Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಹಾಲು, ಬಸ್ ಪ್ರಯಾಣ ದರ ಏರಿಕೆ ಖಂಡಿಸಿ...

ಹಾಲು, ಬಸ್ ಪ್ರಯಾಣ ದರ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

ಸಿಎಂ ಡಿ.ಕೆ., ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಯವರ ಆಟ ಇನ್ನು ನಡೆಯುವುದಿಲ್ಲ : ಬಿ.ವೈ.ವಿಜಯೇಂದ್ರ

ವಾರ್ತಾಭಾರತಿವಾರ್ತಾಭಾರತಿ11 Nov 2026 6:30 PM IST
share
ಹಾಲು, ಬಸ್ ಪ್ರಯಾಣ ದರ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

ಬೆಂಗಳೂರು : ಹಾಲು, ಮೊಸರು, ಸಾರಿಗೆ ಬಸ್ ಪ್ರಯಾಣ ದರ ಏರಿಕೆ ಖಂಡಿಸಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಪ್ರತಿಪಕ್ಷ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಫ್ರೀಡಂ ಪಾರ್ಕ್‍ನಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

‘ಹಾಲು, ಮೊಸರು, ಬಸ್ ಪ್ರಯಾಣ ದರ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಹೆಚ್ಚಿಸಿ ಕಿತ್ತೊಂಡು ತಿನ್ನೋ ಕಾಂಗ್ರೆಸ್ ಸರಕಾರಕ್ಕೆ ಧಿಕ್ಕಾರ, ಜಗತ್ತಿನಲ್ಲೇ ಅತ್ಯಂತ ದುಬಾರಿ ಹಾಲು-ಮೊಸರಿನ ಬೆಲೆ, ಸುಲಿಗೆಕೋರ ಸರಕಾರ ಕೂಡಲೇ ತೊಲಗಲಿ’ ಎಂದು ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗಿದರು. ಅಲ್ಲದೆ, ಏರಿಕೆ ಮಾಡಿದ ಬೆಲೆಗಳನ್ನು ಕೂಡಲೇ ಇಳಿಕೆ ಮಾಡಬೇಕು ಎಂದು ಒತ್ತಾಯಿಸಿದರು.

ಆಡಳಿತಾರೂಢ ಕಾಂಗ್ರೆಸ್ ಸರಕಾರಕ್ಕೆ ಮಾನ-ಮರ್ಯಾದೆ ಇದೆಯೇ? ಎಂದು ಜನತೆ ಕೇಳುತ್ತಿದ್ದಾರೆ. ಕೇವಲ ಬೆಲೆ ಎರಿಕೆಯೇ ಈ ಸರಕಾರದ ಮೂರೂವರೆ ವರ್ಷಗಳ ಸಾಧನೆ. ಬೆಲೆ ಏರಿಕೆ ನೀತಿಯಿಂದ ಜನಸಾಮಾನ್ಯರು, ಬಡವರು ಜೀವನ ಸಾಗಿಸಲು ಕಷ್ಟ. ಮನುಷ್ಯತ್ವ ಇಲ್ಲದ ಕಾಂಗ್ರೆಸ್ ಸರಕಾರಕ್ಕೆ ಜನತೆ ಹಿಡಿಶಾಪ ಹಾಕುತ್ತಿದ್ದಾರೆ ಎಂದು ವಿಜಯೇಂದ್ರ ವಾಗ್ದಾಳಿ ನಡೆಸಿದರು.

