Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬಿಡದಿ ಸಮಗ್ರ ಟೌನ್‌ಶಿಪ್; ಭೂಮಾಲೀಕರನ್ನು...

ಬಿಡದಿ ಸಮಗ್ರ ಟೌನ್‌ಶಿಪ್; ಭೂಮಾಲೀಕರನ್ನು ಒಕ್ಕಲೆಬ್ಬಿಸುವುದಿಲ್ಲವೆಂದು ಹೈಕೋರ್ಟ್‌ಗೆ ತಿಳಿಸಿದ ಸರಕಾರ

ವಾರ್ತಾಭಾರತಿವಾರ್ತಾಭಾರತಿ8 Aug 2026 8:41 PM IST
share
ಬಿಡದಿ ಸಮಗ್ರ ಟೌನ್‌ಶಿಪ್; ಭೂಮಾಲೀಕರನ್ನು ಒಕ್ಕಲೆಬ್ಬಿಸುವುದಿಲ್ಲವೆಂದು ಹೈಕೋರ್ಟ್‌ಗೆ ತಿಳಿಸಿದ ಸರಕಾರ

ಬೆಂಗಳೂರು: ಬೆಂಗಳೂರು ದಕ್ಷಿಣ ಜಿಲ್ಲೆಯ ಬಿಡದಿ ವ್ಯಾಪ್ತಿಯಲ್ಲಿನ ಉದ್ದೇಶಿತ ಬಿಡದಿ ಸಮಗ್ರ ಟೌನ್‌ಶಿಪ್‌ ಯೋಜನೆಯಡಿ ಈತನಕ ಭೂಸ್ವಾಧೀನಕ್ಕೆ ಪರಿಹಾರ ಘೋಷಣೆ ಮಾಡಿ ತೀರ್ಪು ಹೊರಡಿಸದೇ ಇರುವ ಹಿನ್ನೆಲೆಯಲ್ಲಿ ಅರ್ಜಿದಾರ ಭೂ ಮಾಲೀಕರನ್ನು ಒಕ್ಕಲೆಬ್ಬಿಸುವುದಿಲ್ಲ ಎಂದು ರಾಜ್ಯ ಸರಕಾರ ಹೈಕೋರ್ಟ್‌ಗೆ ತಿಳಿಸಿದೆ.

ಟೌನ್‌ಶಿಪ್‌ ಯೋಜನೆ ಪ್ರಶ್ನಿಸಿ ಬಿಡದಿ ಹೋಬಳಿಯ ತಾಯಪ್ಪನದೊಡ್ಡಿಯ ಎಸ್‌.ಎಚ್‌. ಹರಿಪ್ರಸಾದ್‌ ಸೇರಿ 18 ಕೃಷಿಕರು ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಆರ್‌. ನಟರಾಜ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ (ಆಗಸ್ಟ್ 7) ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಎ.ವಿ. ನಿಶಾಂತ್‌, ಯೋಜನೆಯ ಭೂ ಸ್ವಾಧೀನ ವೆಚ್ಚ 18 ಸಾವಿರ ಕೋಟಿ ರೂ. ಗಳಷ್ಟಿದ್ದರೆ ರಾಜ್ಯ ಸರಕಾರ ಈ ಯೋಜನೆಗೆ ಸುಮಾರು 33 ಸಾವಿರ ಕೋಟಿ ರೂ. ಗುರಿ ಇರಿಸಿದೆ. ಇದರಲ್ಲಿ ಸಾರ್ವಜನಿಕ ಉದ್ದೇಶದ ಇರಾದೆಯಿಲ್ಲ ಎಂದು ಆಕ್ಷೇಪಿಸಿದರು.

ರಾಜ್ಯ ಸರಕಾರದ ಪರ ಹಾಜರಿದ್ದ ಅಡ್ವೊಕೇಟ್‌ ಜನರಲ್‌ ಕೆ. ಶಶಿಕಿರಣ ಶೆಟ್ಟಿ ಅವರು, ಭೂ ಸ್ವಾಧೀನ ಪ್ರಕ್ರಿಯೆಯಲ್ಲಿ ಈತನಕ ಯಾವುದೇ ಪರಿಹಾರ ನಿರ್ಧಾರ ಮಾಡಿ ತೀರ್ಪು ಹೊರಡಿಸದೇ ಇರುವ ಕಾರಣ ಭೂ ಮಾಲೀಕರನ್ನು ಒಕ್ಕಲೆಬ್ಬಿಸುವುದಿಲ್ಲ ಎಂದು ನ್ಯಾಯಪೀಠಕ್ಕೆ ಭರವಸೆ ನೀಡಿದರಲ್ಲದೆ, ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿದರು.

ಇದನ್ನು ದಾಖಲಿಸಿಕೊಂಡ ನ್ಯಾಯಪೀಠ, ರಾಜ್ಯ ನಗರಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ, ಟೌನ್‌ಶಿಪ್‌ ಯೋಜನೆಯ ಭೂ ಸ್ವಾಧೀನ ಅಧಿಕಾರಿ ಮತ್ತು ಬೆಂಗಳೂರು ದಕ್ಷಿಣ ಜಿಲ್ಲಾಧಿಕಾರಿ ಸೇರಿ ಇತರ ಪ್ರತಿವಾದಿಗಳಿಗೆ ನೋಟಿಸ್‌ ಜಾರಿಗೊಳಿಸಿ, ವಿಚಾರಣೆಯನ್ನು ಆಗಸ್ಟ್‌ 25ಕ್ಕೆ ಮುಂದೂಡಿತು.

Tags

Bidadi TownshipHigh Court
share
ವಾರ್ತಾಭಾರತಿ
ವಾರ್ತಾಭಾರತಿ
Next Story
X