Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬರದ ಬಗ್ಗೆ ಮಾತಾಡುವ ಬಿಜೆಪಿಯವರು...

ಬರದ ಬಗ್ಗೆ ಮಾತಾಡುವ ಬಿಜೆಪಿಯವರು ಕೇಂದ್ರದಿಂದ ಪರಿಹಾರ ತರಲಿ, ನರೇಗಾ ಯೋಜನೆಯಡಿ ಮಾನವ ದಿನಗಳನ್ನು ಹೆಚ್ಚಿಸಲಿ: ಡಿಸಿಎಂ ಡಿಕೆಶಿ

ವಾರ್ತಾಭಾರತಿವಾರ್ತಾಭಾರತಿ8 Dec 2023 3:19 PM IST
share
ಬರದ ಬಗ್ಗೆ ಮಾತಾಡುವ ಬಿಜೆಪಿಯವರು ಕೇಂದ್ರದಿಂದ ಪರಿಹಾರ ತರಲಿ, ನರೇಗಾ ಯೋಜನೆಯಡಿ ಮಾನವ ದಿನಗಳನ್ನು ಹೆಚ್ಚಿಸಲಿ: ಡಿಸಿಎಂ ಡಿಕೆಶಿ

ಬೆಳಗಾವಿ: "ಬಿಜೆಪಿ ನಾಯಕರು ಬರಗಾಲದ ಬಗ್ಗೆ ಸುಮ್ಮನೆ ಮಾತನಾಡುವ ಬದಲು ಕೇಂದ್ರ ಸರ್ಕಾರದಿಂದ ಪರಿಹಾರ ತರಲಿ ಹಾಗೂ ನರೇಗಾ ಯೋಜನೆಯಡಿ ಮಾನವ ದಿನಗಳನ್ನು 150ಕ್ಕೆ ಹೆಚ್ಚಳ ಮಾಡಿಸಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.

ಬೆಳಗಾವಿ ವಿಮಾನ ನಿಲ್ದಾಣದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, “ಬರಗಾಲ ಬಂದಿದೆ. ವಿರೋಧ ಪಕ್ಷದ ನಾಯಕರು ಕೂಡ ಬರ ಅಧ್ಯಯನಕ್ಕಾಗಿ ಓಡಾಡಿದ್ದಾರೆ. ಅವರು ಕೇಂದ್ರ ಸರ್ಕಾರದಿಂದ ಪರಿಹಾರ ಹಣ ಕೊಡಿಸಲಿ. ಬರಗಾಲ ಹಿನ್ನೆಲೆಯಲ್ಲಿ ನರೇಗಾ ಯೋಜನೆಯಲ್ಲಿ ಕಾನೂನಿನ ಪ್ರಕಾರ ಪ್ರತಿ ವ್ಯಕ್ತಿಗೆ ಇರುವ 100 ಕೆಲಸದ ದಿನಗಳನ್ನು 150 ದಿನಗಳಿಗೆ ವಿಸ್ತರಣೆ ಮಾಡಬಹುದು. ಇದನ್ನು ಕೇಂದ್ರ ಸರ್ಕಾರದಿಂದ ಘೋಷಣೆ ಮಾಡಿಸುತ್ತಿಲ್ಲ ಯಾಕೆ? ಕೇಂದ್ರ ಸರ್ಕಾರದಿಂದ ಪರಿಹಾರ ಹಣ ಕೊಡಿಸುತ್ತಿಲ್ಲ ಯಾಕೆ?" ಎಂದು ಪ್ರಶ್ನಿಸಿದರು.

