Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸೋಲಿನ ಹತಾಶೆಯಿಂದ ಬಿಜೆಪಿ ಮಿತ್ರ...

ಸೋಲಿನ ಹತಾಶೆಯಿಂದ ಬಿಜೆಪಿ ಮಿತ್ರ ಪಕ್ಷಗಳಿಂದ ವಿದಾಯ ಕೂಟ: ಅಖಿಲೇಶ್ ಯಾದವ್ ವ್ಯಂಗ್ಯ

ಮಡಿಕೇರಿಯ ಜನರಲ್ ತಿಮ್ಮಯ್ಯ ಮ್ಯೂಸಿಯಮ್‌ಗೆ ಎಸ್‌ಪಿ ರಾಷ್ಟ್ರೀಯ ಅಧ್ಯಕ್ಷರ ಭೇಟಿ

ವಾರ್ತಾಭಾರತಿವಾರ್ತಾಭಾರತಿ19 July 2023 11:35 PM IST
share
ಸೋಲಿನ ಹತಾಶೆಯಿಂದ ಬಿಜೆಪಿ ಮಿತ್ರ ಪಕ್ಷಗಳಿಂದ ವಿದಾಯ ಕೂಟ: ಅಖಿಲೇಶ್ ಯಾದವ್ ವ್ಯಂಗ್ಯ

ಮಡಿಕೇರಿ, ಜು.19: ಕಾಂಗ್ರೆಸ್, ಸಮಾಜ ವಾದಿ ಪಕ್ಷಗಳೂ ಸೇರಿದಂತೆ 26 ಪಕ್ಷಗಳ ‘ಇಂಡಿಯಾ’ ಬಿಜೆಪಿ ಮಿತ್ರ ಪಕ್ಷಗಳಿಗೆ ಭಯ ಉಂಟು ಮಾಡಿದ್ದು, ಸೋಲಿನ ಹತಾಶೆ ಯಿಂದ ವಿದಾಯದ ಕೂಟ ನಡೆಸುತ್ತಿವೆ ಎಂದು ಸಮಾಜವಾದಿ ಪಕ್ಷ(ಎಸ್ಪಿ)ದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ.

ಮಡಿಕೇರಿಯಲ್ಲಿ ಜನರಲ್ ತಿಮ್ಮಯ್ಯ ಮ್ಯೂಸಿಯಮ್ಗೆ ಭೇಟಿ ನೀಡಿ ಮಹಾನ್ ಸೇನಾನಿಯ ಸೇನಾ ಜೀವನದ ಮಾಹಿತಿ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಹವಾಮಾನದಂತೆ ಮೈತ್ರಿಕೂಟದ ಸಭೆಯ ವಾತಾವರಣವೂ ಬಹಳ ಉತ್ತಮವಾಗಿತ್ತು. ಲೋಕಸಭಾ ಚುನಾವಣೆಯನ್ನು ಮೈತ್ರಿಕೂಟದ ಪಕ್ಷಗಳು ಒಟ್ಟಾಗಿ ಎದುರಿಸುತ್ತೇವೆ ಎಂದು ಹೇಳಿದರು.

ದೇಶದಲ್ಲಿ ನಿರುದ್ಯೋಗ ಸಮಸ್ಯೆ, ಬಡತನ, ಹಾಗೇ ಇದೆ. ದಿನಬಳಕೆಯ ವಸ್ತುಗಳ ದರ ಹೆಚ್ಚುತ್ತಲೇ ಇದೆ. ನೋಟು ಅಮಾನ್ಯೀಕರಣದ ನಂತರವೂ ದೇಶದಲ್ಲಿ ಭ್ರಷ್ಟಾಚಾರ ಕೊನೆಯಾಗಲಿಲ್ಲ ಎಂದರೆ ನೋಟು ಅಮಾನ್ಯೀಕರಣ ನಿರ್ಧಾರವೇ ಭ್ರಷ್ಟಾಚಾರಕ್ಕೆ ನಾಂದಿ ಹಾಡಿದ್ದು ಎಂದು ಹೇಳಬೇಕಾಗುತ್ತದೆ. ನೋಟು ಅಮಾನ್ಯೀಕರಣವನ್ನು ಸಮರ್ಥಿಸುವ ಒಂದೇ ಒಂದು ಕಾರಣವನ್ನೂ ಈವರೆಗೂ ಬಿಜೆಪಿಯಿಂದ ನೀಡಲಾಗಲಿಲ್ಲ. ಕರ್ನಾಟಕದಲ್ಲಿ ಶೇ.40ರಷ್ಟು ಕಮಿಷನ್ ಆರೋಪ ಎದುರಿಸುತ್ತಿದ್ದ ಬಿಜೆಪಿ ಅಧಿಕಾರ ಕಳೆದುಕೊಂಡಂತೆಯೇ ಕೇಂದ್ರದಲ್ಲಿ ಭ್ರಷ್ಟಾಚಾರಿಗಳಿಗೆ ಬೆಂಬಲ ನೀಡುತ್ತಾ ಬಂದಿರುವ ಬಿಜೆಪಿ ಸರಕಾರವೂ ಅಧಿಕಾರ ಕಳೆದುಕೊಳ್ಳಲಿದೆ ಎಂದುಅಖಿಲೇಶ್ ಭವಿಷ್ಯ ನುಡಿದರು.

