Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬಿಡದಿ ಟೌನ್‍ಶಿಪ್ ಯೋಜನೆ : ಆಡಳಿತಾರೂಢ...

ಬಿಡದಿ ಟೌನ್‍ಶಿಪ್ ಯೋಜನೆ : ಆಡಳಿತಾರೂಢ ಕಾಂಗ್ರೆಸ್- ಪ್ರತಿಪಕ್ಷಗಳ ನಡುವೆ ಆರೋಪ-ಪ್ರತ್ಯಾರೋಪ

ವಾರ್ತಾಭಾರತಿವಾರ್ತಾಭಾರತಿ17 Jun 2026 8:13 PM IST
share
ಬಿಡದಿ ಟೌನ್‍ಶಿಪ್ ಯೋಜನೆ : ಆಡಳಿತಾರೂಢ ಕಾಂಗ್ರೆಸ್- ಪ್ರತಿಪಕ್ಷಗಳ ನಡುವೆ ಆರೋಪ-ಪ್ರತ್ಯಾರೋಪ
ರೈತರ ಹೋರಾಟಕ್ಕೆ ಬಿಜೆಪಿ-ಜೆಡಿಎಸ್ ಬೆಂಬಲ

ಬೆಂಗಳೂರು : ರಾಮನಗರ ತಾಲೂಕಿನ ಬಿಡದಿ ಹೋಬಳಿಯ ‘ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ ಯೋಜನೆ’(ಜಿಬಿಐಟಿ)ಯ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಬೆನ್ನಲ್ಲೆ ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷಗಳ ಮುಖಂಡರ ಮಧ್ಯೆ ಆರೋಪ-ಪ್ರತ್ಯಾರೋಪ ತೀವ್ರವಾಗಿದೆ.

ಈ ಮಧ್ಯೆ ಯೋಜನೆ ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ನೀಡಲು ಬೈರಮಂಗಲಕ್ಕೆ ಭೇಟಿ ನೀಡಿದ ಬಿಜೆಪಿ ನಾಯಕರು ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮತ್ತವರ ಕುಟುಂಬದ ವಿರುದ್ಧ ಯೋಜನಾ ಪ್ರದೇಶದ ಕೆಲವೆಡೆ ಅವಹೇಳನಕಾರಿ ಪೋಸ್ಟರ್‌ ಗಳನ್ನು ಅಂಟಿಸಿರುವುದು ಜಟಾಪಟಿಗೆ ಕಾರಣವಾಗಿದೆ.

ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸರ್ವೀಸ್ ರಸ್ತೆ, ಕೆಳಸೇತುವೆ ಸೇರಿದಂತೆ ಕೆಲವೆಡೆ ಎಚ್.ಡಿ.ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ, ನಿಖಿಲ್, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಪ್ರತಿಪಕ್ಷ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ ವಿರುದ್ಧ ಪೋಸ್ಟರ್‌ ಗಳನ್ನು ಹಾಕಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಚಾಳಿ ಹೋಗಿಲ್ಲ: ಈ ಕುರಿತು ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ‘ಬಿಡದಿ ಭಾಗದಲ್ಲಿ ತನ್ನ ಮತ್ತು ನನ್ನ ಕುಟುಂಬದ ವಿರುದ್ದ ಪೋಸ್ಟರ್ ಅಂಟಿಸಿರುವ ಮಾಹಿತಿ ಬಂದಿದೆ. ರಾಜ್ಯದ ಸಿಎಂ ಆದ ಮೇಲೆಯೂ ಬ್ಲೂಫಿಲ್ಮ್ ಮಾಡಿಸುವುದು, ಪೀಸ್ಟರ್ ಅಂಟಿಸುವುದನ್ನು ಡಿ.ಕೆ.ಶಿವಕುಮಾರ್ ಬಿಡುತ್ತಾರೆ ಅಂದುಕೊಂಡಿದ್ದೆ. ಆ ಚಾಳಿ ಡಿ.ಕೆ.ಶಿವಕುಮಾರ್‌ ಗೆ ಇನ್ನೂ ಹೋಗಿಲ್ಲ. ವೈಯಕ್ತಿಕವಾಗಿ ಅಪಪ್ರಚಾರ ಮಾಡಿದರೆ ನಾನು ಕುಗ್ಗುವ ಮನುಷ್ಯನಲ್ಲ. ನನ್ನ ಹೋರಾಟ ಇನ್ನೂ ತೀವ್ರವಾಗುತ್ತದೆ’ ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಮಧ್ಯೆ ಪ್ರತಿಪಕ್ಷ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ‘ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಬಿಡದಿ ಟೌನ್‍ಶಿಪ್ ಯೋಜನೆ ವ್ಯಾಪ್ತಿಯಲ್ಲಿನ ವಿವಿಧ ಗ್ರಾಮಗಳಿಗೆ ಖುದ್ದು ಭೇಟಿ ಮಾಡಿ, ರೈತರೊಂದಿಗೆ ಸಮಾಲೋಚನೆ ನಡೆಸಿದರು. ಅಲ್ಲದೆ, ರೈತರ ಹೋರಾಟಕ್ಕೆ ಬಿಜೆಪಿ ಬೆಂಬಲ ನೀಡಲಿದೆ’ ಎಂದು ಪ್ರಕಟಿಸಿದರು.

