ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ಮಾಡಿದ ಬಿಜೆಪಿ ಮುಖಂಡ ಮಾಧುಸ್ವಾಮಿ

ಬೆಂಗಳೂರು : ಬಿಜೆಪಿಯ ಹಿರಿಯ ಮುಖಂಡ, ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿರುವುದು ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ.
ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿಯ ಜೆ.ಸಿ.ಮಾಧುಸ್ವಾಮಿ, ಬಹುದಿನಗಳಿಂದ ಬಿಜೆಪಿ ಪಕ್ಷದ ಸಕ್ರಿಯ ಚಟುವಟಿಕೆಗಳಿಂದ ದೂರ ಉಳಿದಿದ್ದು, ಆ ಪಕ್ಷದ ಮುಖಂಡರೊಂದಿಗೆ ಅಂತರ ಕಾಯ್ದುಕೊಂಡಿದ್ದರು. ‘ಹೇಮಾವತಿ ನಾಲಾ’ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಹೋರಾಟ ನಡೆಸಿದ ಸಂದರ್ಭದಲ್ಲಿಯೂ ಮಾಧುಸ್ವಾಮಿ ತಟಸ್ಥವಾಗಿದ್ದರು.
ಈ ಮಧ್ಯೆ ಶನಿವಾರ ಸಿಎಂ ಅಧಿಕೃತ ನಿವಾಸ ಕಾವೇರಿ ಆಗಮಿಸಿದ ಮಾಜಿ ಸಚಿವ ಮಾಧುಸ್ವಾಮಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ. ಆದರೆ, ‘ಇದೊಂದು ಸೌಹಾರ್ದ ಅಷ್ಟೇ’ ಎಂದು ಹೇಳಲಾಗಿದೆ.
Next Story