ಮೂರುವರೆ ವರ್ಷಗಳಲ್ಲಿ ಪೆಟ್ರೋಲ್, ಡೀಸೆಲ್ ತೆರಿಗೆಯನ್ನು 4 ಬಾರಿ ಹೆಚ್ಚಿಸಿದ್ದಾರೆ. ಸ್ಟಾಂಪ್ ಡ್ಯೂಟಿ ಹೆಚ್ಚಿಸಿದರು. ಸರಕಾರಿ ಆಸ್ಪತ್ರೆಯಲ್ಲಿ ದರ ಏರಿಸಿ ಬಡವರಿಗೆ ಬರೆ ಎಳೆದರು. ದೀಪಾವಳಿ ಸಂದರ್ಭದಲ್ಲಿ ಹಾಲಿನ ಮೇಲೆ 8ರೂ.ಹೆಚ್ಚಿಸಿದರು. ಮೊಸರು, ತುಪ್ಪದ ದರವನ್ನು ಹೆಚ್ಚಿಸಿದರು. ರೈತರಿಗೆ ಅನುಕೂಲ ಮಾಡಿಕೊಡಲು ಆಗ್ರಹಿಸಿದೆವು. ಯಡಿಯೂರಪ್ಪ ಅವರಂತೆ ರಾಜ್ಯ ಸರಕಾರವು ಸಬ್ಸಿಡಿ ನೀಡಲಿಲ್ಲ ಎಂದು ಅವರು ದೂರಿದರು.

ಬೆಲೆ ಏರಿಸುವ ಕೆಲಸ ಮಾಡುವ ಸರಕಾರದ ವಿರುದ್ಧ ಹೈಕೋರ್ಟ್ ಚಾಟಿ ಬೀಸಿದೆ. ಸಿಎಂ ಡಿ.ಕೆ. ಶಿವಕುಮಾರ್ ಸರಕಾರದಲ್ಲಿ ರಾಜ್ಯದ ಬಡವರು ಕಣ್ಣೀರು ಸುರಿಸುವ ಸ್ಥಿತಿ ಇದೆ. ರಾಜ್ಯದಲ್ಲಿ ಭೀಕರ ಬರಗಾಲವಿದೆ. ಪರಿಹಾರ ನೆಪದಲ್ಲಿ ಅನ್ನ ನೀಡುವ ರೈತರನ್ನು ಈ ಸರಕಾರ ಭಿಕ್ಷುಕರೆಂದು ಪರಿಗಣಿಸಿದ್ದು, ಪರಿಹಾರದ ಹೆಸರಿನಲ್ಲಿ ಕೆಲವರಿಗೆ 200, 300 ರೂ.ಕೊಟ್ಟು ಉಳಿದ ಹಣಕ್ಕೆ ಕನ್ನ ಹಾಕುವ ಕೆಲಸ ನಡೆದಿದೆ ಎಂದು ದೂರಿದರು.

ಪರಿಷತ್ತಿನ ನಾಲ್ಕು ಕ್ಷೇತ್ರಗಳ ಚುನಾವಣೆಯಲ್ಲಿ ಎನ್‍ಡಿಎಗೆ ಜನ ಆಶೀರ್ವಾದ ಮಾಡಿದ್ದಾರೆ. ಸಿಎಂ ಡಿ.ಕೆ., ಕೆಪಿಸಿಸಿ ಅಧ್ಯಕ್ಷ ಬಿ.ಕೆ., ಗೃಹ ಸಚಿವ ಪಿ.ಕೆ.ಯವರ ಆಟ ಇನ್ನು ನಡೆಯುವುದಿಲ್ಲ. ನೀವು ಗಂಟು ಮೂಟೆ ಕಟ್ಟಿಕೊಂಡು ಮನೆಗೆ ಹೋಗುವ ದಿನಗಳು ಹತ್ತಿರ ಬಂದಿವೆ ಎಂದು ವಿಜಯೇಂದ್ರ ಎಚ್ಚರಿಸಿದರು.

