Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬಿಜೆಪಿ ದುರ್ಬಲವಾಗಿರುವುದಕ್ಕೆ ಹಾಲಿ...

ಬಿಜೆಪಿ ದುರ್ಬಲವಾಗಿರುವುದಕ್ಕೆ ಹಾಲಿ ಸಂಸದರಿಗೆ ಟಿಕೆಟ್ ನೀಡಿಲ್ಲ: ಡಿ.ಕೆ ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ28 March 2024 11:46 AM IST
share
ಬಿಜೆಪಿ ದುರ್ಬಲವಾಗಿರುವುದಕ್ಕೆ ಹಾಲಿ ಸಂಸದರಿಗೆ ಟಿಕೆಟ್ ನೀಡಿಲ್ಲ: ಡಿ.ಕೆ ಶಿವಕುಮಾರ್

ಬೆಂಗಳೂರು, ಮಾರ್ಚ್ 28: "ಕೋಲಾರದಲ್ಲಿ ಎಲ್ಲಾ ನಾಯಕರು ಒಟ್ಟಾಗಿ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಕೆಲಸ ಮಾಡಲಿದ್ದಾರೆ. ಯಾರ ವೈಯಕ್ತಿಕ ಪ್ರತಿಷ್ಠೆಗೂ ಪಕ್ಷದಲ್ಲಿ ಅವಕಾಶ ನೀಡುವುದಿಲ್ಲ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಗುರುವಾರ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, "ಯಾರೂ ರಾಜೀನಾಮೆ ನೀಡಲ್ಲ. ಟಿಕೆಟ್ ವಿಚಾರವಾಗಿ ಒತ್ತಡ ಇದೆ. ಪಕ್ಷ ಇದುವರೆಗೂ ಯಾರಿಗೂ ಟಿಕೆಟ್ ಘೋಷಣೆ ಮಾಡಿಲ್ಲ. ಇಂದು ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಚರ್ಚೆ ಮಾಡಲಾಗುವುದು" ಎಂದು ತಿಳಿಸಿದರು.

ಬಿಜೆಪಿ ಹಾಗೂ ಜೆಡಿಎಸ್ ಸೇರಿ ಓರ್ವ ಅಭ್ಯರ್ಥಿಯನ್ನು ಕಣಕ್ಕಿಳಿಸಿರುವ ಬಗ್ಗೆ ಕೇಳಿದಾಗ, "ನಾವು ದೇವೇಗೌಡರ ಕುಟುಂಬದ ವಿರುದ್ಧ ಅನೇಕ ಚುನಾವಣೆಗಳನ್ನು ಮಾಡಿದ್ದೇವೆ. ದೇವೇಗೌಡರ ವಿರುದ್ಧ ಓರ್ವ ಮಹಿಳೆಯನ್ನು ನಿಲ್ಲಿಸಿ ಗೆಲ್ಲಿಸಿದ್ದೇವೆ. ನಾನು ಕುಮಾರಸ್ವಾಮಿ ಅವರ ವಿರುದ್ಧ ಸ್ಪರ್ಧಿಸಿ ಗೆದ್ದಿದ್ದೇನೆ. 2013ರ ಉಪಚುನಾವಣೆಯಲ್ಲಿ ಇದೇ ರೀತಿ ಜೆಡಿಎಸ್ ಹಾಗೂ ಬಿಜೆಪಿ ಸೇರಿ ಅನಿತಾ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸಿದಾಗ ಸುರೇಶ್ ಅವರು ಗೆದ್ದಿದ್ದರು. ಆಗ ಸಿದ್ದರಾಮಯ್ಯ ಅವರ ಸರ್ಕಾರ ಇದ್ದರೂ ನಾನು ಸಚಿವನಾಗಿರಲಿಲ್ಲ. ಆಗ ನನಗೆ ದೊಡ್ಡ ಸವಾಲಾಗಿತ್ತು. ಆಗಲೂ ನಾವು ಅನಿತಾ ಕುಮಾರಸ್ವಾಮಿ ಅವರನ್ನು 1.30 ಲಕ್ಷ ಮತಗಳಿಂದ ಮಣಿಸಿದೆವು. ನಂತರ ಜನ ಸುರೇಶ್ ಅವರನ್ನು ಸತತವಾಗಿ ಗೆಲ್ಲಿಸಿಕೊಂಡು ಬಂದಿದ್ದಾರೆ" ಎಂದು ತಿಳಿಸಿದರು.

ಚಿತ್ರದುರ್ಗದಲ್ಲಿ ಬಿಜೆಪಿಯಿಂದ ಮಾಜಿ ಸಚಿವ ಗೋವಿಂದ ಕಾರಜೋಳ ಅವರ ಸ್ಪರ್ಧೆ ಬಗ್ಗೆ ಕೇಳಿದಾಗ, "ಅವರ ಪಕ್ಷದಿಂದ ಯಾರನ್ನಾದರೂ ನಿಲ್ಲಿಸಲಿ. ನಾವು ಚಂದ್ರಪ್ಪ ಅವರನ್ನು ಕಣಕ್ಕಿಳಿಸಿದ್ದೇವೆ. ಹಾಲಿ ಸಚಿವರಿಗೆ, ಹಾಲಿ ಸಂಸದರಿಗೆ ಬಿಜೆಪಿ ಟಿಕೆಟ್ ನೀಡಿಲ್ಲ. ಆಮೂಲಕ ಅವರ ಪಕ್ಷ ದುರ್ಬಲವಾಗಿದೆ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ" ಎಂದರು.

