Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ |...

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ | ಎನ್‍ಐಎಗೆ ವಹಿಸಲು ರಾಜ್ಯಪಾಲರಿಗೆ ಬಿಜೆಪಿ ಮನವಿ

ವಾರ್ತಾಭಾರತಿವಾರ್ತಾಭಾರತಿ9 May 2025 2:54 PM IST
share
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ | ಎನ್‍ಐಎಗೆ ವಹಿಸಲು ರಾಜ್ಯಪಾಲರಿಗೆ ಬಿಜೆಪಿ ಮನವಿ

ಬೆಂಗಳೂರು : ಮಂಗಳೂರಿನ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ತನಿಖೆ ಮಾಡುತ್ತಿರುವ ಆಡಳಿತಾರೂಢ ಕಾಂಗ್ರೆಸ್ ಸರಕಾರದ ಮೇಲೆ ನಮಗೆ ವಿಶ್ವಾಸವಿಲ್ಲ. ಆದುದರಿಂದ ಇದನ್ನು ರಾಷ್ಟ್ರೀಯ ತನಿಖಾ ದಳ(ಎನ್‍ಐಎ)ಕ್ಕೆ ವಹಿಸಬೇಕು ಎಂದು ಕೋರಿ ಪ್ರತಿಪಕ್ಷ ಬಿಜೆಪಿ ನಿಯೋಗ ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋಟ್ ಅವರಿಗೆ ಮನವಿ ಮಾಡಿದೆ.

ಶುಕ್ರವಾರ ಇಲ್ಲಿನ ರಾಜಭವನಕ್ಕೆ ಖುದ್ದು ಭೇಟಿ ನೀಡಿದ ಪ್ರತಿಪಕ್ಷ ನಾಯಕ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದ ನಿಯೋಗ ರಾಜ್ಯಪಾಲರಿಗೆ ಮನವಿ ಸಲ್ಲಿಸಿತು. ಮಂಗಳೂರಿನ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ತನಿಖೆಯನ್ನು ಎನ್‍ಐಎಗೆ ವಹಿಸಲು ರಾಜ್ಯ ಸರಕಾರಕ್ಕೆ ಕೂಡಲೇ ನಿರ್ದೇಶನ ನೀಡಬೇಕು ಎಂದು ಕೋರಿತು.

ಆ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್, ‘ಸುಹಾಸ್ ಶೆಟ್ಟಿಯ ಕೊಲೆ ಪ್ರಕರಣ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುಪಾರಿ ನೀಡಿರುವ ಪ್ರಕರಣ. ಮುಸ್ಲಿಮ್ ಯುವಕ ಕೊಲೆಯಾಗಿದ್ದಕ್ಕೆ ಆ ಕುಟುಂಬಕ್ಕೆ ಕಾಂಗ್ರೆಸ್ 25ಲಕ್ಷ ರೂ.ಪರಿಹಾರ ನೀಡಿದ್ದು, ಆ ಹಣವನ್ನು ಬಳಸಿಯೇ ಸುಪಾರಿ ನೀಡಲಾಗಿದೆ’ ಎಂದು ಆರೋಪಿಸಿದರು.

‘ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್, ಆ ಕುಟುಂಬದವರು ಒಳ್ಳೆಯವರು ಎಂದು ಹೇಳಿದ್ದಾರೆ. ಆ ಮನೆಯವರೇ ಸುಪಾರಿ ನೀಡಿದ್ದಾರೆಂದು ಪೊಲೀಸ್ ಆಯುಕ್ತರು ಹೇಳಿದ್ದಾರೆ. ಸ್ಪೀಕರ್ ಆಗಿ ಕೊಲೆ ಪ್ರಕರಣದ ಬಗ್ಗೆ ಮಾತನಾಡುವ ಅಗತ್ಯವೇನಿದೆ? ಯಾವುದೇ ಸ್ಪೀಕರ್ ಕೊಲೆ ಬಗ್ಗೆ ಮಾತನಾಡಿದ ಇತಿಹಾಸವೇ ಇಲ್ಲ ಎಂದು ಅವರು ತಿಳಿಸಿದರು.