ಎನ್‍ಡಿಎ ಗೆಲುವು ಖಚಿತ: ರಾಜ್ಯದಲ್ಲಿ ಎಂದೇ ಚುನಾವಣೆ ನಡೆದರೂ ಕಾಂಗ್ರೆಸ್ ಸರಕಾರವನ್ನು ಜನತೆ ಮನೆಗೆ ಕಳಿಸುತ್ತಾರೆ. ರಾಜ್ಯ ಸರಕಾರವು 6ನೇ ಗ್ಯಾರಂಟಿಯಾಗಿ ಬೆಲೆ ಏರಿಕೆಯನ್ನು ನೀಡಿದೆ. ಬಿಜೆಪಿ ನೇತೃತ್ವದ ಎನ್‍ಡಿಎ ಸರಕಾರವನ್ನು ಜನತೆ ಚುನಾವಣೆಯಲ್ಲಿ ಗೆಲ್ಲಿಸಿ, ನಿಮ್ಮನ್ನು ದಿಕ್ಕಾಪಾಲಾಗಿ ಮಾಡುವುದು ಶತಸ್ಸಿದ್ಧ ಎಂದು ಅವರು ಭವಿಷ್ಯ ನುಡಿದರು.

ಬಿಜೆಪಿ ಮುಖಂಡರು, ಕಾರ್ಯಕರ್ತರಲ್ಲಿ ಉತ್ಸಾಹ ಮೂಡಿಸಿ ಭ್ರಷ್ಟ ಕಾಂಗ್ರೆಸ್ ಸರಕಾರವನ್ನು ಕಿತ್ತು ಹಾಕಲು ಪ್ರೇರೇಪಿಸಬೇಕು. ಆಗ ಎನ್‍ಡಿಎ ಸರಕಾರ ಕರ್ನಾಟಕದಲ್ಲಿ ಅಧಿಕಾರಕ್ಕೆ ಏರುವುದು ಖಚಿತ ಎಂದು ಭರವಸೆ ವ್ಯಕ್ತಪಡಿಸಿದ ಮಾಜಿ ಸಿಎಂ ಯಡಿಯೂರಪ್ಪ, ಈ ಸರಕಾರ ದಿವಾಳಿಯಾಗಿದೆ. ಸರಕಾರಿ ಬಸ್ಸುಗಳಿಗೆ ಡೀಸೆಲ್ ಕೊಡಲು ಸಾಧ್ಯವಿಲ್ಲ ಎಂದು ಸಿಎಂ ಶಿವಕುಮಾರ್ ಹೇಳಿದ್ದಾರೆ. ಹಣ-ಹೆಂಡ-ತೋಳ್ಬಲ, ಅಧಿಕಾರ ಬಲದಿಂದ ಅಧಿಕಾರಕ್ಕೆ ಬರುವ ಭ್ರಮೆಯಲ್ಲಿರುವ ಕಾಂಗ್ರೆಸ್ ಪಕ್ಷವನ್ನು ಜನರು ತಿರಸ್ಕರಿಸಿದ್ದಾರೆ ಎಂದು ಹೇಳಿದರು.

‘ಪ್ರತಿಪಕ್ಷ ನಾಯಕನಾದ ನನಗೆ ಚಾಕು, ಚೂರಿ ಕಳುಹಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ಸಂಸ್ಕೃತಿಯೇ ಚಾಕು, ಚೂರಿ ಸಂಸ್ಕೃತಿ. 2028ರಲ್ಲಿ ರಾಜ್ಯದ ಜನರು ಮನಸ್ಸು ಮಾಡಿದರೆ ಇವರನ್ನು ಅರಬ್ಬಿ ಸಮುದ್ರದಲ್ಲಿ ಹುಡುಕಿದರೂ ಸಿಗುವುದಿಲ್ಲ. ಕಾಂಗ್ರೆಸ್ಸಿನ ತುಂಡುಗಳು ಎಲ್ಲೆಡೆ ಇವೆ. ವಿದ್ಯಾವಂತರ ಹೆಚ್ಚಳದಿಂದ ಕಾಂಗ್ರೆಸ್ಸಿನ ಮನೆ ಬಾಗಿಲು ಹಾಕುವಂತಾಗಿದೆ’

-ಛಲವಾದಿ ನಾರಾಯಣಸ್ವಾಮಿ, ವಿಧಾನ ಪರಿಷತ್ ವಿಪಕ್ಷ ನಾಯಕ

Tags

BJP protests
share
ವಾರ್ತಾಭಾರತಿ
ವಾರ್ತಾಭಾರತಿ
Next Story
X