Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕೋವಿಡ್ ಕಾರ್ಯಪಡೆಯಲ್ಲಿದ್ದು, ಕೋವಿಡ್...

ಕೋವಿಡ್ ಕಾರ್ಯಪಡೆಯಲ್ಲಿದ್ದು, ಕೋವಿಡ್ ಪರೀಕ್ಷೆ ನೀತಿ ನಿರೂಪಣೆ ಮುಖ್ಯಸ್ಥರಾಗಿ ನೀವು ಮಾಡಿದ್ದೇನು ?

ಬಿಜೆಪಿ ಅಭ್ಯರ್ಥಿ ಡಾ ಸಿ ಎನ್ ಮಂಜುನಾಥ್ ಅವರಿಗೆ ಡಾ. ಶ್ರೀನಿವಾಸ ಕಕ್ಕಿಲಾಯ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ19 April 2024 12:52 PM IST
share
ಕೋವಿಡ್ ಕಾರ್ಯಪಡೆಯಲ್ಲಿದ್ದು, ಕೋವಿಡ್ ಪರೀಕ್ಷೆ ನೀತಿ ನಿರೂಪಣೆ ಮುಖ್ಯಸ್ಥರಾಗಿ ನೀವು ಮಾಡಿದ್ದೇನು ?

ಬೆಂಗಳೂರು: ಕೋವಿಡ್ ಕಾರ್ಯಪಡೆಯಲ್ಲಿದ್ದು, ಕೋವಿಡ್ ಪರೀಕ್ಷೆ ನೀತಿ ನಿರೂಪಣೆ ಮುಖ್ಯಸ್ಥರಾಗಿ ನೀವು ಮಾಡಿದ್ದೇನು ? ಎಂದು ಬೆಂಗಳೂರು ಗ್ರಾಮೀಣ ಕ್ಷೇತ್ರದ ಅಭ್ಯರ್ಥಿ ಡಾ. ಸಿ ಎನ್ ಮಂಜುನಾಥ್ ಅವರನ್ನು ಖ್ಯಾತ ವೈದ್ಯ ಡಾ. ಶ್ರೀನಿವಾಸ ಕಕ್ಕಿಲ್ಲಾಯ ಅವರು ಪ್ರಶ್ನಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಫೇಸ್‌ ಬುಕ್‌ ನಲ್ಲಿ ಪೋಸ್ಟ್‌ ಮಾಡಿರುವ ಡಾ. ಶ್ರೀನಿವಾಸ ಕಕ್ಕಿಲ್ಲಾಯ ಅವರು, ಕರ್ನಾಟಕದ 2020-23ರ ಭಾಜಪ ಸರ್ಕಾರದಡಿಯಲ್ಲಿ ಕೋವಿಡ್ ಕಾರ್ಯಪಡೆಯ ಸದಸ್ಯರಾಗಿದ್ದು, ಕೋವಿಡ್ ಪರೀಕ್ಷೆಗಳ ನೀತಿ ನಿರೂಪಣೆಗೆ ಮುಖ್ಯಸ್ಥರಾಗಿದ್ದು, ಈಗ ದೇಶದ ನೀತಿ ನಿರೂಪಿಸುವ ಸಂಸತ್ತಿನ ಸದಸ್ಯರಾಗಲು ಚುನಾವಣೆಗೆ ಅದೇ ಭಾಜಪದಿಂದ ಸ್ಪರ್ಧಿಸುತ್ತಿರುವುದರಿಂದ ದಯವಿಟ್ಟು ಈ ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸುವಿರಾ? ಎಂದು ಸರಣಿ ಪ್ರಶ್ನೆಗಳನ್ನು ಡಾ. ಸಿ ಎನ್ ಮಂಜುನಾಥ್ ಅವರ ಮುಂದಿಟ್ಟಿದ್ದಾರೆ.

1. ಹೃದ್ರೋಗ ತಜ್ಞರಾಗಿದ್ದುಕೊಂಡು ಸೋಂಕು ರೋಗ ಪತ್ತೆ ಮತ್ತು ನಿಯಂತ್ರಣಗಳ ಬಗ್ಗೆ ತಮಗೆ ಆಳವಾದ ಮಾಹಿತಿಯಿದೆಯೇ, ಅಥವಾ ಆ ವಿಚಾರಗಳಲ್ಲಿ ತಮಗಿಂತ ನುರಿತರಾದವರಿಗೆ, ಹೆಚ್ಚು ಅರ್ಹರಾದವರಿಗೆ ಕಾರ್ಯಪಡೆಯ ಸ್ಥಾನವನ್ನು ಬಿಟ್ಟುಕೊಡಬೇಕಿತ್ತೇ?

