ಬಿಕ್ಲು ಶಿವ ಕೊಲೆ ಪ್ರಕರಣ | ಶಾಸಕ ಬೈರತಿ ಬಸವರಾಜ್ ವಿರುದ್ಧ ಬಲವಂತದ ಕ್ರಮ ಜರುಗಿಸದಂತೆ ಹೈಕೋರ್ಟ್ ಮಧ್ಯಂತರ ಆದೇಶ

ಬೆಂಗಳೂರು : ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್.ಪುರ ಶಾಸಕ ಬೈರತಿ ಬಸವರಾಜ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಮಧ್ಯಂತರ ಆದೇಶ ನೀಡಿರುವ ಹೈಕೋರ್ಟ್, ಪ್ರಕರಣದ ತನಿಖೆಗೆ ಸಹಕರಿಸುವಂತೆ ಬೈರತಿ ಬಸವರಾಜ್ ಅವರಿಗೆ ಸೂಚಿಸಿದೆ.
ಬಿಕ್ಲು ಶಿವ ಕೊಲೆ ಸಂಬಂಧ ಭಾರತಿ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ರದ್ದು ಕೋರಿ ಪ್ರಕರಣದ ಐದನೇ ಆರೋಪಿಯಾಗಿರುವ ಬೈರತಿ ಬಸವರಾಜ್ (ಬಿ.ಎ.ಬಸವರಾಜ) ಸಲ್ಲಿಸಿರುವ ಕ್ರಿಮಿನಲ್ ಅರ್ಜಿ ಕುರಿತು ಬುಧವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಐ. ಅರುಣ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಮಧ್ಯಂತರ ಆದೇಶ ಮಾಡಿತು.
ವಿಚಾರಣೆ ವೇಳೆ ಬೈರತಿ ಬಸವರಾಜ್ ಪರ ವಕೀಲರು, ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜಿದಾರರು ತನಿಖಾಧಿಕಾರಿಗಳ ಮುಂದೆ ಹಾಜರಾಗಿ ಎಲ್ಲ ರೀತಿಯ ಸಹಕಾರ ನೀಡಿದ್ದಾರೆ ಎಂದು ನ್ಯಾಯಾಲಯಕ್ಕೆ ಮಾಹಿತಿ ನೀಡಿದರು.
Next Story





