Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಜ್ಯದಲ್ಲಿ 'ಅಹಿಂದ' ಮತದಾರರ ಡಿಲೀಟ್ ಗೆ...

ರಾಜ್ಯದಲ್ಲಿ 'ಅಹಿಂದ' ಮತದಾರರ ಡಿಲೀಟ್ ಗೆ ಬಿಜೆಪಿ-ಜೆಡಿಎಸ್ ನಿಂದ ಷಡ್ಯಂತ್ರ: ಡಿ.ಕೆ.ಶಿವಕುಮಾರ್

"ಅಕ್ರಮ ಎಸಗಿದವರ ವಿರುದ್ಧ ಚುನಾವಣಾ ಆಯೋಗ ಪ್ರಕರಣ ದಾಖಲಿಸಬೇಕು"

ವಾರ್ತಾಭಾರತಿವಾರ್ತಾಭಾರತಿ1 Oct 2026 3:56 PM IST
share
ರಾಜ್ಯದಲ್ಲಿ ಅಹಿಂದ ಮತದಾರರ ಡಿಲೀಟ್ ಗೆ ಬಿಜೆಪಿ-ಜೆಡಿಎಸ್ ನಿಂದ ಷಡ್ಯಂತ್ರ: ಡಿ.ಕೆ.ಶಿವಕುಮಾರ್

ಬೆಂಗಳೂರು, ಅ.1:ಪೂರ್ವಮುದ್ರಿತ ಮತದಾರರ ವಿವರಗಳನ್ನು ಒಳಗೊಂಡ ಫಾರಂ -7 ಮೂಲಕ ರಾಜ್ಯದ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಅರ್ಹ ಮತದಾರರನ್ನು ಮತದಾರರ ಪಟ್ಟಿಯಿಂದ ಹೊರಗಿಡುವ (ಡಿಲೀಟ್) ಷ್ಯಡ್ಯಂತ್ರ ಬಿಜೆಪಿ, ಜೆಡಿಎಸ್ ನಿಂದ ನಡೆದಿದೆ. ಈ ಸಂಬಂಧ ಚುನಾವಣಾ ಆಯೋಗ ಪ್ರಕರಣ ದಾಖಲಿಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಗ್ರಹಿಸಿದ್ದಾರೆ.

ಗುರುವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಮುಖ್ಯಮಂತ್ರಿ, ಮತದಾರರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಲು ಬಿಜೆಪಿ ಹಾಗೂ ಜನತಾ ದಳ ಕ್ರಿಮಿನಲ್ ಸಂಚು ರೂಪಿಸಿ ವ್ಯಾಪಕ ಅಕ್ರಮದಲ್ಲಿ ತೊಡಗಿರುವುದು ಬಯಲಿಗೆ ಬಂದಿದ್ದು, ಇದರ ವಿರುದ್ಧ ಸರಕಾರ ಕಾನೂನು ಕ್ರಮ ಸೇರಿದಂತೆ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ತಿಳಿಸಿದರು.

ರಾಜ್ಯದ ಹಲವು ಜಿಲ್ಲೆಗಳ ಹಲವು ವಿಧಾನಸಭಾ ಕ್ಷೇತ್ರಗಳಲ್ಲಿ ಪೂರ್ವ ಮುದ್ರಿತ ಮಾಹಿತಿಗಳನ್ನು ಒಳಗೊಂಡ ಫಾರಂ 7 ಅನ್ನು ಬಿಜೆಪಿ ಕಾರ್ಯಕರ್ತರು ಬಿಎಲ್ ಒಗಳಿಗೆ ಸಲ್ಲಿಸಿ, ಮತದಾರರ ಹೆಸರನ್ನು ಪಟ್ಟಿಯಿಂದ ತೆಗೆದು ಹಾಕಲು ಪ್ರಯತ್ನಿಸುತ್ತಿರುವುದು ಪತ್ತೆಯಾಗಿದೆ. ಇದು ಕ್ರಿಮಿನಲ್ ಸಂಚಾಗಿದ್ದು, ಕೋಮು ದ್ವೇಷ ಮೂಡಿಸಿ, ಕೋಮು ಸಾಮರಸ್ಯ ಕದಡಲು ನಡೆಸಿದ ವ್ಯವಸ್ಥಿತ ಷಡ್ಯಂತ್ರ ಎಂದು ಆಪಾದಿಸಿದರು.

