Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬಿಕ್ಲು ಶಿವ ಕೊಲೆ ಪ್ರಕರಣ : ಬೈರತಿ...

ಬಿಕ್ಲು ಶಿವ ಕೊಲೆ ಪ್ರಕರಣ : ಬೈರತಿ ಬಸವರಾಜ್ ಬಂಧನಕ್ಕೆ ತಡೆ ನೀಡಿದ್ದ ಮಧ್ಯಂತರ ಆದೇಶ ತೆರವು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಸಿಐಡಿ

ವಾರ್ತಾಭಾರತಿವಾರ್ತಾಭಾರತಿ24 Sept 2025 7:26 PM IST
share
ಬಿಕ್ಲು ಶಿವ ಕೊಲೆ ಪ್ರಕರಣ : ಬೈರತಿ ಬಸವರಾಜ್ ಬಂಧನಕ್ಕೆ ತಡೆ ನೀಡಿದ್ದ ಮಧ್ಯಂತರ ಆದೇಶ ತೆರವು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಸಿಐಡಿ

ಬೆಂಗಳೂರು: ರೌಡಿಶೀಟರ್‌ ಶಿವಪ್ರಕಾಶ್‌ ಅಲಿಯಾಸ್‌ ಬಿಕ್ಲು ಶಿವ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್‌.ಪುರ ಶಾಸಕ ಬೈರತಿ ಬಸವರಾಜ್‌ (ಬಿ.ಎ. ಬಸವರಾಜ) ಅವರನ್ನು ಬಂಧಿಸದಂತೆ ಈ ಹಿಂದೆ ಹೊರಡಿಸಿದ್ದ ಮಧ್ಯಂತರ ಆದೇಶ ತೆರವುಗೊಳಿಸುವಂತೆ ಕೋರಿ ತನಿಖಾಧಿಕಾರಿಗಳು ಹೈಕೋರ್ಟ್ ಮೊರೆ ಹೋಗಿದ್ದಾರೆ.

ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಪೊಲೀಸರು ಸಲ್ಲಿಸಿರುವ ಅರ್ಜಿ ಕುರಿತು ಬುಧವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಐ.ಅರುಣ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ, ಎಷ್ಟು ದಿನಗಳ ಅವಧಿಗೆ ಕಸ್ಟಡಿ ಬೇಕೆಂದು ಕೋರ್ಟ್‌ಗೆ ತಿಳಿಸುವಂತೆ ಸರ್ಕಾರದ ಪರ ವಕೀಲರಿಗೆ ಸೂಚಿಸಿತು. ಜತೆಗೆ, ಅರ್ಜಿಗೆ ಅ.8ರೊಳಗೆ ಆಕ್ಷೇಪಣೆ ಸಲ್ಲಿಸುವಂತೆ ಬೈರತಿ ಬಸವರಾಜ್ ಪರ ವಕೀಲರಿಗೆ ಸೂಚಿಸಿ, ವಿಚಾರಣೆ ಮುಂದೂಡಿತು.

ಇದಕ್ಕೂ ಮುನ್ನ ಪ್ರಾಸಿಕ್ಯೂಷನ್‌ ಪರ ವಾದ ಮಂಡಿಸಿದ ಎಸ್‌ಪಿಪಿ ಬಿ.ಎನ್‌.ಜಗದೀಶ್‌, ಈ ಪ್ರಕರಣದಲ್ಲಿ ಹಲವರ ಸಾಕ್ಷ್ಯಗಳನ್ನು ಸಂಗ್ರಹಿಸಲಾಗಿದೆ. ಹಿಂದಿನ ವಿಚಾರಣೆಗಳ ವೇಳೆ ಬೈರತಿ ಬಸವರಾಜ್ ಸುಳ್ಳು ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಬೈರತಿ ಬಸವರಾಜ್ ಅವರನ್ನು ಬಂಧಿಸಿ ವಿಚಾರಣೆಗೊಳಪಡಿಸಬೇಕಿದೆ. ಆದ್ದರಿಂದ, ಅವರನ್ನು ಬಂಧಿಸಿದಂತೆ ಈ ಹಿಂದೆ ಹೊರಡಿಸಿರುವ ನಿರ್ಬಂಧ ಆದೇಶ ತೆರವುಗೊಳಿಸಬೇಕೆಂದು ಮನವಿ ಮಾಡಿದರು.