ಚುನಾವಣೆಯ ಸ್ಟಾರ್ ಪ್ರಚಾರಕರಾಗಿ ಯಾರು ಆಗಮಿಸಲಿದ್ದಾರೆ ಎಂದು ಕೇಳಿದಾಗ, "ಎಐಸಿಸಿ ಅಧ್ಯಕ್ಷರು ನಮ್ಮವರೇ. ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರಿಗೆ ಆಗಮಿಸುವಂತೆ ಮನವಿ ಮಾಡಿದ್ದೇವೆ. ಅವರು ಇಡೀ ದೇಶದಲ್ಲಿ ಪ್ರಚಾರ ಮಾಡಬೇಕಿದ್ದು, ಅವರಿಂದ ರಾಜ್ಯದಲ್ಲಿ ಹೆಚ್ಚು ದಿನಗಳ ಪ್ರಚಾರ ನಿರೀಕ್ಷೆ ಮಾಡಲು ಆಗುವುದಿಲ್ಲ" ಎಂದು ತಿಳಿಸಿದರು.

ಕೋವಿಡ್ ಸಮಯದಲ್ಲಿ ಸುರೇಶ್ ಅವರ ಸೇವೆ ಒಂದು ಇತಿಹಾಸ:

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ತಯಾರಿ ಬಗ್ಗೆ ಕೇಳಿದಾಗ, "ನಾವು ಕೇವಲ ಇಂದು ಚುನಾವಣೆ ತಯಾರಿ ಮಾಡುತ್ತಿಲ್ಲ. ಸುರೇಶ್ ಅವರು ಗೆದ್ದ ಮೊದಲ ದಿನದಿಂದ ಪ್ರತಿ ನಿತ್ಯ ಕೆಲಸ ಮಾಡಿಕೊಂಡೆ ಬಂದಿದ್ದಾರೆ. ಕೋವಿಡ್ ಸಮಯದಲ್ಲಿ ಕೇಂದ್ರ ಸಚಿವ ಸುರೇಶ್ ಅಂಗಡಿ ಅವರ ದೇಹವನ್ನು ಅವರ ತವರೂರಿಗೆ ತರಲು ಬಿಜೆಪಿ ಕೇಂದ್ರ ಸರ್ಕಾರ ಅವಕಾಶ ನೀಡಲಿಲ್ಲ. ಆದರೆ ಡಿ.ಕೆ. ಸುರೇಶ್ ಅವರು ಕೋವಿಡ್ ಕಷ್ಟಕಾಲದಲ್ಲಿ ರೈತರಿಂದ ಹಣ್ಣು ತರಕಾರಿ ಖರೀದಿ ಮಾಡಿ ಜನರಿಗೆ ಉಚಿತವಾಗಿ ಹಂಚಿದ್ದಾರೆ. ಜನರಿಗೆ ಮೆಡಿಕಲ್ ಕಿಟ್ ನೀಡಿ ಸಹಾಯ ಮಾಡಿದರು. ಸರ್ಕಾರ ಶವಗಳನ್ನು ಜೆಸಿಬಿಯಲ್ಲಿ ಎಸೆಯುತ್ತಿರುವಾಗ, ಕೋವಿಡ್ ನಿಂದ ಮೃತಪಟ್ಟವರ ಅಂತ್ಯಸಂಸ್ಕಾರಕ್ಕೆ ಅವರ ಮನೆಯವರು ಮುಂದೆ ಬಾರದಿದ್ದಾಗ ಡಿ.ಕೆ ಸುರೇಶ್ ಪಿಪಿಇ ಕಿಟ್ ಧರಿಸಿ ಶವಗಳ ಅಂತ್ಯ ಸಂಸ್ಕಾರ ಮಾಡಿದರು. ಎಲ್ಲಾ ನಾಯಕರು ಮನೆಯಿಂದ ಆಚೆ ಬರಲು ಹಿಂಜರಿದಾಗ, ಸುರೇಶ್ ಅವರು ಆಸ್ಪತ್ರೆಗಳಿಗೆ ಹೋಗಿ, ಕೋವಿಡ್ ಸೋಂಕಿತರ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದರು. ಇದೆಲ್ಲವೂ ಇತಿಹಾಸ. ಅಂತಹ ಕಷ್ಟ ಕಾಲದಲ್ಲಿ ತಮ್ಮ ಪ್ರಾಣವನ್ನು ಲೆಕ್ಕಿಸದೆ ಕ್ಷೇತ್ರದ ಜನರಿಗಾಗಿ ಶ್ರಮಿಸಿದ್ದಾರೆ. ಇದ್ಯಾವುದೂ ಚುನಾವಣೆ ಸಮಯದಲ್ಲಿ ಮಾಡಿದ ಕೆಲಸವಲ್ಲ. ಸುರೇಶ್ ಅವರು ಪ್ರತಿ ಹಳ್ಳಿ, ಹಳ್ಳಿ ಸುತ್ತಾಡಿ ಪಂಚಾಯ್ತಿ ಸದಸ್ಯನಂತೆ ಕೆಲಸ ಮಾಡಿದ್ದಾರೆ.ಹೀಗಾಗಿ ನಾವು ಈ ಬಾರಿಯ ಚುನಾವಣೆಯಲ್ಲಿ ನಾವು ವಿಶೇಷವಾದ ತಯಾರಿ ಮಾಡುವ ಅಗತ್ಯವಿಲ್ಲ. ನಮ್ಮ ಪರವಾಗಿ ಜನರು, ಕಾರ್ಯಕರ್ತರು ಇದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X