Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ...

ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ ಜಾರಿ: ಕೈದಿಗಳ ಚಲನವಲನಗಳ ಸಂಪೂರ್ಣ ದತ್ತಾಂಶ ಸಂಗ್ರಹ

ವಾರ್ತಾಭಾರತಿವಾರ್ತಾಭಾರತಿ8 May 2026 7:42 PM IST
share
ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ ಜಾರಿ: ಕೈದಿಗಳ ಚಲನವಲನಗಳ ಸಂಪೂರ್ಣ ದತ್ತಾಂಶ ಸಂಗ್ರಹ

ಬೆಂಗಳೂರು, ಮೇ 8 : ರಾಜಧಾನಿ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಡೆಯುವ ಅನುಚಿತ ವರ್ತನೆ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುವ ಸಲುವಾಗಿ ‘ಪ್ರಿಸನರ್ಸ್ ಟ್ರ್ಯಾಕಿಂಗ್ ಮೂವ್‍ಮೆಂಟ್ ಸಿಸ್ಟಂ’ ಅನ್ನು ಪರಿಚಯಿಸಲಾಗಿದ್ದು, ಇನ್ನುಮುಂದೆ ಪ್ರತಿ ಬ್ಯಾರಕ್ ಪ್ರವೇಶಿಸುವಾಗ ಕೈದಿಗಳಿಗೆ ಬಯೋಮೆಟ್ರಿಕ್ ವ್ಯವಸ್ಥೆ ಇರಲಿದೆ ಎಂದು ಜೈಲಾಧಿಕಾರಿಗಳು ತಿಳಿಸಿದ್ದಾರೆ.

ಜೈಲಿನ ಪ್ರತಿ ಬ್ಯಾರಕ್, ಸಂದರ್ಶಕರ ಕೊಠಡಿ, ಆಸ್ಪತ್ರೆ, ಕ್ಯಾಂಟೀನ್, ಅಡುಗೆ ಕೋಣೆ, ಗ್ರಂಥಾಲಯ, ಮೈದಾನ, ಕರಕುಶಲ ಕಾರ್ಖಾನೆಗಳು, ಬೇಕರಿ ಸೇರಿ ಎಲ್ಲೆಡೆ ಬಯೋಮೆಟ್ರಿಕ್ ವ್ಯವಸ್ಥೆ ಮಾಡಲಾಗಿದೆ, ಜೊತೆಗೆ ಸಿಬ್ಬಂದಿ ನಿಯೋಜಿಸಲಾಗಿದೆ. ಪ್ರಮುಖವಾಗಿ ಸಂದರ್ಶಕರ ಕೊಠಡಿಗೆ ಹೋಗುವಾಗ ಬಯೊಮೆಟ್ರಿಕ್ ಜೊತೆಗೆ ಟೋಕನ್ ಪಡೆಯಬೇಕು. ಈ ಟೋಕನ್‍ನಲ್ಲಿ ಕೈದಿಯ ಹೆಸರು, ಸಂಖ್ಯೆ, ಸಮಯ ಸೇರಿ ಇತರೆ ಅಂಶಗಳನ್ನು ಜೈಲು ಸಿಬ್ಬಂದಿ ಸಾಫ್ಟ್‍ವೇರ್‍ನಲ್ಲಿ ಅಪ್‍ಡೇಟ್ ಮಾಡುತ್ತಾರೆ. ಹೀಗೆ ಪ್ರತಿ ಬಾರಿ ಸಂದರ್ಶಕರನ್ನು ಭೇಟಿಯಾಗಲು ಬಂದು ಹೋಗುವ ಕೈದಿಗಳ ಚಲನವಲನಗಳ ಸಂಪೂರ್ಣ ದತ್ತಾಂಶ ಸಂಗ್ರಹವಾಗಲಿದೆ ಎಂದು ಜೈಲಾಧಿಕಾರಿಗಳು ಹೇಳಿದ್ದಾರೆ.

