Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬಿಜೆಪಿ-ಜೆಡಿಎಸ್ ಮೈತ್ರಿಯು ಈ ಚುನಾವಣೆಗೆ...

ಬಿಜೆಪಿ-ಜೆಡಿಎಸ್ ಮೈತ್ರಿಯು ಈ ಚುನಾವಣೆಗೆ ಮಾತ್ರವಲ್ಲ, ಇದು ಮುಂದೆಯೂ ಇರಲಿದೆ : ಎಚ್.​ಡಿ ಕುಮಾರಸ್ವಾಮಿ

ಮೈತ್ರಿಯಿಂದ ಕಾಂಗ್ರೆಸ್ ಪಕ್ಷಕ್ಕೆ ನಡುಕ ಉಂಟಾಗಿದೆ ಎಂದ ಮಾಜಿ ಸಿಎಂ

ವಾರ್ತಾಭಾರತಿವಾರ್ತಾಭಾರತಿ29 March 2024 5:26 PM IST
share
ಬಿಜೆಪಿ-ಜೆಡಿಎಸ್ ಮೈತ್ರಿಯು ಈ ಚುನಾವಣೆಗೆ ಮಾತ್ರವಲ್ಲ, ಇದು ಮುಂದೆಯೂ ಇರಲಿದೆ : ಎಚ್.​ಡಿ ಕುಮಾರಸ್ವಾಮಿ

ಬೆಂಗಳೂರು: ರಾಜ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯಿಂದ ಕಾಂಗ್ರೆಸ್ ಪಕ್ಷಕ್ಕೆ ನಡುಕ ಬಂದಿದೆ. ನಾವೂ ಎಲ್ಲಿಯೂ ಮೈ ಮರೆಯೋದು ಬೇಡ. ಸೂರ್ಯಚಂದ್ರರು ಹುಟ್ಟೋದು ಎಷ್ಟು ಸತ್ಯವೋ ಕೇಂದ್ರದಲ್ಲಿ ನರೇಂದ್ರ ಮೋದಿ ಅವರ ಸರಕಾರ ಮತ್ತೆ ಬರುವುದು ಅಷ್ಟೇ ಸತ್ಯ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.

ಬೆಂಗಳೂರಿನಲ್ಲಿ ನಡೆದ ಜೆಡಿಎಸ್ -ಬಿಜೆಪಿ ಸಮನ್ವಯ ಸಮಿತಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಮ್ಮ ಎರಡು ಪಕ್ಷಗಳ ಸಮನ್ವಯತೆಯನ್ನು ಬೂತ್ ಮಟ್ಟದಿಂದ ಬಲಪಡಿಸಿಕೊಳ್ಳಬೇಕು. ಇವತ್ತಿನ ಮೈತ್ರಿಗೆ ಈ ಚುನಾವಣೆ ಮೂಲಕ ಭದ್ರ ಬುನಾದಿ ಹಾಕಿದರೆ ಭವಿಷ್ಯದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಇಲ್ಲದಂತೆ ಮಾಡಬಹುದು ಎಂದರು.

