Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮಂಡ್ಯದಲ್ಲಿ ಬೆಂಕಿ ಹತ್ತಿಸಿ ರಾಜಕೀಯದ...

ಮಂಡ್ಯದಲ್ಲಿ ಬೆಂಕಿ ಹತ್ತಿಸಿ ರಾಜಕೀಯದ ಚಳಿ ಕಾಯಿಸಿಕೊಳ್ಳುತ್ತಿರುವ ಬಿಜೆಪಿ ನಾಯಕರು: ಸಚಿವ ಪ್ರಿಯಾಂಕ್‌ ಖರ್ಗೆ

"ಬಿಜೆಪಿಯ ಯಾವುದೇ ತಂತ್ರ, ಕುತಂತ್ರಗಳಿಗೆ ನಾವು ಬಗ್ಗುವುದಿಲ್ಲ, ಬಗ್ಗುಬಡಿಯುತ್ತೇವೆ"

ವಾರ್ತಾಭಾರತಿವಾರ್ತಾಭಾರತಿ29 Jan 2024 12:54 PM IST
share
ಮಂಡ್ಯದಲ್ಲಿ ಬೆಂಕಿ ಹತ್ತಿಸಿ ರಾಜಕೀಯದ ಚಳಿ ಕಾಯಿಸಿಕೊಳ್ಳುತ್ತಿರುವ ಬಿಜೆಪಿ ನಾಯಕರು: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಮಂಡ್ಯದಲ್ಲಿ ಬೆಂಕಿ ಹತ್ತಿಸಿ ಆ ಬೆಂಕಿಯಲ್ಲಿ ರಾಜಕೀಯದ ಚಳಿ ಕಾಯಿಸಿಕೊಳ್ಳುತ್ತಿರುವ ಬಿಜೆಪಿ ನಾಯಕರು ಅತ್ಯಂತ ಕೀಳು ಮಟ್ಟಕ್ಕೆ ಇಳಿದಿದ್ದಾರೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ಕೆರೆಗೋಡು ಧ್ವಜ ವಿವಾದ ಸಂಬಂಧ ʼಎಕ್ಸ್‌ʼ ಪ್ರತಿಕ್ರಿಯಿಸಿದ ಅವರು, ʼಇಷ್ಟು ದಿನ ಕರಾವಳಿಯನ್ನು ಕೋಮು ರಾಜಕಾರಣದ ಪ್ರಯೋಗಶಾಲೆಯನ್ನಾಗಿ ಮಾಡಿಕೊಂಡಿದ್ದ ಬಿಜೆಪಿ, ಸಂಘ ಪರಿವಾರ ಈಗ ಮಂಡ್ಯದಲ್ಲಿ ತಮ್ಮ ಪ್ರಯೋಗ ಆರಂಭಿಸಿದೆ.ಸಮಾಜ ಶಾಂತಿಯುತವಾಗಿದ್ದರೆ ಬಿಜೆಪಿಗೆ ತಿಂದ ಅನ್ನ ಜೀರ್ಣವಾಗುವುದಿಲ್ಲʼ ಎಂದು ದೂರಿದ್ದಾರೆ.

ವಿರೋಧ ಪಕ್ಷದ ನಾಯಕನೆಂದರೆ ಘನತೆಯುಕ್ತ ಸ್ಥಾನ, ಆ ಸ್ಥಾನದ ಗೌರವವನ್ನು ಮಣ್ಣುಪಾಲು ಮಾಡುತ್ತಿರುವ ಆರ್‌. ಅಶೋಕ್ ಹಾಗೂ ವಿಜಯೇಂದ್ರ ಅವರೇ ನಿಮ್ಮ ಗಮನಕ್ಕೆ ಕೆಲವು ವಿಚಾರಗಳು ಇಲ್ಲಿದೆ ಎಂದು ಕೆಲವು ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ.

► 29/12/2023 ರಂದು ಮಂಡ್ಯ ಜಿಲ್ಲೆಯ ಕೆರೆಗೋಡು ಗ್ರಾಮದಲ್ಲಿ ರಾಷ್ಟ್ರ ಧ್ವಜ ಹಾಗೂ ನಾಡ ಧ್ವಜವನ್ನು ಮಾತ್ರ ಹಾರಿಸುತ್ತೇವೆ ಎಂದು ಶ್ರೀ ಗೌರಿಶಂಕರ ಸೇವಾ ಟ್ರಸ್ಟ್ ನವರು ಧ್ವಜ ಸ್ಥಂಭಕ್ಕೆ ಅನುಮತಿ ಕೇಳಿದ್ದಾರೆ.

► 17/01/2024ರಂದು ಧ್ವಜ ಸ್ಥಂಭದಲ್ಲಿ ರಾಷ್ಟ್ರ ಧ್ವಜ ಹಾಗೂ ನಾಡ ಧ್ವಜವನ್ನು ಬಿಟ್ಟು ಇನ್ನಿತರ ಯಾವುದೇ ರಾಜಕೀಯ, ಧಾರ್ಮಿಕ ಧ್ವಜವವನ್ನು ಹಾರಿಸುವುದಿಲ್ಲ ಎಂದು ಮುಚ್ಚಳಿಕೆ ಬರೆದುಕೊಟ್ಟು ಸಹಿ ಮಾಡಿದ್ದಾರೆ.

► 18/01/2024ರಂದು ಕೆರೆಗೋಡು ಗ್ರಾಮ ಪಂಚಾಯ್ತಿಯ ಅಧಿಕಾರಿಗಳು ರಾಷ್ಟ್ರ ಧ್ವಜ ಹಾಗೂ ನಾಡ ಧ್ವಜಾರೋಹಣಕ್ಕೆ ಮಾತ್ರ ಶರತ್ತುಗಳೊಂದಿಗೆ ಅನುಮತಿ ಪತ್ರ ನೀಡಿದ್ದಾರೆ.

