Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ನನ್ನ ಪ್ರಕರಣದಲ್ಲಿ ಬಿಜೆಪಿ, ಜೆಡಿಎಸ್...

ನನ್ನ ಪ್ರಕರಣದಲ್ಲಿ ಬಿಜೆಪಿ, ಜೆಡಿಎಸ್ ಮುಖಭಂಗ ಅನುಭವಿಸುವುದು ಖಂಡಿತ: ಸಿಎಂ ಸಿದ್ದರಾಮಯ್ಯ

"ಇದು ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಸೇಡಿನ ರಾಜಕೀಯದ ವಿರುದ್ದದ ಹೋರಾಟ"

ವಾರ್ತಾಭಾರತಿವಾರ್ತಾಭಾರತಿ24 Sept 2024 2:40 PM IST
share
ನನ್ನ ಪ್ರಕರಣದಲ್ಲಿ ಬಿಜೆಪಿ, ಜೆಡಿಎಸ್ ಮುಖಭಂಗ ಅನುಭವಿಸುವುದು ಖಂಡಿತ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜಭವನದ ದುರ್ಬಳಕೆ ಮೂಲಕ ವಿರೋಧ ಪಕ್ಷಗಳ ಸರ್ಕಾರವನ್ನು ಹಣಿಯುವ ಸಂಚನ್ನು ನರೇಂದ್ರಮೋದಿ ನೇತೃತ್ವದ ಬಿಜೆಪಿ ದೇಶಾದ್ಯಂತ ನಡೆಸುತ್ತಿದೆ. ನನ್ನ ಪ್ರಕರಣದಲ್ಲಿಯೂ ಬಿಜೆಪಿ ಮತ್ತು ಜೆಡಿಎಸ್ ಇದೇ ರೀತಿ ಮುಖಭಂಗ ಅನುಭವಿಸುವುದು ಖಂಡಿತ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ನನ್ನ 40 ವರ್ಷಗಳ ರಾಜಕೀಯ ಜೀವನದುದ್ದಕ್ಕೂ ಇಂತಹ ಸೇಡು, ಸಂಚಿನ ರಾಜಕೀಯವನ್ನು ಎದುರಿಸಿದ್ದೇನೆ ಮತ್ತು ರಾಜ್ಯದ ಜನರ ಆಶೀರ್ವಾದ, ಹಾರೈಕೆಯ ಬಲದಿಂದ ಗೆಲ್ಲುತ್ತಾ ಬಂದಿದ್ದೇನೆ. ಈ ಹೋರಾಟವನ್ನು ಜನತೆಯ ಆಶೀರ್ವಾದದ ಬಲದಿಂದ ಗೆಲ್ಲುತ್ತೇನೆ ಎಂಬ ವಿಶ್ವಾಸ ಇದೆ. ಹೈಕೋರ್ಟ್ ಆದೇಶದ ಅಂಶಗಳನ್ನು ಮಾಧ್ಯಮದ ಮೂಲಕ ತಿಳಿದುಕೊಂಡಿದ್ದೇನೆ. ಆದೇಶ ಪ್ರತಿ ಪಡೆದು ಓದಿದ ಬಳಿಕ‌ ಪ್ರತಿಕ್ರಿಯೆ ನೀಡುತ್ತೇನೆ. ನ್ಯಾಯಾಲಯವು ಸೆಕ್ಷನ್ 218 ರ ಅಡಿ ರಾಜ್ಯಪಾಲರು ನೀಡಿದ ಅಭಿಯೋಜನೆಯನ್ನು ನ್ಯಾಯಾಲಯ ಸಂಪೂರ್ಣವಾಗಿ ತಿರಸ್ಕರಿಸಿದೆ. ರಾಜ್ಯಪಾಲರ ಆದೇಶದಲ್ಲಿನ ಸೆಕ್ಷನ್ 17 ಎ ಗೆ ಮಾತ್ರ ನ್ಯಾಯಮೂರ್ತಿಗಳು ಸೀಮಿತಗೊಳಿಸಿದ್ದಾರೆ. ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ. ಕಾನೂನು ಅಡಿ ಅಂತಹ ತನಿಖೆಗೆ ಅವಕಾಶ ಇದೆಯೋ ಇಲ್ಲವೋ ಎಂಬ ಬಗ್ಗೆ ತಜ್ಞರ ಜೊತೆ ಸಮಾಲೋಚಿಸುತ್ತೇನೆ. ಕಾನೂನು ತಜ್ಞರ ಜೊತೆ ಚರ್ಚಿಸಿ ಹೋರಾಟದ ರೂಪುರೇಷೆ ನಿರ್ಧರಿಸುತ್ತೇನೆ ಎಂದಿದ್ದಾರೆ.

