Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. "ಯಡಿಯೂರಪ್ಪ, ವಿಜಯೇಂದ್ರರಿಂದ ಒಪ್ಪಂದ...

"ಯಡಿಯೂರಪ್ಪ, ವಿಜಯೇಂದ್ರರಿಂದ ಒಪ್ಪಂದ ರಾಜಕೀಯ" : ಪ್ರಧಾನಿ ಮೋದಿ, ಭಾಗವತ್‌ಗೆ ಪತ್ರ ಬರೆದ ಬಿಜೆಪಿ ಕಾರ್ಯಕರ್ತರು

ವಾರ್ತಾಭಾರತಿವಾರ್ತಾಭಾರತಿ3 Dec 2024 4:03 PM IST
share
ಯಡಿಯೂರಪ್ಪ, ವಿಜಯೇಂದ್ರರಿಂದ ಒಪ್ಪಂದ ರಾಜಕೀಯ : ಪ್ರಧಾನಿ ಮೋದಿ, ಭಾಗವತ್‌ಗೆ ಪತ್ರ ಬರೆದ ಬಿಜೆಪಿ ಕಾರ್ಯಕರ್ತರು

ಬೆಂಗಳೂರು : ಮಾಜಿ ಸಿಎಂ ಬಿ.ಎಸ್.​ಯಡಿಯೂರಪ್ಪ, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೊಂದಾಣಿಕೆ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು, ಪ್ರಧಾನಿ ನರೇಂದ್ರ ಮೋದಿ, ಆರೆಸ್ಸೆಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಹಾಗೂ ಬಿಎಲ್‌ ಸಂತೋಷ್‌ಗೆ ಬರೆದಿದ್ದಾರೆ ಎನ್ನಲಾದ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಬಳಿ ಯಡಿಯೂರಪ್ಪ, ವಿಜಯೇಂದ್ರ ಕೈಜೋಡಿಸಿದ್ದಾರೆ. ಅವರ ನಡುವೆ ಒಪ್ಪಂದ ರಾಜಕೀಯ ಇದೆ. ಇದರಿಂದ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಚನ್ನಪಟ್ಟಣದಲ್ಲಿ ಸೋಲು ಕಂಡಿದ್ದಾರೆ. ಡಿ.ಕೆ.ಶಿವಕುಮಾರ್, ವಿಜಯೇಂದ್ರ ವ್ಯಾಪಾರ ಹಿತಾಸಕ್ತಿ ಹೊಂದಿದ್ದಾರೆ. ಅಲ್ಲದೆ, ವಿಪಕ್ಷ ನಾಯಕ ಆರ್.ಅಶೋಕ್ ವಿಫಲರಾಗಿದ್ದಾರೆ. ಕೂಡಲೇ ರಾಜ್ಯ ಬಿಜೆಪಿ ವಿಚಾರದಲ್ಲಿ ಕ್ರಮ ಕೈಗೊಳ್ಳಬೇಕೆಂದು ಪತ್ರದಲ್ಲಿ ತಿಳಿಸಲಾಗಿದೆ.

ಪತ್ರದಲ್ಲೇನಿದೆ :

