Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬಿಜೆಪಿಯವರು ಎಸ್ಐಆರ್ ನೆಪದಲ್ಲಿ ಜನರ...

ಬಿಜೆಪಿಯವರು ಎಸ್ಐಆರ್ ನೆಪದಲ್ಲಿ ಜನರ ಮತದಾನದ ಹಕ್ಕು ಕಿತ್ತುಕೊಳ್ಳುತ್ತಿದ್ದಾರೆ: ಡಿ.ಕೆ.ಶಿವಕುಮಾರ್

ತಪ್ಪು ಮಾಹಿತಿಯೊಂದಿಗೆ ಫಾರಂ-7 ಸಲ್ಲಿಸುತ್ತಿರುವ ಬಗ್ಗೆ ತನಗೆ ಮಾಹಿತಿ ನೀಡಿ ಎಂದ ಸಿಎಂ

ವಾರ್ತಾಭಾರತಿವಾರ್ತಾಭಾರತಿ1 Oct 2026 10:40 AM IST
share
ಬಿಜೆಪಿಯವರು ಎಸ್ಐಆರ್ ನೆಪದಲ್ಲಿ ಜನರ ಮತದಾನದ ಹಕ್ಕು ಕಿತ್ತುಕೊಳ್ಳುತ್ತಿದ್ದಾರೆ: ಡಿ.ಕೆ.ಶಿವಕುಮಾರ್

ಬೆಂಗಳೂರು, ಅ.1: ಎಸ್ಐಆರ್ನಿಂದ ದೇಶದಲ್ಲಿ ಬಹುದೊಡ್ಡ ಬದಲಾವಣೆ ಆಗುತ್ತಿರುವುದನ್ನು ಎಲ್ಲರೂ ಗಮನಿಸಬೇಕು ಎಂದು ಅವರು ಹೇಳಿದ್ದಾರೆ. ಜನರ ಮತವನ್ನು ಕಾಪಾಡಲು ಮುಖ್ಯಮಂತ್ರಿಯಾಗಿ, ಪ್ರಜಾಸೇವಕನಾಗಿ ಪ್ರಯತ್ನ ಮಾಡುತ್ತಿದ್ದೇನೆ. ಆದರೆ, ಇದರಲ್ಲಿ ವಿಫಲನಾಗಿದ್ದೇನೆ ಎಂಬುದನ್ನು ಒಪ್ಪಿಕೊಳ್ಳುತ್ತೇನೆ. ರಾಜ್ಯದಲ್ಲಿ ಒಂದು ಕೋಟಿಗೂ ಹೆಚ್ಚು ಮತಗಳು ಕಡಿಮೆಯಾಗಿರುವುದನ್ನು ಗಮನಿಸಿದ್ದೀರಿ. ಇದು ವಿವಿಧ ಕಾರಣಗಳಿಂದ ಆಗಿರಬಹುದು. ಆದರೆ, 50 ಲಕ್ಷಕ್ಕೂ ಹೆಚ್ಚು ಮತದಾರರಿಗೆ ನೋಟಿಸ್ ನೀಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಈ ಬಗ್ಗೆ ವೀಡಿಯೋ ಸಂದೇಶ ಬಿಡುಗಡೆ ಮಾಡಿರುವ ಮುಖ್ಯಮಂತ್ರಿ, ಇನ್ನೂ ಮೂರು ದಿನಗಳ ಒಳಗೆ ಅರ್ಜಿ ಹಾಗೂ ಆಕ್ಷೇಪಗಳನ್ನು ಸಲ್ಲಿಸುವ ಸಂದರ್ಭ ಕೆಲವು ಬಿಜೆಪಿ ಮುಖಂಡರು ಕೇಂದ್ರದ ತಮ್ಮ ನಾಯಕರ, ಸ್ಥಳೀಯ ನಾಯಕರ ನಿರ್ದೇಶನದ ಮೇರೆಗೆ, ಬಡವರು, ಅಲ್ಪಸಂಖ್ಯಾತರು ಹಾಗೂ ದಲಿತರ ಮತಗಳನ್ನು ತೆಗೆದುಹಾಕಲು ಮುಂದಾಗಿದ್ದಾರೆ. ಇದಕ್ಕಾಗಿ ಫಾರಂ-7 ನೀಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಯಾವ ವಿಧಾನ ಸಭಾ ಕ್ಷೇತ್ರಗಳಲ್ಲಿ ಫಾರಂ-7ನ್ನು ಮೋಸದಿಂದ ಸಲ್ಲಿಸಲಾಗಿದೆ ಎಂಬುದನ್ನು ತಮ್ಮ ಪಕ್ಷದ ನಾಯಕರು ದಾಖಲೆಗಳನ್ನು ನೀಡಿದ್ದಾರೆ. ಈ ಬಗ್ಗೆ ಕ್ರಿಮಿನಲ್ ತನಿಖೆಯ ಅಗತ್ಯವಿದೆ. ರಾಜ್ಯದ ಮುಖ್ಯಮಂತ್ರಿಯಾಗಿ ಜನರ ಮತವನ್ನು ಉಳಿಸುವುದು ತನ್ನ ಕರ್ತವ್ಯ ಎಂದಿದ್ದಾರೆ.