ಸಿಐಡಿ ಪೊಲೀಸರ ಅರ್ಜಿಗೆ ಆಕ್ಷೇಪ ವ್ಯಕ್ತಪಡಿಸಿದ ಬೈರತಿ ಬಸವರಾಜು ಪರ ಹಿರಿಯ ವಕೀಲ ಸಂದೇಶ್‌ ಚೌಟ, ಪೊಲೀಸರು ಕಳೆದ ಒಂದು ತಿಂಗಳಿನಿಂದ ವಿಚಾರಣೆಗೆ ಕರೆದಿಲ್ಲ. ಈ ಹಿಂದೆ ಪೊಲೀಸರು ಕರೆದಾಗಲೆಲ್ಲ ಅರ್ಜಿದಾರರು ತೆರಳಿ ವಿಚಾರಣೆಗೆ ಸಹಕರಿಸಿದ್ದಾರೆ. ಈಗ ಏಕಾಏಕಿ ಬಂಧನದ ಅಗತ್ಯವಿದೆ ಎಂದು ಹೇಳುತ್ತಿದ್ದಾರೆ. ಅದರ ಅಗತ್ಯತೆ ಏಕೆಂದು ಹೇಳುತ್ತಿಲ್ಲ. ಆದ್ದರಿಂದ, ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸ್ವಲ್ಪ ಕಾಲಾವಕಾಶ‌ ಕೋರಿದರು.

ಪ್ರಕರಣವೇನು? :

ಬೆಂಗಳೂರಿನ ಹಲಸೂರು ಕೆರೆಯ ಸಮೀಪದ ಮನೆಯೊಂದರ ಎದುರು ರಾತ್ರಿ ಬಿಕ್ಲು ಶಿವನ ಕೊಲೆಯಾಗಿತ್ತು. ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಕೊಲೆ ನಡೆದಿದೆ ಎಂದು ಆರೋಪಿಸಿ ಶಿವಪ್ರಕಾಶ್‌ ತಾಯಿ ವಿಜಯಲಕ್ಷ್ಮಿ ನೀಡಿದ ದೂರಿನ ಮೇರೆಗೆ ಜಗದೀಶ್‌, ಕಿರಣ್‌, ವಿಮಲ್‌, ಅನಿಲ್‌ ಮತ್ತು ಬೈರತಿ ಬಸವರಾಜ್‌ ವಿರುದ್ಧ ಭಾರತಿನಗರ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಪ್ರಕರಣದಲ್ಲಿ 5ನೇ ಆರೋಪಿಯಾಗಿರುವ ಬೈರತಿ ಬಸವರಾಜ್ ಬಂಧನ ಭೀತಿಯಿಂದ ಹೈಕೋರ್ಟ್‌ ಮೊರೆ ಹೋಗಿದ್ದರು. ನಂತರ ನ್ಯಾಯಾಲಯದ ಸೂಚನೆ ಮೇರೆಗೆ ಬೈರತಿ, ಸಿಐಡಿ ಅಧಿಕಾರಿಗಳ ಮುಂದೆ ವಿಚಾರಣೆ ಹಾಜರಾಗಿದ್ದರು. ಬೈರತಿ ಬಸವರಾಜ್ ಅವರನ್ನು ಬಂಧಿಸಿದಂತೆ ನ್ಯಾಯಾಲಯ ಮಧ್ಯಂತರ ಆದೇಶ ನೀಡಿದ್ದು, ಅದನ್ನು ತೆರವುಗೊಳಿಸುವಂತೆ ಕೋರಿ ಇದೀಗ ಸಿಐಡಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X