ಬಿಜೆಪಿಯಿಂದ ಬೆಳಗಾವಿ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಯತ್ನ: ಹಲವರು ವಶಕ್ಕೆ

ಬೆಳಗಾವಿ : ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿಯ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ಅಲಾರವಾಡ್ ಕ್ರಾಸ್ ಕಡೆಗೆ ಸಾಗುತ್ತಿದ್ದ ಬಿಜೆಪಿಯ ನಾಯಕರ ಸಹಿತ ಹಲವು ಕಾರ್ಯಕರ್ತರನ್ನು ಪೊಲೀಸರು ತಡೆದು ವಶಕ್ಕೆ ಪಡೆದಿದ್ದಾರೆ.
ಅಲಾರವಾಡ್ ಕ್ರಾಸ್ ನಲ್ಲಿ ಪೊಲೀಸರು ಹೆಚ್ಚಿನ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಿದ್ದಾರೆ. ಅಗತ್ಯವಿದ್ದರೆ ಜಲಧಾರೆ ಬಳಕೆ ಮಾಡುವ ವ್ಯವಸ್ಥೆಯನ್ನೂ ಮಾಡಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲೇ ಪರಿಸ್ಥಿತಿ ನಿಗ್ರಹಿಸುತ್ತಿದ್ದು, ಸುಮಾರು ಸಾವಿರಕ್ಕೂ ಹೆಚ್ಚು ಸಿಬ್ಬಂದಿಯನ್ನು ನಿಯೋಜಿಸಿ ಬಿಗಿ ಬಂದೋಬಸ್ತ್ ಒದಗಿಸಲಾಗಿದೆ.
ಸುವರ್ಣ ಸೌಧ ಮುತ್ತಿಗೆ ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ ಹಾಗೂ ಅನೇಕ ನಾಯಕರು ಭಾಗವಹಿಸಿದ್ದಾರೆ.
Next Story





