ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರ: ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿದ್ದು ಹೀಗೆ...
![ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರ: ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿದ್ದು ಹೀಗೆ... ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರ: ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿದ್ದು ಹೀಗೆ...](https://www.varthabharati.in/h-upload/2023/09/08/1188593-fb7.webp)
ಮೈಸೂರು: ಪಕ್ಷದ ಹಿತದೃಷ್ಟಿಯಿಂದ ಕೇಂದ್ರ ಮತ್ತು ರಾಜ್ಯ ನಾಯಕರು ಯಾವುದೇ ನಿರ್ಧಾರ ಕೈಗೊಂಡರು ಬೆಂಬಲಿಸುತ್ತೇವೆ ಎಂದು ಎಂದು ಸಂಸದ ಪ್ರತಾಪಸಿಂಹ ತಿಳಿಸಿದರು.
ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರವಾಗಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ʼʼಹೈಕಮಾಂಡ್ ನಿರ್ಧಾರವನ್ನು ಮುಖಂಡರು, ಕಾರ್ಯಕರ್ತರು ಬೆಂಬಲಿಸುತ್ತಾರೆʼʼ ಎಂದರು.
ʼʼಇವತ್ತಿಗೂ ಬಿ.ಎಸ್.ಯಡಿಯೂರಪ್ಪ ಅವರು ಪ್ರಶ್ನಾತೀತ ನಾಯಕರು. ತಳಮಟ್ಟದಿಂದ ಪಕ್ಷವನ್ನು ಕಟ್ಟಿ ಬೆಳೆಸಿದ್ದಾರೆ. ಎರಡೆರಡು ಬಾರಿ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ. ಪಕ್ಷದ ಹಿತದೃಷ್ಟಿಯಿಂದ ಅವರು ಹೇಳಿರುವುದಕ್ಕೆ ಬದ್ಧರಾಗಿರುತ್ತೇವೆʼʼ ಎಂದರು.
ʼʼಕರ್ನಾಟಕದಲ್ಲಿ 2004ರಿಂದ ಸತತವಾಗಿ ಬಿಜೆಪಿ ಹೆಚ್ಚು ಸ್ಥಾನಗಳನ್ನು ಪಡೆಯುತ್ತಿದೆ. 2004ರಲ್ಲಿ 18, 2009ರಲ್ಲಿ19, 2014ರಲ್ಲಿ17, 2019ರಲ್ಲಿ 25 ಸ್ಥಾನಗಳು ಬಂದಿದೆ. ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದ ಪ್ರಜ್ಞಾವಂತ ಮತದಾರರು ಗ್ಯಾರಂಟಿಗೆ ಮರುಳಾದರು. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ ತಕ್ಕ ಪಾಠ ಕಲಿಸುತ್ತಾರೆʼʼ ಎಂದು ಅವರು ಹೇಳಿದರು.