► ಧ್ವಜಾರೋಹಣಕ್ಕೆ ಸಂಬಂಧಿಸಿದಂತೆ ಸರ್ಕಾರ ಮಾಡುವ ಮಾರ್ಪಾಡುಗಳಿಗೆ ಬದ್ಧರಾಗಿರಬೇಕೆಂದು ತಿಳಿಸಲಾಗಿದೆ.

► ಯಾವುದೇ ಗಲಭೆಗಳಿಗೆ ಅವಕಾಶ ಮಾಡಿಕೊಡದಂತೆ ಷರತ್ತು ವಿಧಿಸಲಾಗಿದೆ.

► ಧ್ವಜಾರೋಹಣ ಮಾಡುವ 6,7 ದಿನ ಮುಂಚಿತವಾಗಿ ಗ್ರಾಮ ಪಂಚಾಯ್ತಿ ಹಾಗೂ ಪೊಲೀಸರಿಗೆ ತಿಳಿಸುವಂತೆ ಸೂಚಿಸಲಾಗಿದೆ.

ಇನ್ನೂ ಬಿಜೆಪಿ ನಾಯಕರು ಪ್ರಶ್ನೆಗಳಿಗೆ ಉತ್ತರಿಸಲೇಬೇಕು ಎಂದು ಸಚಿವರು ಕೆಲವು ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ.

1. ರಾಷ್ಟ್ರ ಧ್ವಜದ ಬದಲು ಏಕಾಏಕಿ ಭಾಗವಾಧ್ವಜ ಹಾರಿಸುವ ಷಡ್ಯಂತ್ರ ರೂಪಿಸಿದ್ದು ಯಾರು?

2. ಅನುಮತಿ ಪತ್ರದ ಷರತ್ತುಗಳನ್ನು ಉಲ್ಲಂಘಿಸಲು ಪ್ರೇರೇಪಿಸಿದ್ದು ಯಾರು?

3. ಬಿಜೆಪಿ ಅದೆಷ್ಟು ದಿನಗಳಿಂದ ಶಾಂತಿ ಕೆಡಿಸುವ ಸಂಚು ರೂಪಿಸಿತ್ತು?

4. ಕಾನೂನು, ನೀತಿ ನಿಯಮಗಳೇನು ಬಿಜೆಪಿ ಕಾಲ ಕೆಳಗಿನ ಕಸದಂತೆ ನೋಡುವುದೇಕೆ?

5. ತ್ರಿವರ್ಣ ಧ್ವಜವನ್ನು ವಿರೋಧಿಸಿದ್ದ ಆರೆಸ್ಸೆಸ್ ಹೇಳಿಕೊಟ್ಟ ಪಾಠದಂತೆ ಬಿಜೆಪಿಯೂ ತಿರಂಗಾ ಕಂಡರೆ ಉರಿದು ಬೀಳುತ್ತಿದೆ, ರಾಷ್ಟ್ರ ಧ್ವಜಕ್ಕೆ ಕೈ ಮುಗಿಯುವ ಬದಲು ಕೆಂಡ ಕಾರುತ್ತಿದೆ.

‌6. ವಿಜಯೇಂದ್ರ, ಅಶೋಕ್‌ ಅವರೇ, ಸರ್ಕಾರ ರಾಷ್ಟ್ರ ಧ್ವಜವನ್ನು ಹಾರಿಸುವ ಮೂಲಕ ಆ ಧ್ವಜ ಸ್ಥಂಭದ ಉದ್ದೇಶವನ್ನು ಈಡೇರಿಸಿದೆ, ಹೀಗಿದ್ದೂ ನಿಮಗೆ ಇಷ್ಟೊಂದು ಉರಿ, ತಾಪವೇಕೆ? ಎಂದು ಸರಣಿ ಪ್ರಶ್ನೆಗಳನ್ನು ಕೇಳಿದ್ದಾರೆ.

" ರಾಷ್ಟ್ರ ಧ್ವಜವನ್ನು ದ್ವೇಷಿಸುವ ಮೂಲಕ ಬಿಜೆಪಿಗರು ತಮಗೆ ತಾವೇ ದೇಶದ್ರೋಹಿಗಳು ಎಂದು ಸರ್ಟಿಫಿಕೇಟ್ ಕೊಟ್ಟುಕೊಂಡಿದ್ದಾರೆ. ಬಿಜೆಪಿಗರಿಗೆ ದೇಶದ ಧ್ವಜ, ದೇಶದ ಸಂವಿಧಾನ, ದೇಶದ ಐಕ್ಯತೆ ಇಷ್ಟವಿಲ್ಲವೆಂದರೆ ಅವರ ಪ್ರೀತಿಪಾತ್ರವಾದ ಪಾಕಿಸ್ತಾನಕ್ಕೆ ಹೋಗಲಿ. ಬಿಜೆಪಿಯ ಯಾವುದೇ ತಂತ್ರ, ಕುತಂತ್ರಗಳಿಗೆ ನಾವು ಬಗ್ಗುವುದಿಲ್ಲ, ಬಗ್ಗುಬಡಿಯುತ್ತೇವೆ ಎಂದು ಹೇಳಿದ್ದಾರೆ.

. @BYVijayendra avare & Opposition Leader @RAshokaBJP avare, why are you protesting?

Please recheck & comprehend the request by the trust & the subsequent order. Please let the people of Karnataka know which part of the request/order is against the law.

Without permission can… https://t.co/tQrZJcm47R pic.twitter.com/OzmHWSsLFu

— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) January 29, 2024

share
ವಾರ್ತಾಭಾರತಿ
ವಾರ್ತಾಭಾರತಿ
Next Story
X