"ನಾವು, ಕೆಳಮಟ್ಟದ ಬಿಜೆಪಿ ಸದಸ್ಯರ ಗುಂಪೊಂದು, ಕರ್ನಾಟಕದ ಬಿಜೆಪಿ ನಾಯಕತ್ವದಲ್ಲಿ ನಡೆಯುತ್ತಿರುವ ದುಸ್ಥಿತಿಯನ್ನು ಹಂಚಿಕೊಳ್ಳಲು ಈ ಪತ್ರವನ್ನು ಬರೆಯುತ್ತೇವೆ. ಈ ಸಮಸ್ಯೆಗಳನ್ನು ತಕ್ಷಣವೇ ಪರಿಹರಿಸಲಾಗದಿದ್ದರೆ ಭವಿಷ್ಯದಲ್ಲಿ ಪಕ್ಷದ ಪತನಕ್ಕೆ ಇದು ಕಾರಣವಾಗಬಹುದು. ಇತ್ತೀಚೆಗೆ ನಡೆದ ವಿಧಾನಸಭೆ ಉಪಚುನಾವಣೆಯಲ್ಲಿ ಬಿಜೆಪಿ ಮೂರು ಕ್ಷೇತ್ರಗಳಲ್ಲೂ ಸೋತಿದ್ದು, ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮತ್ತು ಅವರ ತಂದೆ ಬಿ ಎಸ್ ಯಡಿಯೂರಪ್ಪ ನಡೆಸುತ್ತಿರುವ “ಒಪ್ಪಂದ ರಾಜಕೀಯ”ದ ಮೇಲೆ ಬೆಳಕು ಚೆಲ್ಲಿದೆ. ಇವರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಜೊತೆ ಕೈಜೋಡಿಸಿದ್ದಾರೆ" ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣದ ವಿಚಾರದಲ್ಲಿ ಸಿದ್ದರಾಮಯ್ಯ ಅವರನ್ನು ತಡೆಯಲು ಸಾಕಷ್ಟು ಅವಕಾಶ ಇದ್ದರೂ, ಅವರು ಇನ್ನೂ ಅಧಿಕಾರದಲ್ಲಿದ್ದಾರೆ. ಇದು ವಿಜಯೇಂದ್ರ ಮತ್ತು ಯಡಿಯೂರಪ್ಪನವರ ರಕ್ಷಣೆಯ ಕಾರಣದಿಂದಷ್ಟೇ ಸಂಭವಿಸುತ್ತಿದೆ. ಕೆಲವು ತಿಂಗಳ ಹಿಂದೆ, ಸಿದ್ದರಾಮಯ್ಯ ಪೋಕ್ಸೋ ಪ್ರಕರಣದಲ್ಲಿ ಯಡಿಯೂರಪ್ಪ ಅವರನ್ನು ರಕ್ಷಿಸಿದ್ದರು, ಅವರನ್ನು ಸಮಯಕ್ಕೆ ನ್ಯಾಯಾಲಯಕ್ಕೆ ಹೋಗಲು ಅವಕಾಶ ಮಾಡಿಕೊಡಲಾಯಿತು ಎಂದು ಉಲ್ಲೇಖಿಸಲಾಗಿದೆ.

ಇತ್ತೀಚಿನ ಸಂಡೂರು ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಸಕ್ರೀಯವಾಗಿರಲಿಲ್ಲ. ಚೆನ್ನಪಟ್ಟಣ ಕ್ಷೇತ್ರದಲ್ಲಿ ವಿಜಯೇಂದ್ರ ಮತ್ತು ಯಡಿಯೂರಪ್ಪ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಜೆಡಿಎಸ್‌ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ವಿರುದ್ಧ ಗೆಲ್ಲಲು ಸಹಾಯ ಮಾಡಿದರು. ಆದರೆ ಶಿಗ್ಗಾಂವಿ ಕ್ಷೇತ್ರದಲ್ಲಿ ಬಿಜೆಪಿ ಮುಸ್ಲಿಂ ಅಭ್ಯರ್ಥಿಯನ್ನು ಸೋಲಿಸಲು ವಿಫಲವಾಯಿತು, ಇದು ಬಸವರಾಜ ಬೊಮ್ಮಾಯಿಗೆ ತೀವ್ರ ಆಘಾತ ನೀಡಿದೆ ಎಂದು ತಿಳಿಸಲಾಗಿದೆ.

