Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ...

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್

ವಾರ್ತಾಭಾರತಿವಾರ್ತಾಭಾರತಿ8 May 2026 8:01 PM IST
share
ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್

ಬೆಂಗಳೂರು, ಮೇ 8: ‘ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿಗಳ ಇತಿಹಾಸವನ್ನು ದೇಶ ಮರೆತಿಲ್ಲ. ತಮಿಳುನಾಡಿನಲ್ಲಿ ಜಾತ್ಯತೀತ ಶಕ್ತಿಗಳ ಒಕ್ಕೂಟವನ್ನು ಪ್ರಶ್ನಿಸುವ ಬಿಜೆಪಿ, ಮೊದಲು ತನ್ನ ರಾಜಕೀಯ ಕನ್ನಡಿಯಲ್ಲಿ ತನ್ನದೇ ಮುಖವನ್ನು ನೋಡಿಕೊಂಡರೆ ಸಾಕು ಮುಖವಾಡಗಳೇ ಕಾಣುತ್ತವೆ’ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಟೀಕಿಸಿದ್ದಾರೆ.

ಶುಕ್ರವಾರ ಎಕ್ಸ್‌ ನಲ್ಲಿ ಪೋಸ್ಟ್ ಹಾಕಿರುವ ಅವರು, ‘ತಮಿಳುನಾಡಿನ ಕಾಂಗ್ರೆಸ್ ಪಕ್ಷದ ಮೈತ್ರಿ ರಾಜಕಾರಣದ ಬಗ್ಗೆ ಬಿಜೆಪಿ ನಾಯಕ ಬಿ.ಎಲ್.ಸಂತೋಷ್ ನೀಡುತ್ತಿರುವ ಉಪದೇಶಗಳು ಹಾಸ್ಯಾಸ್ಪದ ಮಾತ್ರವಲ್ಲ, ಆತ್ಮದ್ರೋಹಿತನದ ಪರಮಾವಧಿ. ದೇಶದ ಜಾತ್ಯತೀತ, ಪ್ರಜಾಪ್ರಭುತ್ವ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ’ ಎಂದು ಹೇಳಿದ್ದಾರೆ.

‘ಕಾಶ್ಮೀರದಲ್ಲಿ ಪ್ರತ್ಯೇಕತಾವಾದದ ರಾಜಕೀಯ ನೆರಳಿನ ನಡುವೆ ಅಧಿಕಾರ ಹಂಚಿಕೊಂಡಿದ್ದು ಯಾರು?. ಪಂಜಾಬಿನಲ್ಲಿ ಪ್ರತ್ಯೇಕತಾವಾದದ ರಾಜಕೀಯ ಆರೋಪಗಳಿಂದ ಸುತ್ತುವರಿದ ಅಕಾಲಿದಳದೊಂದಿಗೆ ದಶಕಗಳ ಕಾಲ ಅಧಿಕಾರ ಸವಿದದ್ದು ಯಾರು?. ತ್ರಿಪುರಾದಲ್ಲಿ ‘ಟಿಪ್ರಾಲ್ಯಾಂಡ್’ ಬೇಡಿಕೆಯನ್ನು ಎತ್ತಿ ಹಿಡಿಯುವ ಐಪಿಎಫ್‍ಟಿ ಪಕ್ಷದ ಜೊತೆ ಸರ್ಕಾರ ನಡೆಸುತ್ತಿರುವುದು ಯಾವ ರಾಷ್ಟ್ರಭಕ್ತಿಯ ರಾಜಕೀಯ?’ ಎಂದು ಹರಿಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ.

‘ಬಿಹಾರದಲ್ಲಿ ‘ಜಂಗಲ್ ರಾಜ’ ಎಂದು ಹೀಯಾಳಿಸುತ್ತಿದ್ದವರ ಮನೆ ಬಾಗಿಲಿಗೆ ಹೋಗಿ ಅಪ್ಪಿಕೊಂಡು ಸರಕಾರ ನಡೆಸುತ್ತಿರುವುದು ಯಾವ ಮಾಸ್ಟರ್ ಸ್ಟ್ರೋಕ್?. ಮಹಾರಾಷ್ಟ್ರದಲ್ಲಿ ಭ್ರಷ್ಟಾ ಚಾರದ ಪ್ರತೀಕವಾಗಿದ್ದವರನ್ನೇ ಉಪಮುಖ್ಯಮಂತ್ರಿ ಮಾಡಿದ್ದು ಯಾವ ಚುನಾವಣಾ ತಂತ್ರಗಾರಿಕೆ?. ಭ್ರಷ್ಟರನ್ನು ಪ್ರಮಾಣಿಕರನ್ನಾಗಿ ಮಾಡುವ, ದೇಶದ್ರೋಹಿಗಳನ್ನು ದೇಶಪ್ರೇಮಿಗಳನ್ನಾಗಿ ನೋಡುವ, ಪ್ರತ್ಯೇಕತಾವಾದಿಗಳನ್ನು ರಾಷ್ಟ್ರಭಕ್ತರ ಕೂಟವನ್ನಾಗಿ ಮಾಡುವುದು ಬಿಜೆಪಿಯ ಹೀನ ರಾಜಕೀಯ ನೀತಿಯಲ್ಲವೇ?’ ಎಂದು ಹರಿಪ್ರಸಾದ್ ಖಾರವಾಗಿ ಪ್ರಶ್ನಿಸಿದ್ದಾರೆ.

