Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬಿಜೆಪಿಯವರದ್ದು ಮನುವಾದಿ ಮನಸ್ಥಿತಿ:...

ಬಿಜೆಪಿಯವರದ್ದು ಮನುವಾದಿ ಮನಸ್ಥಿತಿ: ಮಲ್ಲಿಕಾರ್ಜುನ ಖರ್ಗೆ ಭಾಷಣ ನಡೆಸಿದ 'ಸ್ಥಳ ಶುದ್ಧೀಕರಣ' ಘಟನೆ ಬಗ್ಗೆ ಸಚಿವ ಶಿವರಾಜ್ ತಂಗಡಗಿ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ19 Aug 2026 1:42 PM IST
share
ಬಿಜೆಪಿಯವರದ್ದು ಮನುವಾದಿ ಮನಸ್ಥಿತಿ: ಮಲ್ಲಿಕಾರ್ಜುನ ಖರ್ಗೆ ಭಾಷಣ ನಡೆಸಿದ ಸ್ಥಳ ಶುದ್ಧೀಕರಣ ಘಟನೆ ಬಗ್ಗೆ ಸಚಿವ ಶಿವರಾಜ್ ತಂಗಡಗಿ ಆಕ್ರೋಶ
"ಮುಂದಿನ‌ ದಿನಗಳಲ್ಲಿ ಛಲವಾದಿ ನಾರಾಯಣ ಸ್ವಾಮಿ ‌ಅವರ ಕುರ್ಚಿಯನ್ನು ಶುದ್ಧೀಕರಣ ಮಾಡಿದರೂ ಅಚ್ಚರಿಪಡಬೇಕಿಲ್ಲ"

ಬೆಂಗಳೂರು : ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿ ತೆರಳಿದ್ದ ಸ್ಥಳವನ್ನು ಗಂಗಾಜಲ ಸಿಂಪಡಿಸಿ ಹೋಮ ಮಾಡುವ ಮೂಲಕ 'ಶುದ್ಧೀಕರಣ' ಮಾಡಿದ ಮನುವಾದಿ ಮನಸ್ಥಿತಿಯುಳ್ಳವರು ಬಿಜೆಪಿಯವರು. ಇದೀಗ ಸಚಿವ ಬಿ.ನಾಗೇಂದ್ರ ಅವರು ದಲಿತ ಎಂಬ ಕಾರಣಕ್ಕೆ ಅನಗತ್ಯ ರಾಜಕೀಯ ಮಾಡುತ್ತಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್.ಎಸ್.ತಂಗಡಗಿ ಅವರು ಹೇಳಿದ್ದಾರೆ.

ಸಚಿವ‌ ನಾಗೇಂದ್ರ ಅವರೊಂದಿಗೆ ಬುಧವಾರ ವಿಧಾನಸೌಧದಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಶಿವರಾಜ್.ಎಸ್.ತಂಗಡಗಿ ಅವರು, ಖಂಡನಾ‌ ನಿರ್ಣಯದ ವೇಳೆ ಬಿಜೆಪಿಯ ಒಬ್ಬರು ಶಾಸಕರು ಧ್ವನಿ ಎತ್ತಲಿಲ್ಲ. ಇದೀಗ ನಾಗೇಂದ್ರ ಅವರು ದಲಿತರು ಎಂಬ ಕಾರಣಕ್ಕೆ ರಾಜಕೀಯ ಮಾಡುತ್ತಿದ್ದಾರೆ ಎಂದು ದೂರಿದರು.

ಸಂಸದೀಯ ವ್ಯವಸ್ಥೆಯಲ್ಲಿ ನಂಬಿಕೆ ಇದ್ದರೆ ಚರ್ಚೆಗೆ ಬರಲಿ. ನಾಗೇಂದ್ರ ಅವರು ಓರ್ವ ದಲಿತ ಸಮುದಾಯಕ್ಕೆ ಸೇರಿದ ನಾಯಕ ಎಂಬ ಕಾರಣಕ್ಕೆ ಇಂತಹ ಆರೋಪ ಮಾಡುತ್ತಾ ಸದನದ ಕಲಾಪವನ್ನು ಹಾಳು ಮಾಡುತ್ತಿರುವ ಬಿಜೆಪಿಗರಿಗೆ ಜನ ತಕ್ಕ‌‌ ಪಾಠ ಕಲಿಸಲಿದ್ದಾರೆ‌.

ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ‌ಅವರ ಖುರ್ಚಿಯನ್ನು ಮುಂದಿನ‌ ದಿನಗಳಲ್ಲಿ ಶುದ್ಧೀಕರಣ ಮಾಡಿದರೂ ಅಚ್ಚರಿಪಡಬೇಕಿಲ್ಲ.‌ ಸಂವಿಧಾನವನ್ನೇ ಬದಲಾಯಿಸಬೇಕೆಂಬ ಮನಸ್ಥಿತಿ ಹೊಂದಿರುವ ಇಂತಹವರಿಂದ ಏನನ್ನು ನಿರೀಕ್ಷೆ ಮಾಡಲು ಸಾಧ್ಯ. ಬಿಜೆಪಿ‌ ಪಕ್ಷದವರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಏಳ್ಗೆಯನ್ನು ಸಹಿಸಲ್ಲ ಎಂದು ವಾಗ್ದಾಳಿ ನಡೆಸಿದರು.

ಆರೋಪ ಕೇಳಿ ಬಂದ ಕೂಡಲೇ ನಾಗೇಂದ್ರ ಅವರು ರಾಜೀನಾಮೆ ಸಲ್ಲಿಸಿದರು. ಆರೋಪಿಯಾಗಿದ್ದರೆ ರಾಜ್ಯಪಾಲರು ಪ್ರಮಾಣ ವಚನ ಸ್ವೀಕಾರ ಮಾಡಲು ಅವಕಾಶ ನೀಡುತ್ತಿದ್ದರೇ? ರಾಜ್ಯಪಾಲರು ಮತ್ತು ಸಂವಿಧಾನಕ್ಕಿಂತ ಬಿಜೆಪಿಗರು ದೊಡ್ಡವರೇ? ತಮ್ಮ ಬಳಿ ಯಾವುದೇ ದಾಖಲೆಗಳಿದ್ದರೆ ಸದನದ ಮುಂದೆ ಇಡಲಿ. ವಿಸ್ತೃತವಾಗಿ ಚರ್ಚೆ ನಡೆಯಲಿ. ರಾಜ್ಯದಲ್ಲಿ ಬರಗಾಲ ಇದ್ದು, ನಾಡಿನ ಜನತೆಯ ಸಮಸ್ಯೆ ಬಗ್ಗೆ ಚರ್ಚೆ ನಡೆಸಲು ಅವಕಾಶ ನೀಡದೆ ಕಲಾಪವನ್ನು ಹಾಳು ಮಾಡುತ್ತಿದ್ದಾರೆ.ಬರಗಾಲದ ಸಂದರ್ಭದಲ್ಲಿ ಪ್ರತಿಪಕ್ಷವಾಗಿ‌ ವಿಪಕ್ಷ ನಾಯಕರದ್ದು ಪ್ರಮುಖ‌ ಜವಾಬ್ದಾರಿ ಇದೆ. ನಾಡಿನ ಜನತೆಯ ಹಿತ ಕಾಯುವುದು ಎಲ್ಲರ ಕರ್ತವ್ಯ. ಅದನ್ನು ಬಿಟ್ಟು ಸದನದಲ್ಲಿ ರಾಜಕಾರಣ ಮಾಡುತ್ತಿದ್ದಾರೆ ಎಂದು ಹರಿಹಾಯ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X