Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬಿಜೆಪಿ ನಾಯಕರು ಮೊದಲು ಸಂವಿಧಾನವನ್ನು...

ಬಿಜೆಪಿ ನಾಯಕರು ಮೊದಲು ಸಂವಿಧಾನವನ್ನು ಓದಲಿ; ನಂತರ ಕಾಂಗ್ರೆಸ್ ಪಕ್ಷದ ಲೆಟರ್‌ಹೆಡ್‌ ಓದಲಿ: ಬಿ.ಕೆ ಹರಿಪ್ರಸಾದ್‌

ವಾರ್ತಾಭಾರತಿವಾರ್ತಾಭಾರತಿ4 Aug 2026 2:30 PM IST
share
ಬಿಜೆಪಿ ನಾಯಕರು ಮೊದಲು ಸಂವಿಧಾನವನ್ನು ಓದಲಿ; ನಂತರ ಕಾಂಗ್ರೆಸ್ ಪಕ್ಷದ ಲೆಟರ್‌ಹೆಡ್‌ ಓದಲಿ: ಬಿ.ಕೆ ಹರಿಪ್ರಸಾದ್‌

ಬೆಂಗಳೂರು: ಬಿಜೆಪಿ ನಾಯಕರು ಮೊದಲು ಸಂವಿಧಾನವನ್ನು ಓದಲಿ; ನಂತರ ಕಾಂಗ್ರೆಸ್ ಪಕ್ಷದ ಲೆಟರ್‌ಹೆಡ್‌ ಓದಲಿ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್‌ ಅವರು ಹರಿಹಾಯ್ದಿದ್ದಾರೆ.

ಸಾಮಾಜಿಕ ಜಾಲತಾನ X ನಲ್ಲಿ ಪೋಸ್ಟ್‌ ಮಾಡಿರುವ ಅವರು, ಸಂವಿಧಾನದ 178ನೇ ವಿಧಿಯ ಪ್ರಕಾರ ವಿಧಾನಸಭೆಯ ಸಭಾಧ್ಯಕ್ಷರು ಮತ್ತು ಉಪಸಭಾಧ್ಯಕ್ಷರನ್ನು ವಿಧಾನಸಭೆಯೇ ಆಯ್ಕೆ ಮಾಡುತ್ತದೆ. 182ನೇ ವಿಧಿಯ ಪ್ರಕಾರ ವಿಧಾನಪರಿಷತ್ತಿನ ಸಭಾಪತಿ ಮತ್ತು ಉಪಸಭಾಪತಿಯನ್ನು ವಿಧಾನಪರಿಷತ್ತೇ ಆಯ್ಕೆ ಮಾಡುತ್ತದೆ. ಈ ಕನಿಷ್ಠ ಸಾಂವಿಧಾನಿಕ ಜ್ಞಾನವೂ ಇಲ್ಲದೆ ಬಿಜೆಪಿ ನಾಯಕರು ತೌಡು ಕುಟ್ಟುವುದನ್ನು ಬಿಡಲಿ ಎಂದಿದ್ದಾರೆ.

ಕಾಂಗ್ರೆಸ್ ಪಕ್ಷವು ತನ್ನ ಅಭ್ಯರ್ಥಿಗಳ ಹೆಸರನ್ನು ಅನುಮೋದಿಸಿ ಪ್ರಕಟಿಸಿದೆ ಅಷ್ಟೇ; ಅವರನ್ನು ಸಾಂವಿಧಾನಿಕ ಹುದ್ದೆಗಳಿಗೆ ನೇಮಕ ಮಾಡಿಲ್ಲ. ಸದನದಲ್ಲಿ ನಡೆಯಬೇಕಾದ ಅಧಿಕೃತ ಆಯ್ಕೆ ಪ್ರಕ್ರಿಯೆ ಎಂದಿನಂತೆಯೇ ನಡೆಯಲಿದೆ. ಪಕ್ಷದ ಅಭ್ಯರ್ಥಿಯ ಘೋಷಣೆಗೂ, ಸದನ ನಡೆಸುವ ಸಾಂವಿಧಾನಿಕ ಆಯ್ಕೆಗೂ ಇರುವ ವ್ಯತ್ಯಾಸ ತಿಳಿಯದೆ “ಸಂವಿಧಾನ ವಿರೋಧಿ” ಎಂದು ಕೂಗುವುದು ಅಜ್ಞಾನದ ಪ್ರದರ್ಶನವಲ್ಲದೆ ಮತ್ತೇನು?

2019ರಲ್ಲಿ ಬಿಜೆಪಿಯ ಕೇಂದ್ರ ನಾಯಕತ್ವವೇ ಕರ್ನಾಟಕ ವಿಧಾನಸಭಾಧ್ಯಕ್ಷ ಸ್ಥಾನಕ್ಕೆ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಹೆಸರನ್ನು ಅಂತಿಮಗೊಳಿಸಿ, ನಾಮಪತ್ರ ಸಲ್ಲಿಸುವಂತೆ ನಿರ್ದೇಶಿಸಿರಲಿಲ್ಲವೇ? 2024ರಲ್ಲಿ ಲೋಕಸಭೆಯ ಅಧಿಕೃತ ಚುನಾವಣೆಗೂ ಮೊದಲೇ ಓಂ ಬಿರ್ಲಾ ಅವರನ್ನು ಎನ್‌ಡಿಎ ಅಭ್ಯರ್ಥಿಯಾಗಿ ಪ್ರಕಟಿಸಿರಲಿಲ್ಲವೇ?