ಪ್ರತಿಷ್ಠೆಗೆ ಬೀಳುವುದು ಬೇಡ

ಕಾಂಗ್ರೆಸ್ ನವರಿಗೆ ಮೈತ್ರಿಯ ಬಗ್ಗೆ ನಡುಕ ಉಂಟಾಗಿದೆ. ಇಡೀ ರಾಜ್ಯದ ಜನ ನಮ್ಮ ಮೈತ್ರಿಕೂಟದ ಬಗ್ಗೆ ಒಳ್ಳೆಯ ಅಭಿಪ್ರಾಯ ಹೊಂದಿದ್ದಾರೆ. ನರೇಂದ್ರ ಮೋದಿ ಅವರು ಪ್ರಧಾನಿ ಆಗಬೇಕು ಎಂದು ಎಲ್ಲರೂ ಭಾವಿಸಿದ್ದಾರೆ. ಹೀಗಾಗಿ ನಮ್ಮಲ್ಲಿನ‌ ವಿಶ್ವಾಸಕ್ಕೆ ಕಿಂಚಿತ್ತೂ ವ್ಯತ್ಯಾಸ ಬರಬಾರದು. ಏನೇ ಸಮಸ್ಯೆ ಇದ್ದರೂ, ನಮ್ಮ ಗಮನಕ್ಕೆ ತನ್ನಿ. ಯಾರೂ ವೈಯಕ್ತಿಕ ಪ್ರತಿಷ್ಠೆಗೆ ಬೀಳುವುದು ಬೇಡ. ನಮ್ಮ ಮನಸ್ಸು ಶುದ್ದ, ಮೈತ್ರಿಯು ಈ ಚುನಾವಣೆಗೆ ಮಾತ್ರವಲ್ಲ, ಇದು ಮುಂದೆಯೂ ಮುಂದುವರಿಸಿಕೊಂಡು ಹೋಗಬೇಕು. ಈ ಮೈತ್ರಿ ನಾವು ಅಧಿಕಾರಕ್ಕಾಗಿ ಅಲ್ಲ, ರಾಜ್ಯದ ಅಭಿವೃದ್ಧಿಗಾಗಿ ಎಂದು ಒತ್ತಿ ಹೇಳಿದರು.

ನಾನು, ಯಡಿಯೂರಪ್ಪ ಒಳ್ಳೆಯ ಕೆಲಸ ಮಾಡಿದ್ದೇವೆ

2006ರಲ್ಲಿ ಜೆಡಿಎಸ್ ಬಿಜೆಪಿ ಮೈತ್ರಿ ಆದಾಗ ದೇಶಕ್ಕೆ ಮಾದರಿಯಾಗುವ ಸರಕಾರ ಮಾಡಿದ್ದೇವೆ. ನಾನು ಮುಖಸ್ತುತಿಗೆ ಈ ಮಾತು ಹೇಳುತ್ತಿಲ್ಲ, ಹಿರಿಯರಾದ ಯಡಿಯೂರಪ್ಪ ಮತ್ತು ನಾನು ಜನ ಮೆಚ್ಚುವ ರೀತಿಯಲ್ಲಿ ಕೆಲಸ ಮಾಡಿದ್ದೇವೆ. ಆ 20 ತಿಂಗಳುಗಳ ಆಡಳಿತ ಜನರ ಮನಸ್ಸಿನಲ್ಲಿ ಈಗಲೂ ಇದೆ. ಈ ಲೋಕಸಭೆ ಚುನಾವಣೆಯಲ್ಲಿ ಒಳ್ಳೆಯ ಫಲಿತಾಂಶ ಪಡೆಯುವ ಮೂಲಕ ಅಂತಹ ಮಾದರಿ ಸರಕಾರ ತರಲು ನಾವೆಲ್ಲರೂ ಪ್ರಯತ್ನ ಮಾಡಬೇಕು ಎಂದು ಕುಮಾರಸ್ವಾಮಿ ಹೇಳಿದರು.

ಅಂದು ಇಂದು ಬಿಜೆಪಿಯ ಅನೇಕ ನಾಯಕರು ನನ್ನ ಮೇಲೆ ಅಪಾರವಾದ ಪ್ರೀತಿ ವಿಶ್ವಾಸ ಇಟ್ಟುಕೊಂಡಿದ್ದಾರೆ. ಮೈತ್ರಿ ಸಂದರ್ಭದಲ್ಲಿ ದೇವೇಗೌಡರಿಗೆ ಕೆಲವರು ತಪ್ಪು ಮಾಹಿತಿ ನೀಡಿದ್ದರಿಂದ ಸಮಸ್ಯೆಗಳು ಆದವು. ಆಗಲೇ ನನಗೆ ಬಿಜೆಪಿಯ ಜತೆ ದೀರ್ಘಾವಧಿ ಮೈತ್ರಿಯ ಉದ್ದೇಶ ಇತ್ತು. ಕಾರಣಾಂತರಗಳಿಂದ ಅದು ಸಾಧ್ಯವಾಗದಿರುವ ಬಗ್ಗೆ ನನಗೆ ಬೇಸರವಿದೆ ಎಂದು ಅವರು ಹೇಳಿದರು.

