Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬಿಕ್ಲು ಶಿವ ಕೊಲೆ ಪ್ರಕರಣ; ಬೈರತಿ...

ಬಿಕ್ಲು ಶಿವ ಕೊಲೆ ಪ್ರಕರಣ; ಬೈರತಿ ಬಸವರಾಜ್ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ವಾರ್ತಾಭಾರತಿವಾರ್ತಾಭಾರತಿ23 Dec 2025 7:31 PM IST
share
ಬಿಕ್ಲು ಶಿವ ಕೊಲೆ ಪ್ರಕರಣ; ಬೈರತಿ ಬಸವರಾಜ್ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಬೆಂಗಳೂರು : ರೌಡಿಶೀಟರ್‌ ಶಿವಪ್ರಕಾಶ್‌ ಅಲಿಯಾಸ್‌ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಬಿಜೆಪಿ ಶಾಸಕ ಬೈರತಿ ಬಸವರಾಜ್ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ. ಇದರಿಂದ, ಶಾಸಕರಿಗೆ ಬಂಧನ ಭೀತಿ ಎದುರಾಗಿದೆ.

ಪ್ರಕರಣದ 5ನೇ ಆರೋಪಿ ಬಿ.ಎ. ಬಸವರಾಜ ಅಲಿಯಾಸ್ ಬೈರತಿ ಬಸವರಾಜ್ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಮಂಗಳವಾರ ವಜಾಗೊಳಿಸಿದ್ದಾರೆ. ವಿಸ್ತೃತ ಆದೇಶ ಇನ್ನಷ್ಟೇ ಪ್ರಕಟವಾಗಬೇಕಿದೆ.

ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಬೈರತಿ ಬಸವರಾಜ್ ಸೇರಿ ಐವರು ಆರೋಪಿಗಳ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ ತಡೆ ಕಾಯ್ದೆ (ಕೊಕಾ) ಅನ್ವಯಿಸಿದ್ದ ರಾಜ್ಯ ಸರಕಾರದ ಆದೇಶವನ್ನು ಇದೇ ಡಿಸೆಂಬರ್ 19ರಂದು ರದ್ದುಪಡಿಸಿದ್ದ ಹೈಕೋರ್ಟ್, ಬೈರತಿ ಬಸವರಾಜ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿತ್ತು.

ಕೊಲೆ ಪ್ರಕರಣದಲ್ಲಿ ತನಿಖೆ ಇನ್ನಷ್ಟೇ ಪೂರ್ಣಗೊಳ್ಳಬೇಕಿದ್ದು, ಹೀನ ಕೃತ್ಯದಲ್ಲಿ ನಿರೀಕ್ಷಣಾ ಜಾಮೀನು ಮಂಜೂರು ಮಾಡುವ ಮೂಲಕ ತನಿಖೆಯಲ್ಲಿ ಮಧ್ಯಪ್ರವೇಶಿಸಲು ಬಯಸುವುದಿಲ್ಲ. ಆದ್ದರಿಂದ, ನಿರೀಕ್ಷಣಾ ಜಾಮೀನು ಕೋರಿರುವ ಅರ್ಜಿ ತಿರಸ್ಕರಿಸಲಾಗಿದೆ ಎಂದು ಹೈಕೋರ್ಟ್ ಆದೇಶದಲ್ಲಿ ಹೇಳಿತ್ತು.

ತೀರ್ಪು ಪ್ರಕಟಗೊಂಡ ಬಳಿಕ ಬೈರತಿ ಬಸವರಾಜ್ ಪರ ವಕೀಲರು, ಕೊಕಾ ಅನ್ವಯಿಸಿರುವ ಆದೇಶ ವಜಾಗೊಂಡಿರುವುದರಿಂದ ವಿಚಾರಣಾ ನ್ಯಾಯಾಲಯದಲ್ಲಿ ಬೈರತಿ ಬಸವರಾಜ್ ಅವರು ನಿರೀಕ್ಷಣಾ ಜಾಮೀನು ಕೋರುವವರೆಗೆ ರಕ್ಷಣೆ ಒದಗಿಸಬೇಕು ಎಂದು ಕೋರಿದ್ದರು. ಇದಕ್ಕೆ ಹೈಕೋರ್ಟ್ ನಿರಾಕರಿಸಿತ್ತು.

ಇದೀಗ, ವಿಚಾರಣಾ ನ್ಯಾಯಾಲಯವೂ ನಿರೀಕ್ಷಣಾ ಜಾಮೀನು ನಿರಾಕರಿಸಿರುವ ಹಿನ್ನೆಲೆಯಲ್ಲಿ ಶಾಸಕ ಬೈರತಿ ಬಸವರಾಜ್‌ಗೆ ಮತ್ತೆ ಕಾನೂನು ಸಂಕಷ್ಟ ಎದುರಾಗಿದೆ.

Tags

Byrathi BasavarajBiklu Shiva murder case
share
ವಾರ್ತಾಭಾರತಿ
ವಾರ್ತಾಭಾರತಿ
Next Story
X