2026ರಲ್ಲಿ ಪಶ್ಚಿಮ ಬಂಗಾಳದ ಬಿಜೆಪಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರೇ ಸದನದ ಆಯ್ಕೆಗೂ ಮೊದಲೇ ರಥೀಂದ್ರ ಬೋಸ್ ಅವರನ್ನು ಸ್ಪೀಕರ್ ಅಭ್ಯರ್ಥಿಯಾಗಿ ಬಹಿರಂಗವಾಗಿ ಘೋಷಿಸಿರಲಿಲ್ಲವೇ? ಬಿಜೆಪಿ ಮಾಡಿದರೆ ಅದು “ಅಭ್ಯರ್ಥಿಯ ಆಯ್ಕೆ”; ಕಾಂಗ್ರೆಸ್ ಮಾಡಿದರೆ ಮಾತ್ರ “ಸಂವಿಧಾನ ವಿರೋಧ”ವೇ?

ಅಷ್ಟಕ್ಕೂ ಸಂವಿಧಾನದ ಪಾವಿತ್ರ್ಯದ ಕುರಿತು ಬಿಜೆಪಿ ನಮಗೆ ಪಾಠ ಹೇಳುವ ಮೊದಲು ತನ್ನ ಮುಖವನ್ನು ಕನ್ನಡಿಯಲ್ಲಿ ನೋಡಿಕೊಳ್ಳಲಿ. ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಚುನಾವಣೆಯಲ್ಲಿ ಮತದಾನದ ಹಕ್ಕೇ ಇಲ್ಲದ 12 ನಾಮನಿರ್ದೇಶಿತ ಸದಸ್ಯರ ಮತಗಳನ್ನು ಸೇರಿಸಿಕೊಂಡು, ಕೇವಲ ಆರು ಮತಗಳ ಅಂತರದಲ್ಲಿ ಗೆದ್ದ ಎಂ.ಕೆ. ಪ್ರಾಣೇಶ್ ರ ವಿಧಾನಪರಿಷತ್ತಿನ ಉಪಸಭಾಪತಿ ಎಂಬ ಸಾಂವಿಧಾನಿಕ ಹುದ್ದೆಯಲ್ಲಿ ಕೂರಿಸಿದಾಗ ಬಿಜೆಪಿಗೆ ಸಂವಿಧಾನ ನೆನಪಾಗಲಿಲ್ಲವೇ?

“ಸಾಂವಿಧಾನಿಕ ಅಕ್ರಮವನ್ನು ಉಳಿಸಲು ಮತದಾನದ ಗೌಪ್ಯತೆಯನ್ನು ನೆಪವಾಗಿ ಬಳಸಲಾಗದು” ಎಂದು ಹೇಳಿ ಪ್ರಾಣೇಶ್ ರ ಚುನಾವಣೆಯನ್ನೇ ರದ್ದುಗೊಳಿಸಿದೆ. ಚುನಾವಣೆಯ ಪಾವಿತ್ರ್ಯವನ್ನು ಉಲ್ಲಂಘಿಸಿ ಪಡೆದ ಸ್ಥಾನವನ್ನು ಸಾಂವಿಧಾನಿಕ ಹುದ್ದೆಗೆ ಮೆಟ್ಟಿಲಾಗಿ ಬಳಸಿಕೊಂಡ ಬಿಜೆಪಿ, ಇಷ್ಟು ಸ್ಪಷ್ಟವಾದ ನ್ಯಾಯಾಲಯದ ತೀರ್ಪಿನ ನಂತರ ರಾಜ್ಯದ ಜನರ ಬಳಿ ಕನಿಷ್ಠ ಕ್ಷಮೆಯನ್ನಾದರೂ ಕೇಳಬೇಕಿತ್ತಲ್ಲವೇ? ಎಂದು ಸರಣಿ ಪ್ರಶ್ನೆಗಳನ್ನು ಕೇಳಿದ್ದಾರೆ.

ಅಸಿಂಧು ಮತಗಳ ಬಲದಿಂದ ಗೆದ್ದವರನ್ನು ಉಪಸಭಾಪತಿ ಹುದ್ದೆಯಲ್ಲಿ ಕೂರಿಸಲು ನಾಚಿಕೆಯಾಗದವರು, ಇಂದು ಒಂದು ಪಕ್ಷದ ಅಭ್ಯರ್ಥಿಗಳ ಹೆಸರು ಪ್ರಕಟಿಸಿರುವ ಲೆಟರ್‌ಹೆಡ್ ಹಿಡಿದು ಸಂವಿಧಾನದ ಬಿಟ್ಟಿ ಪ್ರವಚನ ಮಾಡುತ್ತಿದ್ದಾರೆ. ಸಾಂವಿಧಾನಿಕ ಸಂಸ್ಥೆಗಳ ಘನತೆಯನ್ನು ತಮ್ಮ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಅಳೆಯುವ ಬಿಜೆಪಿಯಿಂದ ಕಾಂಗ್ರೆಸ್ ಪಕ್ಷಕ್ಕೆ ಸಂವಿಧಾನದ ಪಾಠ ಬೇಕಾಗಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

Tags

BJPleadersConstitutionCongressB.K. Hariprasad
share
ವಾರ್ತಾಭಾರತಿ
ವಾರ್ತಾಭಾರತಿ
Next Story
X