ವಿಜಯೇಂದ್ರ ಮತ್ತು ಡಿಕೆ ಶಿವಕುಮಾರ್ ಬೆಂಗಳೂರಿನಲ್ಲಿ ಮತ್ತು ಇತರ ಕಡೆಗಳಲ್ಲಿ ವ್ಯಾಪಾರ ಹಿತಾಸಕ್ತಿಗಳನ್ನು ಹೊಂದಿದ್ದಾರೆ. ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಕೂಡ ಈ ಸಂಬಂಧದಲ್ಲಿ ವಿಭಿನ್ನರಲ್ಲ. ಕಾಂಗ್ರೆಸ್ ಸರ್ಕಾರ ಈ ಬಿಜೆಪಿ ನಾಯಕರ ವ್ಯವಹಾರ ಬೆಳವಣಿಗೆಗೆ ಸಹಾಯ ಮಾಡುತ್ತಿದ್ದು, ಬಿಜೆಪಿ ನಾಯಕರು ಚುನಾವಣೆ ಮತ್ತು ಹಗರಣಗಳಲ್ಲಿ ಕಾಂಗ್ರೆಸ್ ನಾಯಕರಿಗೆ ಬೆಂಬಲ ನೀಡುತ್ತಾರೆ. ಆರ್.ಅಶೋಕ್‌, ವಿರೋಧ ಪಕ್ಷದ ನಾಯಕರಾಗಿ ಅತ್ಯಂತ ವಿಫಲರಾಗಿದ್ದಾರೆ ಎಂದಿದ್ದಾರೆ.

ವಿಧಾನಸಭೆಯಲ್ಲಿ ಬಸನಗೌಡ ಪಾಟೀಲ್ ಯತ್ನಾಳ್, ಸುನಿಲ್ ಕುಮಾರ್ ಅವರಂತಹ ಕೆಲವು ಬಿಜೆಪಿ ನಾಯಕರನ್ನು ಹೊರತುಪಡಿಸಿ, ಉನ್ನತ ನಾಯಕರು ಕಾಂಗ್ರೆಸ್ ಸರಕಾರದ ಅನ್ಯಾಯಗಳ ವಿರುದ್ಧ ಪ್ರತೀಕಾರ ತೋರಿಸುವಂತೆ ಕಾಣುತ್ತಿಲ್ಲ. ಈ ನಮಸ್ಯೆಗಳು ಬೆಳಕಿಗೆ ತರುತ್ತಿದ್ದರೂ, ಪಕ್ಷವು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಉಲ್ಲೇಖಿಸಲಾಗಿದೆ.

ರಾಜ್ಯ ಮಟ್ಟದಲ್ಲಿ ನಾಯಕತ್ವದಲ್ಲಿ ಬದಲಾವಣೆ ನಡೆಯದಿರುವುದರಿಂದ ಈ ತಾರತಮ್ಯ ರಾಜಕೀಯ ಮುಂದುವರಿಯುತ್ತಲೇ ಇರುತ್ತದೆ, ನಮ್ಮಂತಹ ಕೆಳಮಟ್ಟದ ಕಾರ್ಯಕರ್ತರು ಇದರಿಂದ ಕಷ್ಟವನ್ನು ಅನುಭವಿಸಬೇಕಾಗುತ್ತದೆ. ಬಿಜೆಪಿ “ಪಾರ್ಟಿ ವಿತ್ ಎ ಡಿಫರೆನ್ಸ್” ಎಂದು ಕರೆಯಲ್ಪಡುವುದರಿಂದ ಕಾರ್ಯಕರ್ತರ ಹಿತವನ್ನು ರಕ್ಷಿಸಲು ಆತ್ಮಾವಲೋಕನ ಮಾಡುವ ಮತ್ತು ಬದಲಾವಣೆಗಳನ್ನು ತರುವ ಅಗತ್ಯವಿದೆ. ಈ ಪತ್ರವನ್ನು ಗಂಭೀರವಾಗಿ ಪರಿಗಣಿಸಿ, ಕ್ರಮ ಕೈಗೊಳ್ಳಲಾಗುತ್ತದೆ ಎಂಬ ಆಶೆಯಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X