ದೂರುದಾರ ತನ್ನ ದೂರಿನಲ್ಲಿ ಸೆಕ್ಷನ್ 218 ಬಿಎನ್ ಎಸ್ ಎಸ್, 17 ಎ ಮತ್ತು 19 ಪಿಸಿ ಕಾಯಿದೆ ಪ್ರಕಾರ ತನಿಖೆ ಹಾಗೂ ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಿದ್ದರು. ಆದರೆ, ರಾಜ್ಯಪಾಲರು ಪ್ರಾಥಮಿಕ ಹಂತದಲ್ಲಿ 19 ಪಿಸಿ ಕಾಯಿದೆ ಪ್ರಕಾರ ಕೇಳಿದ್ದ ಅಭಿಯೋಜನಾ ಅನುಮತಿ‌ ನಿರಾಕರಿಸಿದ್ದರು. ಈ ದಿನ ಘನ ನ್ಯಾಯಾಲಯ ರಾಜ್ಯಪಾಲರು 218 ಬಿಎನ್ ಎಸ್ ಎಸ್ ಪ್ರಕಾರ ನೀಡಿರುವ ಅಭಿಯೋಜನಾ ಅನುಮತಿಯನ್ನು ಸ್ಪಷ್ಟವಾಗಿ ತಳ್ಳಿ ಹಾಕಿದೆ. ಮುಂದಿನ ದಿನಗಳಲ್ಲಿ ಸತ್ಯ ಹೊರಬಂದು 17 ಎ ಅಡಿ ನೀಡಿರುವ ತನಿಖೆ ರದ್ದಾಗಲಿದೆ ಎಂಬ ದೃಢ ವಿಶ್ವಾಸ ನನಗಿದೆ. ಈ ರಾಜಕೀಯ ಹೋರಾಟದಲ್ಲಿ ರಾಜ್ಯದ ಜನ ನನ್ನ ಹಿಂದೆ ಇದ್ದಾರೆ. ಅವರ ಆಶೀರ್ವಾದವೇ ನನಗೆ ಶ್ರೀರಕ್ಷೆ. ಕಾನೂನು ಮತ್ತು ಸಂವಿಧಾನದಲ್ಲಿ ನನಗೆ ನಂಬಿಕೆ ಇದೆ. ಈ ಹೋರಾಟದಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ ಸಿಗಲಿದೆ. ಇದು ನರೇಂದ್ರಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಸೇಡಿನ ರಾಜಕೀಯದ ವಿರುದ್ದದ ಹೋರಾಟ. ಬಿಜೆಪಿ, ಜೆಡಿಎಸ್ ನ ಈ ಸೇಡಿನ ರಾಜಕೀಯದ ವಿರುದ್ದ ನಮ್ಮ ನ್ಯಾಯಾಂಗದ ಹೋರಾಟ ಮುಂದುವರಿಯಲಿದೆ. ನ್ಯಾಯಾಲಯದ ಮೇಲೆ ನನಗೆ ನಂಬಿಕೆ ಇದೆ ಎಂದು ಹೇಳಿದ್ದಾರೆ.

ನಮ್ಮ ಪಕ್ಷದ ಎಲ್ಲ ಶಾಸಕರು, ನಾಯಕರು ಮತ್ತು ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಹೈಕಮಾಂಡ್ ನನ್ನ ಪರವಾಗಿ ಭದ್ರವಾಗಿ ನಿಂತಿದ್ದು ಕಾನೂನಿನ ಹೋರಾಟ ಮುಂದುವರಿಸುವಂತೆ ಉತ್ತೇಜನ ನೀಡಿದ್ದಾರೆ. ನಾನು ಬಡವರ ಪರವಾಗಿದ್ದೇನೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದೇನೆ ಎನ್ನುವ ಕಾರಣಕ್ಕಾಗಿ ನನ್ನ ವಿರುದ್ದ ಬಿಜೆಪಿ, ಜೆಡಿಎಸ್ ರಾಜಕೀಯ ಪ್ರತಿಕಾರಕ್ಕೆ ಇಳಿದಿದೆ. ಮುಡಾ ಪ್ರಕರಣ ಒಂದು ನೆಪ ಅಷ್ಟೇ. ಬಡವರು ಮತ್ತು ಶೋಷಿತರ ಪರವಾಗಿರುವ ನಮ್ಮ ಸರ್ಕಾರದ ಯೋಜನೆಗಳನ್ನು ನಿಲ್ಲಿಸಬೇಕೆಂಬುದೇ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮುಖ್ಯ ಉದ್ದೇಶ. ಮುಡಾ ಪ್ರಕರಣವನ್ನು ಸೃಷ್ಟಿಸಿ, ಅದರ ಮೂಲಕ ಸುಳ್ಳು ಆರೋಪಗಳನ್ನು ಮಾಡುತ್ತಿರುವವರ ಮುಖಗಳನ್ನು ಒಮ್ಮೆ ರಾಜ್ಯದ ಜನತೆ ಸರಿಯಾಗಿ ನೋಡಬೇಕೆಂದು ನಾನು ಮನವಿ ಮಾಡುತ್ತೇನೆ ಎಂದಿದ್ದಾರೆ.

