Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಜೂ.22ಕ್ಕೆ ಬಿಡದಿ ಟೌನ್‍ಶಿಪ್ ಯೋಜನೆ...

ಜೂ.22ಕ್ಕೆ ಬಿಡದಿ ಟೌನ್‍ಶಿಪ್ ಯೋಜನೆ ಕೈಬಿಡಲು ಆಗ್ರಹಿಸಿ ‘ಬೈರಮಂಗಲ ಚಲೋ’

ವಾರ್ತಾಭಾರತಿವಾರ್ತಾಭಾರತಿ13 Jun 2026 9:04 PM IST
share
ಜೂ.22ಕ್ಕೆ ಬಿಡದಿ ಟೌನ್‍ಶಿಪ್ ಯೋಜನೆ ಕೈಬಿಡಲು ಆಗ್ರಹಿಸಿ ‘ಬೈರಮಂಗಲ ಚಲೋ’

ರಾಮನಗರ/ಬೆಂಗಳೂರು : ರಾಜ್ಯ ಸರಕಾರ ಫಲವತ್ತಾದ ಕೃಷಿ ಭೂಮಿಯನ್ನು ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‍ಶಿಪ್ ಯೋಜನೆಯನ್ನು ಕೂಡಲೇ ಕೈಬಿಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಜೂ.22ರಂದು ಬೈರಮಂಗಲ ಚಲೋ ಹೋರಾಟವನ್ನು ಹಮ್ಮಿಕೊಳ್ಳಲಾಗಿದೆ.

ಶನಿವಾರ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ರೈತ ಸಂಘದ ಉಪಾಧ್ಯಕ್ಷ ಮಲ್ಲಯ್ಯ, ಸರಕಾರ ಯೋಜನೆಗಾಗಿ ಪ್ರಾಥಮಿಕ ಅಧಿಸೂಚನೆ ಹೊರಡಿಸಿದ ಕೂಡಲೇ 3 ಸಾವಿರಕ್ಕೂ ಹೆಚ್ಚು ರೈತರು ಭೂಮಿ ಕೊಡಲು ಒಪ್ಪಿಗೆ ಇಲ್ಲ ಎಂದು ಲಿಖಿತವಾಗಿ ಆಕ್ಷೇಪಣೆಗಳನ್ನು ಸಲ್ಲಿಸಿದ್ದಾರೆ. ಅಷ್ಟೇ ಅಲ್ಲದೇ, ರೈತರು ಅಂದಿನಿಂದಲೂ ಇಂದಿನವರೆಗೂ ನಿರಂತರವಾಗಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸುತ್ತಾ ಬಂದಿದ್ದಾರೆ ಎಂದರು.

ಹಲವು ಜನಪರ ಸಂಘಟನೆಗಳು ಸೇರಿದಂತೆ ಸಂಯುಕ್ತ ಹೋರಾಟ-ಕರ್ನಾಟಕ ಈ ಚಳವಳಿಗೆ ಬೆಂಬಲವಾಗಿ ನಿಂತಿವೆ. ರೈತರ ತೀವ್ರ ವಿರೋಧದ ನಡುವೆಯೂ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾದ ಕೆಲವೇ ದಿನಗಳಲ್ಲಿ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಗೆ ಅಂತಿಮ ಅಧಿಸೂಚನೆ ಹೊರಡಿಸಿರುವುದು ಖಂಡನೀಯ. ಇದನ್ನು ತಡೆಗಟ್ಟದಿದ್ದಲ್ಲಿ ಈ ಗ್ರಾಮಗಳ ರೈತ ಕುಟುಂಬಗಳು ಮತ್ತು ಕಾರ್ಮಿಕ ಕುಟುಂಬಗಳು ಬೀದಿ ಪಾಲಾಗುತ್ತವೆ ಮತ್ತು ಬೆಂಗಳೂರಿಗೆ ಸರಬರಾಜಾಗುತ್ತಿದ್ದ ತರಕಾರಿ, ಹಾಲು, ಮೊಸರು, ಬೆಣ್ಣೆ ಇತರೆ ಉತ್ಪನ್ನಗಳು ನಿಂತುಹೋಗುತ್ತವೆ ಎಂದು ಮಲ್ಲಯ್ಯ ತಿಳಿಸಿದರು.

ಆದುದರಿಂದ ರಾಜ್ಯ ರೈತ ಸಂಘವು ಬಿಡದಿ ಹೋಬಳಿಯ ರೈತರ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಬೆಂಬಲಿಸಿ ಜೂ.22ರಂದು ಬಿಡದಿಯ ಬಿಜಿಎಸ್ ವೃತ್ತದಿಂದ ಕಂಚುಗಾರನಹಳ್ಳಿ, ಭೈರಮಂಗಲದ ಹೋರಾಟದ ಸ್ಥಳದವರೆಗೂ ಬೈಕ್ ಜಾಥಹಮ್ಮಿಕೊಂಡಿದೆ. ಬೆಂ.ದಕ್ಷಿಣ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ರೈತರು ಈ ಚಲೋ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಾರೆ ಎಂದು ಅವರು ಮಾಹಿತಿ ನೀಡಿದರು.

ಹೋರಾಟದಲ್ಲಿ ಶಾಸಕ ದರ್ಶನ್ ಪುಟ್ಟಣ್ಣಯ್ಯ, ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ, ಚಾಮರಸಮಾಲೀಪಾಟೀಲ್, ಸಂಯುಕ್ತ ಹೋರಾಟ ಕರ್ನಾಟಕ ಪದಾಧಿಕಾರಿಗಳಾದ ಎಸ್.ವರಲಕ್ಷ್ಮಿ, ನೂರ್ ಶ್ರೀಧರ್, ಟಿ.ಯಶವಂತ, ರೈತ ಹೋರಾಟಗಾರರಾದ ಜೆ.ಎಂ.ವೀರಸಂಗಯ್ಯ, ಎ.ಎಂ.ಮಹೇಶ್ ಪ್ರಭು, ಎ.ಗೋವಿಂದರಾಜು ಎನ್.ಡಿ.ವಸಂತ ಕುಮಾರ್, ರವಿಕಿರಣ್ ಪುಣಚ ಸೇರಿದಂತೆ ಸಾವಿರರು ಜನ ಭಾಗವಹಿಸಲಿದ್ದಾರೆ ಎಂದು ಮಲ್ಲಯ್ಯ ತಿಳಿಸಿದರು.

ಸಭೆಯಲ್ಲಿ ಪ್ರಗತಿಪರ ಸಂಘಟನೆಗಳ ಅಧ್ಯಕ್ಷ ಕುಮಾರ್ ಸ್ವಾಮಿ, ರೈತ ಸಂಗದ ರಾಜ್ಯ ಸಂಚಾಲಕ ಮುನಿರಾಜು, ಜಿಲ್ಲಾಧ್ಯಕ್ಷರಾದ ಕೃಷ್ಣಯ್ಯ ಚಂದ್ರಶೇಖರ್, ರಮ್ಯ ರಾಮಣ್ಣ, ರತ್ನಮ್ಮ, ನಾಗರಾಜು ಸೇರಿದಂತೆ 9 ಜಿಲ್ಲೆಯ ಪದಾಧಿಕಾರಿಗಳು ಭಾಗವಹಿಸಿದ್ದರು.

Tags

Bidadi Township Project
share
ವಾರ್ತಾಭಾರತಿ
ವಾರ್ತಾಭಾರತಿ
Next Story
X