2. ಕೋವಿಡ್ ಸೋಂಕಿಗೆ ಲಾಕ್ ಡೌನ್ ಮಾಡುವುದಕ್ಕೆ ವೈಜ್ಞಾನಿಕ, ವೈದ್ಯಕೀಯ ಆಧಾರಗಳಿದ್ದವೇ? ದೇಶದ ಅತ್ಯುನ್ನತ ವೈದ್ಯಕೀಯ ಸಂಸ್ಥೆ ಐಸಿಎಂಆರ್ ಏಪ್ರಿಲ್ 2020ರ ಮೊದಲಲ್ಲೇ ಲಾಕ್ ಡೌನ್ ನಮ್ಮ ದೇಶಕ್ಕೆ ಅಗತ್ಯವಿಲ್ಲ, ಬದಲಿಗೆ ಹಾನಿಯನ್ನುಂಟು ಮಾಡಬಹುದು ಎಂದು ನೇರವಾಗಿ ಹೇಳಿದ್ದು ತಮಗೆ ತಿಳಿದಿರಲಿಲ್ಲವೇ?

3. ಕೋವಿಡ್ ಪತ್ತೆಯ ಪರೀಕ್ಷೆಗಳ ಬಗ್ಗೆ ತಮ್ಮ ನೇತೃತ್ವದಲ್ಲಿ ನೀಡಿದ್ದ ಸಲಹೆಗಳಿಗೆ ವೈದ್ಯಕೀಯ, ವೈಜ್ಞಾನಿಕ ಆಧಾರಗಳಿದ್ದವೇ?

4. ಕರ್ನಾಟಕದಲ್ಲಿ ಕೋವಿಡ್ ಚಿಕಿತ್ಸೆಗೆ ಪ್ರಕಟಿಸಿದ ಅಧಿಕೃತ ಕಾರ್ಯಸೂಚಿಗಳೆಲ್ಲವೂ ಆಧಾರರಹಿತವೂ, ಅಪಾಯಕಾರಿಯೂ, ಅನಗತ್ಯ ವೆಚ್ಚ ಹಾಗೂ ಗೊಂದಲಗಳನ್ನುಂಟು ಮಾಡುವಂಥವೂ ಆಗಿದ್ದವು. ಕಾರ್ಯಪಡೆಯ ಪ್ರಮುಖ ಸದಸ್ಯರಾಗಿ ಆ ಬಗ್ಗೆ ತಾವು ಯಾವುದೇ ಅಭಿಪ್ರಾಯವನ್ನು ಮಂಡಿಸಿದ್ದಿದೆಯೇ?

5. ಕೋವಿಡ್ ಲಸಿಕೆಗಳ ಸಾಧಕ-ಬಾಧಕಗಳ ಬಗ್ಗೆ, ನಮ್ಮ ದೇಶದಲ್ಲಿ, ನಮ್ಮ ರಾಜ್ಯದಲ್ಲಿ ಅವುಗಳ ಅಗತ್ಯಗಳ ಬಗ್ಗೆ ಯಾವುದೇ ದೃಢ ಮಾಹಿತಿಗಳು ಲಭ್ಯವಾಗುವ ಮೊದಲೇ ತಾವು ಮೊದಲಿಗರಲ್ಲೊಬ್ಬರಾಗಿ ಆ ಲಸಿಕೆಯನ್ನು ಪಡೆಯಲು ಕಾರಣವೇನಿತ್ತು?

6. ಕೊರೋನ ಸೋಂಕು ಹಾಗೂ ಲಸಿಕೆಗಳ ನಂತರದ ಈ ಕಾಲದಲ್ಲಿ ಅನೇಕ ಜನರಲ್ಲಿ ಅದರಲ್ಲೂ ಯುವಜನರಲ್ಲಿ, ಹಠಾತ್ ಹೃದಯಾಘಾತ, ಹೃದಯ ಸ್ಥಂಭನ, ಪಾರ್ಶ್ವವಾಯು ಇತ್ಯಾದಿಗಳು ಹೆಚ್ಚುತ್ತಿರುವ ವರದಿಗಳಾಗುತ್ತಿರುವಾಗ, ತಮ್ಮಿಂದ ಹಾಗೂ ತಾವು ಇತ್ತೀಚಿನವರೆಗೂ ಮುಖ್ಯ ನಿರ್ದೇಶಕರಾಗಿದ್ದ ಜಯದೇವ ಹೃದ್ರೋಗ ಸಂಸ್ಥೆಯಿಂದ ಈ ಸಮಸ್ಯೆಗಳ ಬಗ್ಗೆ ಅಧ್ಯಯನಗಳಾಗಿವೆಯೇ, ಅವುಗಳ ಬಗ್ಗೆ ಜನರಿಗೆ ಸರಿಯಾದ ಮಾಹಿತಿ ನೀಡಲಾಗಿದೆಯೇ? ಎಂಬಿತ್ಯಾದಿ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡುವಂತೆ ಡಾ. ಶ್ರೀನಿವಾಸ ಕಕ್ಕಿಲ್ಲಾಯ ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X