ನನ್ನ ರಾಜೀನಾಮೆ ಕೇಳುತ್ತಿರುವ ಇದೇ ನಾಯಕರು ನಾನು ರಾಜ್ಯದ ಬಡವರು, ಶೋಷಿತರ ಪರವಾಗಿ ಜಾರಿಗೆ ತಂದಿದ್ದ ಯೋಜನೆಗಳನ್ನು ವಿರೋಧಿಸಿದವರೇ ಆಗಿದ್ದಾರೆ. ಇದೇ ಬಿಜೆಪಿ, ಜೆಡಿಎಸ್ ನಾಯಕರು ನಾನು ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ತಂದಿದ್ದ ಅನ್ನಭಾಗ್ಯ, ಕ್ಷೀರ ಭಾಗ್ಯ, ಕ್ಷೀರ ಧಾರೆ, ವಿದ್ಯಾಸಿರಿ, ಕೃಷಿಭಾಗ್ಯ, ಪಶುಭಾಗ್ಯ, ಇಂದಿರಾ ಕ್ಯಾಂಟೀನ್ ಯೋಜನೆಗಳನ್ನು ವಿರೋಧಿಸಿದ್ದಾರೆ. ಇಂದು ನನ್ನ ವಿರುದ್ದ ರಾಜಕೀಯ ಸಂಚು ನಡೆಸುತ್ತಿರುವ ಇದೇ ನಾಯಕರು ಎಸ್ ಸಿ ಎಸ್ ಪಿ/ಟಿಎಸ್‌ ಪಿ ಕಾಯ್ದೆಯನ್ನು ವಿರೋಧಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಕರ್ನಾಟಕದ ಜನತೆ ಇಲ್ಲಿಯ ವರೆಗೆ ಭಾರತೀಯ ಜನತಾ ಪಕ್ಷಕ್ಕೆ ಸ್ವಂತ ಬಲದಿಂದ ಅಧಿಕಾರಕ್ಕೆ ಬರುವಷ್ಟು ಬಹುಮತ ನೀಡಿಲ್ಲ. ಇಲ್ಲಿಯ ವರೆಗೆ ಬಿಜೆಪಿ ಅನೈತಿಕವಾಗಿ, ದುಡ್ಡಿನ ಬಲದಿಂದ ಆಪರೇಷನ್ ಕಮಲ ನಡೆಸಿ ಅಧಿಕಾರಕ್ಕೆ ಬಂದದ್ದು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ಆಪರೇಷನ್ ಕಮಲಕ್ಕೆ ಅವಕಾಶವೇ ಇಲ್ಲದಂತೆ ನಮ್ಮ ಪಕ್ಷಕ್ಕೆ 136 ಸದಸ್ಯರ ಬಲ ನೀಡಿ ಗೆಲ್ಲಿಸಿದರು. ಇದರಿಂದ ಹತಾಶೆಗೀಡಾಗಿರುವ ಬಿಜೆಪಿ, ಜೆಡಿಎಸ್ ನಾಯಕರು, ರಾಜಭವನವನ್ನು ದುರ್ಬಳಕೆ ಮಾಡಿಕೊಂಡು ನನ್ನ ವಿರುದ್ದ ಸುಳ್ಳು ಆರೋಪಗಳನ್ನು ಮಾಡುವ ಮೂಲಕ ನಮ್ಮ ಸರ್ಕಾರವನ್ನು ಡಿಸ್ಟರ್ಬ್ ಮಾಡುವ ಹುನ್ನಾರ ನಡೆಸಿದೆ ಎಂದು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X