ಇನ್ನು ಆಸ್ಪತ್ರೆ, ಗ್ರಂಥಾಲಯ ಹಾಗೂ ಕಾರ್ಯನಿಮಿತ್ತ ಬೇರೆ ಬ್ಯಾರಕ್‍ಗಳ ಪ್ರವೇಶ ದ್ವಾರದಲ್ಲೂ ಇದೇ ರೀತಿಯ ವ್ಯವಸ್ಥೆ ಮಾಡಲಾಗಿದೆ. ಇದರಿಂದ ಬೇರೆ ಕೈದಿಗಳ ಜತೆ ಸೇರಿ ಅಕ್ರಮ ಚಟುವಟಿಕೆಗೆ ಮುಂದಾದರೆ ಅಂತಹ ಕೈದಿಗಳ ವಿರುದ್ಧ ಕ್ರಮಕೈಗೊಳ್ಳಲು ಈ ಯೋಜನೆ ಸಹಕಾರಿಯಾಗಲಿದೆ. ಅಲ್ಲದೆ, ಎಲ್ಲೆಲ್ಲಿ ಎಷ್ಟು ಹೊತ್ತು ಕಾಲ ಕಳೆದರೂ ಸೇರಿ ಪ್ರತಿ ಕ್ಷಣವನ್ನು ಟ್ರ್ಯಾಕಿಂಗ್ ಮಾಡಬಹುದಾಗಿದೆ ಎಂದು ಜೈಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈಗಾಗಲೇ ಕಾರಾಗೃಹದಲ್ಲಿ ಕೃತಕ ಬುದ್ದಿಮತ್ತೆ(ಎಐ) ಕ್ಯಾಮೆರಾಗಳ ಮೂಲಕ ಕೈದಿಗಳು ಮತ್ತು ಅಧಿಕಾರಿ-ಸಿಬ್ಬಂದಿ ಮೇಲೆ ನಿಗಾವಹಿಸಲಾಗಿತ್ತು. ಇದೀಗ ಅದರೊಂದಿಗೆ ಕೈದಿಗಳ ಫೋನ್ ಕರೆ ವ್ಯವಸ್ಥೆ ಸಂಪೂರ್ಣ ಡಿಜಿಟಲ್ ಟ್ರ್ಯಾಕಿಂಗ್, ಸಂದರ್ಶಕರನ್ನು ಭೇಟಿಯಾಗಲು ಡಿಜಿಟಲ್ ಟೋಕನ್ ಪದ್ಧತಿ ಸೇರಿ ಕಾರಾಗೃಹ ಬಂಧಿಗಳ ಚಲನವಲನಗಳ ಮೇಲೆ ಸಂಪೂರ್ಣ ನಿಗಾ ಇಡಲು ಈ ವ್ಯವಸ್ಥೆ ಜಾರಿಗೆ ತರಲಾಗಿದೆ. ಇದಕ್ಕೆ ಸುಮಾರು 2.25 ಕೋಟಿ ರೂ. ವೆಚ್ಚವಾಗಿದೆ ಎಂದು ಜೈಲಾಧಿಕಾರಿಗಳು ತಿಳಿಸಿದ್ದಾರೆ.

ಕೈದಿಗಳ ಪ್ರತಿಯೊಂದು ಚಲನವಲನ ತಿಳಿಯಲು ಇಲಾಖೆಯು ಕ್ಯಾಂಟೀನ್ ಯೂಸೇಜ್ ಸಿಸ್ಟಂ ಜಾರಿಗೆ ತರಲಾಗಿದೆ. ಜೈಲಿನಲ್ಲಿರುವ ಕ್ಯಾಂಟೀನ್‍ನಲ್ಲಿ ನೇರವಾಗಿ ಹಣ ಪಾವತಿಸದೆ ಸದ್ಯ ಇರುವ ವಾಲೆಟ್ ಅಥವಾ ಕೂಪನ್ ನೀಡಿ ಬನ್-ಬಿಸ್ಕತ್ ಸೇರಿ ಬೇಕರಿ ತಿನಿಸುಗಳನ್ನು ತಿನ್ನಲು ಖರೀದಿಸಬಹುದಾಗಿದೆ. ಈ ಮೂಲಕ ಖರೀದಿದಾರನ ಹೆಸರು, ಖರೀದಿಸಿದ ವಸ್ತು, ಅದರ ಪ್ರಮಾಣ, ಸಮಯ ಹಾಗೂ ದಿನಾಂಕ, ವಾಲೆಟ್‍ನಲ್ಲಿ ಬಾಕಿಯಿರುವ ಹಣ ಸೇರಿ ಪ್ರತಿಯೊಂದೂ ಟ್ರ್ಯಾಕ್ ಆಗಲಿದೆ. ಇದರಿಂದ ಕೈದಿಯ ಪ್ರತಿ ಖರ್ಚಿನ ವಿವರಗಳು ದತ್ತಾಂಶಗಳಲ್ಲಿ ಸಂಗ್ರಹಿಸಲಾಗುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Tags

Biometric SystemParappana Agrahara Jail
share
ವಾರ್ತಾಭಾರತಿ
ವಾರ್ತಾಭಾರತಿ
Next Story
X