ಬಿಎಲ್ಎ-1, ಬಿಎಲ್ಎ-2 ಹಾಗೂ ಬಿಎಲ್ಒಗಳಿಗೆ ಅರ್ಜಿ ನೀಡಿ ಮತಗಳನ್ನು ತೆಗೆದುಹಾಕಲು ಯತ್ನಿಸಲಾಗುತ್ತಿದೆ. ಈ ಬಗ್ಗೆ ಸಾರ್ವಜನಿಕರ ಬಳಿ ಇರುವ ಯಾವುದೇ ಮಾಹಿತಿಯಿದ್ದಲ್ಲಿ ಕೂಡಲೇ ಮುಖ್ಯಮಂತ್ರಿ ಕಚೇರಿಗೆ ತಲುಪಿಸುವಂತೆ ಮನವಿ ಮಾಡಿದ್ದಾರೆ.

ನಾಳೆ ತಾನು ಖುದ್ದಾಗಿ ಚುನಾವಣಾ ಆಯೋಗವನ್ನು ಭೇಟಿ ಮಾಡಿ ಈ ಕುರಿತು ಚರ್ಚಿಸುತ್ತೇನೆ. ಅನೇಕ ಸಂಗತಿಗಳೊಂದಿಗೆ ಈ ವಿಚಾರವನ್ನು ಬಯಲಿಗೆಳೆಯಲಿದ್ದೇನೆ. ಇದಕ್ಕೆ ಜನರ ಮಾಹಿತಿ ಅಗತ್ಯವಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಈಶ್ವರ್ ಖಂಡ್ರೆ ಅವರ ಭಾಲ್ಕಿ ಕ್ಷೇತ್ರ, ನಯನಾ ಮೋಟಮ್ಮ ಹಾಗೂ ತನ್ವೀರ್ ಸೇಠ್, ಮಾಜಿ ಶಾಸಕ ಸೋಮಶೇಖರ್, ರಾಜೀವ್ ಸೇಠ್ ಅವರ ಕ್ಷೇತ್ರಗಳಲ್ಲೂ ಮತವನ್ನು ತೆಗೆದುಹಾಕುವ ಇಂತಹ ಪ್ರಯತ್ನ ನಡೆಯುತ್ತಿದೆ. ಈ ರೀತಿ ಇಡೀ ರಾಜ್ಯದಲ್ಲಿ ದೊಡ್ಡ ಕುತಂತ್ರ ನಡೆಯುತ್ತಿದೆ ಎಂದು ಎಚ್ಚರಿಸಿದ ಮುಖ್ಯಮಂತ್ರಿ, ಈ ಬಗ್ಗೆ ಎಲ್ಲರೂ ಜಾಗೃತರಾಗಿರಿ. ಎಲ್ಲೆಲ್ಲಿ ಫಾರಂ-7 ಕೊಟ್ಟಿದ್ದಾರೆ ಎಂಬುದನ್ನು ಪತ್ತೆಹಚ್ಚಿ 12 ಗಂಟೆಯೊಳಗೆ ಮಾಹಿತಿ ನೀಡುವಂತೆ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ.

ಮಾಹಿತಿ ನೀಡಿ

ಮತದಾನವು ದೇಶದ ಪ್ರತಿಯೊಬ್ಬ ಪ್ರಜೆಯ ಮೂಲಭೂತ ಹಕ್ಕು. ಆದರೆ, ಬಿಜೆಪಿಯವರು ಎಸ್ಐಆರ್ ನೆಪದಲ್ಲಿ ಜನರಿಂದ ಈ ಹಕ್ಕನ್ನು ಕಿತ್ತುಕೊಳ್ಳುತ್ತಿದ್ದಾರೆ. ದೀನ ದಲಿತರು, ಬಡವರು ಹಾಗೂ ಅಲ್ಪಸಂಖ್ಯಾತರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡುವ ಉದ್ದೇಶದಿಂದ ತಪ್ಪು ಮಾಹಿತಿಯೊಂದಿಗೆ 'ಫಾರಂ-7' ಸಲ್ಲಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಇಂತಹ ಕೃತ್ಯವೆಸಗುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಈ ರೀತಿ ತಪ್ಪು ಮಾಹಿತಿ ನೀಡಿ ನಾಗರಿಕರನ್ನು ಮತದಾರರ ಪಟ್ಟಿಯಿಂದ ದೂರವಿಡುವವರ ಬಗ್ಗೆ ಬಿಎಲ್ಎಗಳು ನನಗೆ ನಿಖರ ಮಾಹಿತಿ ನೀಡಬೇಕು. ದಯವಿಟ್ಟು ಈ ಮಾಹಿತಿಯನ್ನು dkshivakumarlistens@gmail.com ಗೆ ಕಳುಹಿಸಿ ಎಂದವರು ಮನವಿ ಮಾಡಿದ್ದಾರೆ.

Tags

BJP is snatchingguise of SIRD.K. Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X