ಬಿಡದಿ ಟೌನ್‍ಶಿಪ್ ಯೋಜನೆ: ಎರಡನೇ ಹಂತದ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ

ಬೆಂಗಳೂರು : ಬಿಡದಿ ಟೌನ್‍ಶಿಪ್ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರಕಾರ ಎರಡನೇ ಹಂತದ ಭೂಸ್ವಾಧೀನ ಪ್ರಕ್ರಿಯೆಯ ಅಂತಿಮ ಅಧಿಸೂಚನೆಯನ್ನು ಹೊರಡಿಸಿದ್ದು, ನಾಲ್ಕು ಹಳ್ಳಿಗಳ ಒಟ್ಟು 4,940 ಎಕರೆ ಜಮೀನನ್ನು ಯೋಜನೆಗಾಗಿ ಭೂಮಿ ಸ್ವಾಧೀನಪಡಿಸಿಕೊಳ್ಳಲು ಅಧಿಕೃತ ಆದೇಶ ಹೊರಡಿಸಿದೆ.
ಬುಧವಾರ ಸರಕಾರ ಅಧಿಸೂಚನೆ ಹೊರಡಿಸಿದ್ದು, ಹೊಸೂರಿನ 2,390 ಎಕರೆ 12 ಗುಂಟೆ, ಕೆಜಿ ಗೊಲ್ಲರಪಾಳ್ಯದ ಒಟ್ಟು 315 ಎಕರೆ 36 ಗುಂಟೆ, ಬನ್ನಿಗಿರಿ ಗ್ರಾಮದ 775 ಎಕರೆ 8 ಗುಂಟೆ, ಅರಳಾಳುಸಂದ್ರದ 1,460 ಎಕರೆ 21 ಗುಂಟೆ ಜಮೀನನ್ನು ಭೂಸ್ವಾಧೀನಕ್ಕೊಳಪಟ್ಟಿದೆ ಎಂದು ನಗರಾಭಿವೃದ್ಧಿ ಇಲಾಖೆ(ಬಿಡಿಎ ಮತ್ತು ಬೆಂಗಳೂರು-1)ಯ ಸರಕಾರದ ಅಧೀನ ಕಾರ್ಯದರ್ಶಿ ರಾಜೇಶ್ ಎಸ್.ಸೂಳಿಕೇರಿ ಆದೇಶದಲ್ಲಿ ತಿಳಿಸಲಾಗಿದೆ.
Next Story