"ನಮ್ಮ ಸರ್ಕಾರದಲ್ಲಿ ಕಂದಾಯ ಹಾಗೂ ಕೃಷಿ ಸಚಿವರುಗಳು ಎಲ್ಲರಿಗಿಂತ ಮುಂಚಿತವಾಗಿ ರಾಜ್ಯದ ಬರ ಪರಿಸ್ಥಿತಿ ಅಧ್ಯಯನ ಮಾಡಿ ಕೇಂದ್ರಕ್ಕೆ ವರದಿ ಸಲ್ಲಿಸಿದ್ದಾರೆ. ರಾಜ್ಯದಲ್ಲಿ 200ಕ್ಕೂ ಹೆಚ್ಚು ತಾಲೂಕುಗಳು ಬರಕ್ಕೆ ತುತ್ತಾಗಿದ್ದು, ಪರಿಹಾರ ಬೇಕು ಎಂದು ಕೇಳಿದ್ದಾರೆ. ಈವರೆಗೂ ಕೇಂದ್ರ ಸರ್ಕಾರ ಬಿಡಿಗಾಸು ಪರಿಹಾರ ನೀಡಿಲ್ಲ. ಈಗ ಅವರು ಬಿಜೆಪಿ ನಾಯಕರು ತಮ್ಮ ವರದಿ ಕೊಟ್ಟು ಪರಿಹಾರ ಕೊಡಿಸಲಿ. ಬರಗಾಲ ಎಂದು ಕೇವಲ ಮಾತನಾಡುವುದಲ್ಲ. ಬರೀ ಆರೋಪ ಮಾಡುವುದಕ್ಕಿಂತ ತಾನು ಏನು ಮಾಡಿದ್ದೇವೆ ಎಂದು ಹೇಳಬೇಕು” ಎಂದು ತಿಳಿಸಿದರು.

ರಾಜ್ಯ ಸರಕಾರದ ವತಿಯಿಂದ ಯಾವ ಪ್ಯಾಕೇಜ್ ಘೋಷಣೆ ಮಾಡುತ್ತೀರಾ ಎಂದು ಕೇಳಿದಾಗ, “ಈ ವಿಚಾರವಾಗಿ ಮುಖ್ಯಮಂತ್ರಿಗಳು ಯಾರಿಗೆ ಯಾವ ರೀತಿ ಪರಿಹಾರ ನೀಡಬೇಕು ಎಂದು ಮಾತನಾಡಿದ್ದಾರೆ. ಬರಪೀಡಿತ ಪ್ರದೇಶಗಳಲ್ಲಿ ಕುಡಿಯುವ ನೀರು, ಗೋಶಾಲೆಗಳಿಗೆ ಮೇವು ಸೇರಿದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ” ಎಂದು ತಿಳಿಸಿದರು.

ಇನ್ನು ತೆಲಂಗಾಣ ಸರಕಾರ ರಚನೆ ಬಗ್ಗೆ ಮಾತನಾಡಿ, “ಸೋನಿಯಾ ಗಾಂಧಿ ಅವರು ತೆಲಂಗಾಣ ರಾಜ್ಯ ರಚನೆಗೆ ನೆರವಾಗಿದ್ದರು. ಕೆಸಿಆರ್ ಅವರು ಪಕ್ಷವನ್ನು ವಿಲೀನ ಮಾಡಿ ನಮ್ಮ ಜೊತೆ ಇರುವುದಾಗಿ ಹೇಳಿದ್ದರು. ಆದರೆ ಅವರು ಪ್ರತ್ಯೇಕವಾಗಿ 10 ವರ್ಷಗಳ ಕಾಲ ಸರಕಾರ ನಡೆಸಿದರು. ಈ ವಿಚಾರವಾಗಿ ನಾವು ಜನರಿಗೆ ಮನದಟ್ಟು ಮಾಡಿಕೊಟ್ಟು ನಿಮ್ಮಲ್ಲಿ ಬದಲಾವಣೆ ತರುತ್ತೇವೆ ಎಂದು ಭರವಸೆ ನೀಡಿದೆವು. ಹೀಗಾಗಿ ತೆಲಂಗಾಣ ರಾಜ್ಯದ ಜನ ಕಾಂಗ್ರೆಸ್ ಪಕ್ಷದ ಮೇಲೆ ನಂಬಿಕೆ ಇಟ್ಟಿದ್ದಾರೆ. ಇಂದು ತೆಲಂಗಾಣದಲ್ಲಿ ಸರಕಾರ ರಚನೆಯಾಗಿದೆ. ನಾನು, ಮುಖ್ಯಮಂತ್ರಿಗಳು ಸೇರಿದಂತೆ ಕೆಲವು ನಾಯಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೇವೆ” ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X