ಇದೇ ವೇಳೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ʼಈ ಪ್ರಕರಣದಲ್ಲಿ ವಿದೇಶಿ ಹಣದ ಹರಿವಿನ ಚರ್ಚೆ ನಡೆಯುತ್ತಿದೆ. ಪಿಎಫ್‍ಐ ನಂಟು ಕಾಣುತ್ತಿದೆ. ಸುಹಾಸ್ ಹತ್ಯೆ ಸಂದರ್ಭದಲ್ಲಿ ಬಿಜೆಪಿ ವತಿಯಿಂದ ‘ಮಂಗಳೂರು ಚಲೋ’ ಹಮ್ಮಿಕೊಳ್ಳಲು ತೀರ್ಮಾನಿಸಿತ್ತು. ‘ಆಪರೇಷನ್ ಸಿಂಧೂರ್’ ಪ್ರಾರಂಭವಾದ ಸಂದರ್ಭದಲ್ಲಿ ಶಾಂತಿ ಕಾಪಾಡಲು ಮತ್ತು ದೇಶದ ಜೊತೆ ನಿಲ್ಲಬೇಕೆಂದು ಸುಮ್ಮನೆ ಇದ್ದೆವು. ಆದರೆ, ಸುಹಾಸ್ ಹತ್ಯೆ ಆದ ನಂತರದಲ್ಲಿ ನಡೆಯುತ್ತಿರುವ ತನಿಖೆಯು ಅನುಮಾನಕ್ಕೆ ಆಸ್ಪದ ಮಾಡಿಕೊಟ್ಟಿದೆʼ ಎಂದು ಹೇಳಿದರು.

ಸುಹಾಸ್ ಶೆಟ್ಟಿ ತಾಯಿ, ತಂದೆ ಮತ್ತು ಮಾವನ ಜೊತೆ ಸೇರಿ ಬಿಜೆಪಿ ಶಾಸಕರು, ಪ್ರಮುಖರ ನಿಯೋಗವು ರಾಜ್ಯಪಾಲರನ್ನು ಭೇಟಿ ಮಾಡಿದೆ. ಕೃತ್ಯಕ್ಕೆ ಅನೇಕ ಕಾರುಗಳನ್ನು ಬಳಸಿದ್ದರೂ ಒಂದೆರಡು ಕಾರನ್ನಷ್ಟೇ ವಶಕ್ಕೆ ಪಡೆದಿದ್ದಾರೆ. ಕೇವಲ 10 ಜನರನ್ನಷ್ಟೇ ಬಂಧಿಸಿದ್ದಾರೆ. ಇನ್ನೂ 15-20 ಜನರು ಪ್ರಕರಣದ ಹಿಂದಿರುವ ಮಾಹಿತಿ ಸಿಗುತ್ತಿದೆ. ಕೊಲೆಗಾರರಿಗೆ ರಕ್ಷಣೆ ಕೊಡುವ ಕೆಲಸ ಮಾಡಿದ್ದ ಮಹಿಳೆಯರನ್ನು ಬಂಧಿಸಿಲ್ಲ ಎಂದು ಅವರು ತಿಳಿಸಿದರು.

ಈ ವೇಳೆ ಸುಹಾಸ್ ತಾಯಿ ಸುಲೋಚನಾ ಶೆಟ್ಟಿ, ಮಾವ ರಾಜೇಶ್ ಭಂಡಾರಿ, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್ ಕುಮಾರ್, ವಿಪಕ್ಷ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್, ಪರಿಷತ್ ವಿಪಕ್ಷ ಮುಖ್ಯ ಸಚೇತಕ ರವಿಕುಮಾರ್ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

Tags

BJP delegationGovernorShetty murderNIA
share
ವಾರ್ತಾಭಾರತಿ
ವಾರ್ತಾಭಾರತಿ
Next Story
X