ಮತಗಳ ಡಿಲೀಟ್ ಗೆ ಪಿತೂರಿ: ಬಬಲೇಶ್ವರದಲ್ಲಿ 1634 ಸಾವಿರಕ್ಕೂ ಅಧಿಕ ಇಂತಹ ಅರ್ಜಿಗಳನ್ನು ಸಲ್ಲಿಸಲಾಗಿದೆ. ವಿಜಯಪುರದಲ್ಲಿ 14 ಸಾವಿರ ಅರ್ಜಿಗಳನ್ನು ಸಲ್ಲಿಸಲಾಗಿತ್ತು. ಭಾಲ್ಕಿಯಲ್ಲಿ 3244 ಇಂತಹ ಅರ್ಜಿಗಳನ್ನು ಬಿಜೆಪಿ ಕಾರ್ಯಕರ್ತರು ನೀಡಿದ್ದಾರೆ. ಭಾಲ್ಕಿ, ನರಸಿಂಹರಾಜಪುರ, ಬೆಳಗಾವಿ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಅರ್ಹ ಮತದಾರರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಲು ಫಾರಂ 7 ನೀಡಿರುವುದು ಕಂಡು ಬಂದಿದೆ ಎಂದ ಮುಖ್ಯಮಂತ್ರಿ, ಮತ್ತೆ ಕೆಲವು ಕ್ಷೇತ್ರಗಳಲ್ಲಿ 5-10 ಸಾವಿರ ಮತಗಳನ್ನು ಡಿಲೀಟ್ ಮಾಡುವ ಷಡ್ಯಂತ್ರ ನಡೆದಿದೆ. ಪ್ರಕಾಶ್ ರಾಜ್ ನೇತೃತ್ವದ ಸಿವಿಲ್ ಸೊಸೈಟಿ ಸದಸ್ಯರು ಮತಗಟ್ಟೆಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ" ಎಂದು ಮಾಹಿತಿ ನೀಡಿದರು.

"ಬಿಜೆಪಿಯ ಅಧಿಕೃತ ಕಾರ್ಯಕರ್ತರು ತಮ್ಮ ಹೆಸರಿನಲ್ಲಿ ನೂರಾರು ಇಂತಹ ಫಾರಂ 7 ಅರ್ಜಿಗಳನ್ನು ಸಲ್ಲಿಸಿರುವುದನ್ನು ನಾವು ಪತ್ತೆ ಹಚ್ಚಿದ್ದೇವೆ. ಕೆಲವು ಕಡೆ ಬಿಜೆಪಿ ಕಾರ್ಯಕರ್ತರು ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಬಿಜೆಪಿ ಹಾಗೂ ಜನತಾದಳದ ಷಡ್ಯಂತ್ರ ಇದೀಗ ಬಯಲಾಗಿದೆ. ಫಾರಂ 7 ರಲ್ಲಿ ಮಾಹಿತಿಯನ್ನು ಮುದ್ರಿಸಿ ಬಿಜೆಪಿ ಕಾರ್ಯಕರ್ತರು ಈ ಕಾರ್ಯದಲ್ಲಿ ತೊಡಗಿದ್ದಾರೆ. ಕೆಲವು ಕಡೆ ಈ ಅರ್ಜಿ ನೀಡಿದ್ದ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ.

ಎಲ್ಲಿ ಈ ಫಾರಂ ಮುದ್ರಿತವಾಗುತ್ತಿದೆ? ಇದರ ಹಿಂದೆ ಯಾವ ಪಕ್ಷದ ನಾಯಕರು ಇದ್ದಾರೆ? ಚುನಾವಣಾ ಆಯೋಗ ಇದರ ಹಿಂದೆ ಇರುವ ಪ್ರತಿಯೊಬ್ಬರನ್ನೂ ಪತ್ತೆ ಹಚ್ಚಿ ಕಠಿಣ ಕಾನೂನು ಕ್ರಮಗಳನ್ನು ಜರುಗಿಸಬೇಕು" ಎಂದು ಒತ್ತಾಯಿಸಿದರು.

50 ಲಕ್ಷ ಮತದಾರರು: ಕರ್ನಾಟಕ ರಾಜ್ಯದಲ್ಲಿ ಈಗಾಗಲೇ ಎಸ್ಐಆರ್ ಪ್ರಕ್ರಿಯೆಯಲ್ಲಿ 1.07 ಕೋಟಿ ಮತದಾರರ ಹೆಸರುಗಳು ಕೈಬಿಡಲಾಗಿದ್ದು, 45 ಲಕ್ಷ ಮತದಾರರಿಗೆ ನೋಟೀಸ್ ನೀಡಿದ್ದಾರೆ. ಇಷ್ಟಾದ ಬಳಿಕವು ಈಗ ಬಿಜೆಪಿ ಕಾರ್ಯಕರ್ತರು ಸುಮಾರು 50 ಲಕ್ಷ ಮತದಾರರನ್ನು ಮತಪಟ್ಟಿಯಿಂದ ಡಿಲೀಟ್ ಮಾಡಿಸಲು ಷಡ್ಯಂತ್ರ ನಡೆದಿದೆ" ಎಂದು ವಿವರಿಸಿದರು.