ರೈತರಿಗೆ ಬೆದರಿಸಬೇಡಿ: ‘ಟೌನ್‍ಶಿಪ್ ವಿಚಾರದಲ್ಲಿ ರಾಜಕೀಯ ಮಾಡುವುದು ಬೇಡ. ಯೋಜನೆಗೆ ಪ್ರಧಾನಿ ಮೋದಿ ಒಪ್ಪಿಗೆ ನೀಡಿದ್ದಾರೆಂದು ಸಿಎಂ ಹೇಳಿಕೆ ನೀಡಿದ್ದಾರೆ. ಆದರೆ ಮೋದಿಯವರು ಯೋಜನೆಗೆ ಒಪ್ಪಿಗೆ ನೀಡಿಲ್ಲ. ರಾಜ್ಯ ಸರಕಾರ ಈ ವಿಷಯದಲ್ಲಿ ಹುಡುಗಾಟಿಕೆ ಮಾಡುತ್ತಿದೆ. ರೈತರ ಭೂಮಿ ರಕ್ಷಣೆ ಮಾಡಬೇಕು. ಅದರ ಹೊರತು ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಬಿಜೆಪಿ ಮುಂದಾಗುವುದಿಲ್ಲ’ ಎಂದು ವಿಜಯೇಂದ್ರ ಸ್ಪಷ್ಟಪಡಿಸಿದರು.

‘ರೈತರ ಫಲವತ್ತಾದ ಜಮೀನು ರಾಜ್ಯದ ಯಾವುದೇ ಭಾಗದಲ್ಲೂ ಕಸಿಯಲು ಬಿಜೆಪಿ ಬಿಡುವುದಿಲ್ಲ. ಬಿಡದಿ ವಿಚಾರದಲ್ಲಿ ನಮ್ಮ ವಿರುದ್ಧವೇ ಪೋಸ್ಟರ್ ಹಾಕಿದ್ದಾರೆ. ದಬ್ಬಾಳಿಕೆ ಮಾಡಿದರೆ ನಡೆಯುವುದಿಲ್ಲ. ರೈತರ ಪರವಾಗಿ ನಾವು ಧ್ವನಿ ಎತ್ತುತ್ತೇವೆ. ಸಿಎಂ, ತಮ್ಮ ಕುರ್ಚಿ ಉಳಿಸಿಕೊಳ್ಳಲು ರೈತರ ಪರ ನಿಲ್ಲಲಿ’ ಎಂದು ವಿಜಯೇಂದ್ರ ಆಗ್ರಹಿಸಿದರು.

ದ್ವಿಮುಖ ನೀತಿ ಏಕೆ: ‘ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಕೇಂದ್ರ ಸರಕಾರ ‘ಬಂದರು ನಿರ್ಮಿಸಿದರೆ ಪ್ರಕೃತಿ ನಾಶ ಆಗುತ್ತದೆ’ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಆದರೆ, ಬಿಡದಿಯಲ್ಲಿ ರೈತರ ಫಲವತ್ತಾದ ಭೂಮಿಯಲ್ಲಿ ಪ್ರಕೃತಿ ನಾಶ ಮಾಡಿ ಟೌನ್‍ಶಿಪ್ ಮಾಡಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮುಂದಾಗಿದ್ದಾರೆ. ಇಂತಹ ದ್ವಿಮುಖ ನೀತಿಯನ್ನು ಕೈಬಿಡಬೇಕು’ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದರು.

ರೈತರ ಕಷ್ಟ ತಿಳಿಯದು: ‘ಕೃಷಿ ಮಾಡಿದವರಿಗೆ ಮಾತ್ರ ರೈತರ ಕಷ್ಟ ತಿಳಿಯುತ್ತದೆಯೇ ಹೊರತು, ಬಂಡೆ ಒಡೆಯುವವರಿಗೆ ರೈತರ ನೋವು ತಿಳಿಯುವುದಿಲ್ಲ. ಭೂಸ್ವಾಧೀನ ಮಾಡಿಕೊಳ್ಳಲು ಮುಂದಾಗಿರುವ ಜಮೀನು ಅತ್ಯಂತ ಫಲವತ್ತಾಗಿದೆ. ಯಾವುದೇ ಕಾರಣಕ್ಕೂ ಈ ಭೂಮಿಯಲ್ಲಿ ಟೌನ್‍ಶಿಪ್ ಮಾಡಲು ಅವಕಾಶ ನೀಡಬಾರದು. ಒತ್ತಾಯ ಪೂರ್ವಕವಾಗಿ ಭೂಮಿ ಕಸಿದುಕೊಂಡು ರೈತರನ್ನು ಕಷ್ಟಕ್ಕೆ ದೂಡಬೇಡಿ’

-ಛಲವಾದಿ ನಾರಾಯಣಸ್ವಾಮಿ ಪರಿಷತ್ ವಿಪಕ್ಷ ನಾಯಕ

Tags

Bidadi Township Project
share
ವಾರ್ತಾಭಾರತಿ
ವಾರ್ತಾಭಾರತಿ
Next Story
X