2018ರಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಆಗಬೇಕಿತ್ತು. ಆಗ ಮೈತ್ರಿ ಆಗಿದ್ದಿದ್ದರೆ ಬಹುಶಃ ಇಂದಿಗೂ ರಾಜ್ಯದಲ್ಲಿ ನಮ್ಮ ಮೈತ್ರಿ ಸರಕಾರವೇ ಇರುತ್ತಿತ್ತು. ವಿಧಿಯಾಟ, ಆವತ್ತು ಏನೋ ನಡೆದು ಹೋಗಿದೆ ಎಂದು ಕುಮಾರಸ್ವಾಮಿ ಅವರು ನುಡಿದರು.

ಕಾಂಗ್ರೆಸ್ ಸುಳ್ಳು ಹೇಳುತ್ತಿದೆ

ರಾಜ್ಯದ ಕಾಂಗ್ರೆಸ್ ಸರಕಾರ ಎಲ್ಲಾ ಕ್ಷೇತ್ರಗಳಲ್ಲಿಯೂ ವಿಫಲವಾಗಿದೆ. ಅದನ್ನೇ ನಾವು ಜನರ ಮನಸ್ಸಿಗೆ ಮುಟ್ಟುವಂತೆ ಹೇಳಬೇಕು. ನಿತ್ಯವ್ಯೂ ಕೇಂದ್ರ ಸರಕಾರದ ವಿರುದ್ಧ ಕಾಂಗ್ರೆಸ್ ಆರೋಪ ಮಾಡುತ್ತಿದೆ. ಗ್ಯಾರಂಟಿಗಳನ್ನು ಕೊಟ್ಟು ಏನೋ ಸಾಧನೆ ಮಾಡಿದ್ದೇವೆ ಅಂತಾರೆ. ಐದು ವರ್ಷಗಳಲ್ಲಿ ಯಾವ ರಾಜ್ಯಕ್ಕೆ ಎಷ್ಟು ಹಣ ಹಂಚಿಕೆ ಮಾಡಬೇಕು ಎಂದು ಹಣಕಾಸು ಆಯೋಗ ತೀರ್ಮಾನ ಮಾಡಿರುತ್ತದೆ. ಆದರೆ, ಕಾಂಗ್ರೆಸ್ ಸರಕಾರ ಸುಳ್ಳು ಹೇಳಿಕೊಂಡು ಜನರನ್ನು ದಿಕ್ಕು ತಪ್ಪಿಸುತ್ತಿದೆ ಎಂದು ಅವರು ನೇರ ಆರೋಪ ಮಾಡಿದರು.

ಮಾಜಿ ಪ್ರಧಾನಿಗಳಾದ ಎಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ, ಬಿಜೆಪಿ ರಾಜ್ಯ ಉಸ್ತುವಾರಿ ರಾಧಾ ಮೋಹನ್ ಅಗರವಾಲ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಪ್ರತಿಪಕ್ಷ ನಾಯಕ ಆರ್. ಅಶೋಕ, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡ, ಚಿತ್ರದುರ್ಗ ಲೋಕಸಭೆ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಗೋವಿಂದ ಕಾರಜೋಳ, ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ.ಸದಾನಂದ ಗೌಡ, ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸೇರಿದಂತೆ ಎರಡೂ ಪಕ್ಷಗಳ ಮಾಜಿ ಸದುವರು, ಶಾಸಕರು, ಮಾಜಿ ಶಾಸಕರು, ಪದಾಧಿಕಾರಿಗಳು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X