ರಾಜ್ಯ ಚುನಾವಣಾ ಆಯೋಗ, ತಕ್ಷಣ ಈ ಎಲ್ಲಾ ಪ್ರಕರಣಗಳ ಬಗ್ಗೆ ಎಫ್ಐಆರ್ ದಾಖಲಿಸಿ, ಈ ಎಲ್ಲಾ ಕಡೆಗಳಲ್ಲಿ ಸಮಗ್ರ ತನಿಖೆ ಆರಂಭಿಸಿ, ಯಾರು ಇದರಲ್ಲಿ ಒಳಗೊಂಡಿದ್ದಾರೆ ಅಂತವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಬಿಜೆಪಿ ಹಾಗೂ ಜನತಾದಳ ನಾಯಕರ ಈ ಕ್ರಿಮಿನಲ್ ಷಡ್ಯಂತ್ರದ ಬಗ್ಗೆ ಸಮಗ್ರ ತನಿಖೆ ನಡೆಸಬೇಕು" ಎಂದು ಅವರು ಒತ್ತಾಯಿಸಿದರು.

ರಾಜ್ಯದ ಪ್ರತಿಯೊಬ್ಬ ನಾಗರಿಕನ ಮತದಾನದ ಹಕ್ಕನ್ನು ರಕ್ಷಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಮತದಾರರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಲು ನಡೆಯುತ್ತಿರುವ ಈ ಕ್ರಿಮಿನಲ್ ಷಡ್ಯಂತ್ರದ ಬಗ್ಗೆ ಪೊಲೀಸರು ಮೊಕದ್ದಮೆ ದಾಖಲಿಸಿ ತನಿಖೆ ನಡೆಸಲಾಗುವುದು" ಎಂದರು.

ರಾಜ್ಯ ಚುನಾವಣಾ ಆಯೋಗ ತಕ್ಷಣ ಇದರ ಬಗ್ಗೆ ತನಿಖೆಗೆ ಆದೇಶಿಸಿ ಕ್ರಮ ಜರುಗಿಸಲು ಒತ್ತಾಯಿಸಿ, ರಾಜ್ಯ ಚುನಾವಣಾ ಆಯೋಗದ ಕಚೇರಿಗೆ ಭೇಟಿ ನೀಡಿ ಮನವಿ ಸಲ್ಲಿಸಲಾಗುವುದು. ಆಯೋಗ ಈ ಕುರಿತು ಸೂಕ್ತ ಕ್ರಮ ಜರುಗಿಸುವ ತನಕ ಅಲ್ಲಿಯೇ ಸಂಪುಟದ ಸಚಿವರೊಂದಿಗೆ ಧರಣಿ ಕುಳಿತುಕೊಳ್ಳಲಾಗುವುದು" ಎಂದು ಎಚ್ಚರಿಕೆ ನೀಡಿದರು.

ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಿಲ್ಲ ಎಂಬ ಕಾರಣಕ್ಕಾಗಿ ಬಿಜೆಪಿ ಹಾಗೂ ಜನತಾದಳ ಇಂತಹ ಕ್ರಿಮಿನಲ್ ಷಡ್ಯಂತ್ರ ನಡೆಸುತ್ತಿರುವುದು ಜಗಜ್ಜಾಹೀರಾಗಿದೆ. ಇಡೀ ದೇಶದಲ್ಲಿಯೇ ಇಂತಹ ಕ್ರಿಮಿನಲ್ ಗಳು ಇರಲು ಸಾಧ್ಯವಿಲ್ಲ. ನಾವು ಯಾವುದೇ ಕಾರಣಕ್ಕೂ ಕರ್ನಾಟಕದಲ್ಲಿ ಇಂತಹ ಕ್ರಿಮಿನಲ್ ಕೃತ್ಯಗಳು ನಡೆಯಲು ಬಿಡುವುದಿಲ್ಲ" ಎಂದು ಹೇಳಿದರು.

