಉದ್ಘಾಟಿಸಿ ‘ಲೋಕನಾಯಕ’ ಅಭಿನಂದನಾ ಗ್ರಂಥವನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು.

ಭೀಮಣ್ಣ ಖಂಡ್ರೆ, ಮಹಾತ್ಮಗಾಂಧಿಯವರ ಕರೆಗೆ ಓಗೊಟ್ಟು ಸ್ವಾತಂತ್ರ್ಯ ಹೋರಾಟದಲ್ಲಿ ಧುಮುಕಿದರು. ಬಳಿಕ ಕರ್ನಾಟಕ ಏಕೀಕರಣ ಚಳವಳಿಯಲ್ಲೂ ಸಕ್ರಿಯರಾಗಿ ಬೀದರ್ ಜಿಲ್ಲೆಯನ್ನು ಕರ್ನಾಟಕದಲ್ಲೆ ಉಳಿಸಿಕೊಳ್ಳಲು ರಾಜಿರಹಿತವಾಗಿ ಹೋರಾಟ ನಡೆಸಿದರು. ಇವರ ಹೋರಾಟದ ಹೆಜ್ಜೆಗಳು ಈ ಮಣ್ಣಿನಲ್ಲಿ ದಾಖಲಾಗಿದೆ. ಭೀಮಣ್ಣ ಖಂಡ್ರೆ ಸಮಾಜದ ಋಣ ತೀರಿಸಿ ಸಾರ್ಥಕ ಬದುಕನ್ನು ಸಾಗಿಸಿದ್ದಾರೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಬಸವಣ್ಣನವರ ಅಪ್ಪಟ ಅನುಯಾಯಿಯಾಗಿರುವ ಖಂಡ್ರೆ ವಚನ ಸಾಹಿತ್ಯವನ್ನು ಇಡೀ ರಾಜ್ಯಕ್ಕೆ ಪಸರಿಸಲು ಶ್ರಮಿಸಿದ್ದಾರೆ. ಜಾತಿ ತಾರತಮ್ಯ ಇಲ್ಲದ ಸಮ ಸಮಾಜದ ಆಶಯ ವಚನ ಸಾಹಿತ್ಯದ್ದಾಗಿದೆ. 850 ವರ್ಷಗಳ ಹಿಂದೆ ಬಸವಣ್ಣ ಅನುಭವ ಮಂಟಪ ಸ್ಥಾಪಿಸಿ ಮೇಲು ಕೀಳಿನ ಸಮಾಜವನ್ನು ಅಳಿಸಿ ಸಮಾನಾಂತರ ಸಮಾಜಕ್ಕೆ ಅಡಿಪಾಯ ಹಾಕಿದರು. ಈ ಪರಂಪರೆಯಲ್ಲಿ ಖಂಡ್ರೆ ಸಾಗಿ ಬಂದಿದ್ದಾರೆ ಎಂದು ಸಿಎಂ ಹೇಳಿದರು.

ಬಸವಾದಿ ಶರಣರ ಕೆಲಸ ಮತ್ತು ಸಾಹಿತ್ಯ ಈ ಸಮಾಜದಲ್ಲಿ ಜಾತಿ ತಾರತಮ್ಯ ಇರುವವರೆಗೂ ಶಾಶ್ವತವಾಗಿ ಉಳಿಯಲಿದೆ. ಶರಣರಿಂದ ಅಂಬೇಡ್ಕರ್ ವರೆಗೂ ಮಹನೀಯರು ನಡೆಸಿದ ಹೋರಾಟದಿಂದ ರೂಪುಗೊಂಡಿರುವ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ನಾವು ಕಾಪಾಡಿಕೊಳ್ಳಬೇಕಾದರೆ ಸಾಮಾಜಿಕ, ಆರ್ಥಿಕ ತಾರತಮ್ಯ ಹೋಗಬೇಕು ಎಂದು ಅವರು ತಿಳಿಸಿದರು.

ಶತಮಾನೋತ್ಸವ ಸ್ವಾಗತ ಸಮಿತಿ ಅಧ್ಯಕ್ಷ ಡಾ.ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆ ವಹಿಸಿದ್ದ ಈ ಕಾರ್ಯಕ್ರಮದ ಸಾನ್ನಿಧ್ಯವನ್ನು ತರಳಬಾಳು ಸಿರಿಗೆರೆ ಶ್ರೀಶಿವಮೂರ್ತಿ ಸ್ವಾಮಿ ವಹಿಸಿದ್ದರು. ಸುತ್ತೂರು ಶಿವರಾತ್ರಿ ದೇಶೀಕೇಂದ್ರ ಸ್ವಾಮಿ, ಆಂಧ್ರ ಶ್ರೀಶೈಲ ಪೀಠದ ಡಾ.ಚನ್ನಸಿದ್ದರಾಮ ಪಂಡಿತಾರಾಧ್ಯ ಸ್ವಾಮಿ ಸೇರಿದಂತೆ ನೂರಕ್ಕೂ ಅಧಿಕ ಸ್ವಾಮಿಗಳು, ಸಚಿವರಾದ ಎಚ್.ಕೆ.ಪಾಟೀಲ್, ಕೆ.ಜೆ.ಜಾರ್ಜ್, ಎಂ.ಬಿ. ಪಾಟೀಲ್, ರಹೀಂ ಖಾನ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X