ಈಡಿ, ಐಟಿ, ಸಿಬಿಐಗಳನ್ನೇ ರಾಜಕೀಯ ಶಾಖೆಗಳಂತೆ ಬಳಸಿಕೊಂಡು ವಿಪಕ್ಷಗಳ ನಾಯಕರನ್ನು ಬೆದರಿಸುವುದು, ಸರಕಾರಗಳನ್ನು ಉರುಳಿಸುವುದು, ಜನಾದೇಶವನ್ನು ಖರೀದಿಸುವುದು ಇದೇ ಬಿಜೆಪಿ ಕಟ್ಟಿಕೊಂಡಿರುವ ‘ಹೊಸ ಪ್ರಜಾಪ್ರಭುತ್ವ’. ತಮಿಳುನಾಡಿನಲ್ಲಿ ಜನರು ಬಿಜೆಪಿಯನ್ನು ಹೀನಾಯವಾಗಿ ಸೋಲಿಸುವುದು ಮಾತ್ರವಲ್ಲ, ತಮಿಳುನಾಡಿನ ಜಾತ್ಯತೀತ ನೆಲ ಬಿಜೆಪಿ ಸಿದ್ದಾಂತವನ್ನು ಸ್ಪಷ್ಟವಾಗಿ ತಿರಸ್ಕಾರ ಮಾಡಿದೆ.

ಸ್ವತಂತ್ರವಾಗಿ ನೆಲೆಯೇ ಇಲ್ಲದ ಪಕ್ಷ, ಮೈತ್ರಿಗಳ ಬಗ್ಗೆ ನೀತಿ ಪಾಠ ಹೇಳುವುದು ರಾಜಕೀಯ ವ್ಯಂಗ್ಯದ ಪರಾಕಾಷ್ಠೆ. ಕಾಂಗ್ರೆಸ್ ಪಕ್ಷ ದೇಶದ ಏಕತೆ, ಸಂವಿಧಾನ ಮತ್ತು ಜಾತ್ಯತೀತ ಮೌಲ್ಯಗಳಿಗಾಗಿ ಮೈತ್ರಿ ಮಾಡುತ್ತದೆ. ಬಿಜೆಪಿ ಪಕ್ಷ ಅಧಿಕಾರಕ್ಕಾಗಿ ಯಾವುದರೊಂದಿಗಾದರೂ ಒಪ್ಪಂದ ಮಾಡುತ್ತದೆ. ಇದೇ ಎರಡರ ನಡುವಿನ ಮೂಲಭೂತ ವ್ಯತ್ಯಾಸ’ ಎಂದು ಅವರು ತಿಳಿಸಿದ್ದಾರೆ.

“ತಮಿಳುನಾಡಿನ ಕಾಂಗ್ರೆಸ್ ಪಕ್ಷದ ಮೈತ್ರಿ ರಾಜಕಾರಣದ ಬಗ್ಗೆ ಬಿಜೆಪಿ ನಾಯಕ @blsanthosh ನೀಡುತ್ತಿರುವ ಉಪದೇಶಗಳು ಹಾಸ್ಯಾಸ್ಪದ ಮಾತ್ರವಲ್ಲ, ಆತ್ಮದ್ರೋಹಿತನದ ಪರಮಾವಧಿ. ದೇಶದ ಜಾತ್ಯಾತೀತ, ಪ್ರಜಾಪ್ರಭುತ್ವ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ. ಆದರೆ @BJP4Karnataka ಪಕ್ಷ…

— Hariprasad.B.K. (@HariprasadBK2) May 8, 2026

Tags

BK Hariprasad
share
ವಾರ್ತಾಭಾರತಿ
ವಾರ್ತಾಭಾರತಿ
Next Story
X