"ಅಲ್ಪಸಂಖ್ಯಾತರು, ಬಡವರ ಹಿತರಕ್ಷಣೆ, ಮತರಕ್ಷಣೆ ನನ್ನಿಂದ ಸಾಧ್ಯವಿಲ್ಲ ಎಂದರೆ ನಾನು ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳಲು ಅರ್ಹನಲ್ಲ. ವಿಶೇಷ ಎಸ್ಐಆರ್ ಮಾಡಿದ ಬಳಿಕ ನಮ್ಮ ರಾಜ್ಯದಲ್ಲಿ, ಪಕ್ಷದ ಹಾಗೂ ಸರ್ಕಾರದ ವತಿಯಿಂದ ಜಾಗೃತಿ ಮೂಡಿಸುವ ಪ್ರಯತ್ನ ಮಾಡುತ್ತಿದ್ದೇವೆ. ರಾಜ್ಯದ ಮುಖ್ಯಮಂತ್ರಿಯಾಗಿ ಪ್ರತಿ ವರ್ಗ ಮತದಾರರಿಗೆ ತಮ್ಮ ಹಕ್ಕು ಉಳಿಸಿ ಕೊಡುವುದು ನನ್ನ ಜವಾಬ್ದಾರಿ. ರಾಜ್ಯದ ಜನತಗೆ ನನ್ನ ಮೇಲೆ ಹಾಗೂ ಸರ್ಕಾರದ ಮೇಲೆ ಸಂಪೂರ್ಣ ವಿಶ್ವಾಸ ಇರಿಸಿ ಈ ಸ್ಥಾನದಲ್ಲಿ ಕೂರಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಎಸ್ಐಆರ್ ದೊಡ್ಡ ವಂಚನೆ, ಹೀಗಾಗಿ ರದ್ದಾಗಬೇಕು

ಮುಖ್ಯ ಚುನಾವಣಾಧಿಕಾರಿ ಜ್ಞಾನೇಶ್ ಕುಮಾರ್ ರಿಗೆ ಮಾಹಿತಿಯಿಲ್ಲದೇ ಇಂತಹ ಕೃತ್ಯ ನಡೆಯಲು ಸಾಧ್ಯವಿಲ್ಲ. ಎಸ್ಐಆರ್ ದೇಶದ ಅತಿ ದೊಡ್ಡ ವಂಚನೆಯಾಗಿದ್ದು, ಎಸ್ಐಆರ್ ರದ್ದಾಗಬೇಕು" ಎಂದು ಆಗ್ರಹಿಸಿದರು.

"ಎಸ್ಐಅರ್ ಪ್ರಾರಂಭವಾದ ಬಳಿಕ ನಾವು ಸರ್ಕಾರದ ವತಿಯಿಂದ ಆಯೋಗಕ್ಕೆ ಎಲ್ಲಾ ಬೆಂಬಲ, ಸಹಕಾರ ನೀಡುತ್ತಾ ಬಂದಿದ್ದೇವೆ. 54 ಸಾವಿರ ಬಿಎಲ್ಎ 2 ಗಳನ್ನು ಪಕ್ಷದ ವತಿಯಿಂದ ನೇಮಕ ಮಾಡಿದ್ದೇವೆ. ಆಯೋಗದ ಕಾರ್ಯಕ್ಕೆ ಎಲ್ಲಾ ರೀತಿಯ ನೆರವನ್ನು ಸರ್ಕಾರ ನೀಡುತ್ತಾ ಬಂದಿದೆ. ಆದರೆ ಇದೀಗ ಅರ್ಹ ಮತದಾರರನ್ನು ಅಕ್ರಮವಾಗಿ ತೆಗೆದು ಹಾಕಲು ನಡೆಯುತ್ತಿರುವ ಕ್ರಿಮಿನಲ್ ಸಂಚು ಯಶಸ್ವಿಯಾಗಲು ನಾವು ಬಿಡುವುದಿಲ್ಲ" ಎಂದರು.

"ಎಸ್ಐಆರ್ ರದ್ದುಪಡಿಸಬೇಕು. ಪ್ರತಿಯೊಬ್ಬರಿಗೂ ಮತದಾನದ ಹಕ್ಕು ಒದಗಿಸಲು ಕ್ರಮ ಕೈಗೊಳ್ಳಬೇಕು. ಇದರಲ್ಲಿ ಶಾಮೀಲಾಗಿದ್ದಾರೆ ಅಂತಹವರನ್ನು ಬಂಧಿಸಬೇಕು. ಬಿಎಲ್ಒಗಳ ಮೇಲೆ ಒತ್ತಡ ಹೇರಿದವರನ್ನು ಪತ್ತೆಹಚ್ಚಿ, ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು" ಎಂದು ಒತ್ತಾಯಿಸಿದರು.

Tags

BJP-JD(S) ConspiringDelete 'AHINDA' VotersDK Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X