‘ಇಂಡಿಯಾ’ ಎಂಬ ಹೊಸ ಹೆಸರಿನಿಂದ ಸಹಜವಾಗಿಯೇ ಬಿಜೆಪಿ ಆತಂಕಕ್ಕೊಳಗಾಗಿದೆ. ‘ಇಂಡಿಯಾ’ ಹೆಸರು ತನ್ನದು ಎಂದು ಈವರೆಗೂ ನಮ್ಮನ್ನು ಹೆದರಿಸುತ್ತಿದ್ದ ಬಿಜೆಪಿ ಇದೀಗ ಮೈತ್ರಿ ಪಕ್ಷಗಳು ಯಾವಾಗ ‘ಇಂಡಿಯಾ’ ಎಂದು ಹೆಸರಿಟ್ಟಿತೋ ಆಗಲೇ ಗಲಿಬಿಲಿಗೊಳಗಾಗಿ ದೆ. ಮುಂದಿನ ದಿನಗಳಲ್ಲಿ ‘ಇಂಡಿಯಾ’ವನ್ನು ಪ್ರಬಲಗೊಳಿಸುತ್ತಾ ಭಾರತೀಯರ ಆಶೋತ್ತರಕ್ಕೆ ತಕ್ಕಂತೆ ದೇಶವನ್ನು ಬಿಜೆಪಿ ಹಿಡಿತದಿಂದ ದೂರ ಮಾಡಲಿದ್ದೇವೆ ಎಂದು ಅಖಿಲೇಶ್ ಹೇಳಿದರು.

ಈ ವೇಳೆ ಎಸ್ಪಿ ರಾಷ್ಟ್ರೀಯ ವಕ್ತಾರ ರಾಜೇಂದ್ರ ಚೌಧುರಿ ಹಾಜರಿದ್ದರು. ಮ್ಯೂಸಿಯಮ್ ವ್ಯವಸ್ಥಾಪಕ ಸುಬೇದಾರ್ ಮೇಜರ್ ಗೌಡಂಡ ತಿಮ್ಮಯ್ಯ ಮ್ಯೂಸಿಯಮ್ ಬಗ್ಗೆ ಸಮಗ್ರ ಮಾಹಿತಿ ನೀಡಿದರು. ಅಖಿಲೇಶ್ ಯಾದವ್ ಭೇಟಿ ಹಿನ್ನೆಲೆಯಲ್ಲಿ ತಿಮ್ಮಯ್ಯ ಮ್ಯೂಸಿಯಮ್ ವ್ಯಾಪ್ತಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

‘ತಿಮ್ಮಯ್ಯ ಜನ್ಮಸ್ಥಳದಲ್ಲಿ ಗೌರವ ನಮನ ಸಲ್ಲಿಸುವ ಅವಕಾಶಕ್ಕೆ ಹೆಮ್ಮೆ’

ನಾನು ಮೈಸೂರಿನಲ್ಲಿ ವಿದ್ಯಾಭ್ಯಾಸ ಪಡೆದಿದ್ದೆ. ಹೀಗಾಗಿ ಆಗಾಗ ಕೊಡಗು ಜಿಲ್ಲೆಗೆ ಭೇಟಿ ನೀಡುತ್ತಿದ್ದೆ. ಮಡಿಕೇರಿಯ ದಸರಾ ಉತ್ಸವಕ್ಕೂ ಭೇಟಿ ನೀಡಿದ್ದೇನೆ. ಬಹಳ ಸುಂದರವಾದ ಜಿಲ್ಲೆ ಇದಾಗಿದೆ. ಆದರೆ, ಇದೇ ಮೊದಲ ಬಾರಿಗೆ ಜನರಲ್ ತಿಮ್ಮಯ್ಯ ಮ್ಯೂಸಿಯಮ್ಗೆ ಭೇಟಿ ನೀಡಿದ್ದೇನೆ. ಭಾರತದ ಪಾಲಿಗೆ ಮಹಾನ್ ಸೇನಾಧಿಕಾರಿಯಾಗಿದ್ದ ಜನರಲ್ ತಿಮ್ಮಯ್ಯ ಅವರ ಜೀವನ, ಸೇನಾ ಸಾಧನೆಗಳ ಬಗ್ಗೆ ಪ್ರತ್ಯಕ್ಷವಾಗಿ ವಸ್ತುಸಂಗ್ರಹಾಲಯದಲ್ಲಿ ವೀಕ್ಷಿಸಿ ಸಂತೋಷವಾಗಿದೆ. ವಿದೇಶಗಳಲ್ಲಿಯೂ ಭಾರತದ ಕೀರ್ತಿಪತಾಕೆ ಹಾರಿಸಿರುವ ತಿಮ್ಮಯ್ಯ ಅವರ ಜನ್ಮನಿವಾಸದಲ್ಲಿಯೇ ಆ ಮಹಾನ್ ಸೇನಾನಿಗೆ ಗೌರವ ನಮನ ಸಲ್ಲಿಸುವ ಅಪೂರ್ವ ಅವಕಾಶ ನನ್ನದಾಗಿದೆ ಎಂದು ತಿಮ್ಮಯ್ಯ ಮ್ಯೂಸಿಯಮ್ ಭೇಟಿ ವೇಳೆ ಅಖಿಲೇಶ್ ಯಾದವ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X