ಆರೆಸ್ಸೆಸ್- ಬಿಜೆಪಿ ಪ್ರತಿಪಾದಿಸುವ ನಕಲಿ ಹಿಂದುತ್ವವನ್ನು ವಿರೋಧಿಸುತ್ತಲೇ ಇರುತ್ತೇನೆ : ಬಿ.ಕೆ.ಹರಿಪ್ರಸಾದ್

ಬೆಂಗಳೂರು : ಪಂಚಾಯಿತಿ ಚುನಾವಣೆಯಲ್ಲೂ ಸ್ಪರ್ಧಿಸದೇ ಇದ್ದ ನರೇಂದ್ರ ಮೋದಿಯನ್ನು ಗುಜರಾತಿನಲ್ಲಿ ಮುಖ್ಯಮಂತ್ರಿ ಮಾಡಿದವರು ಯಾರು? ಯಾವ ಜನರಿಂದ ಆಯ್ಕೆಯಾಗಿ ಮುಖ್ಯಮಂತ್ರಿಯಾಗಿದ್ದರು ಎನ್ನುವ ಇತಿಹಾಸವಾದರೂ ಬಿಜೆಪಿಗೆ ನೆನಪಿದೆಯೇ? ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಪ್ರಶ್ನಿಸಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಕಾಂಗ್ರೆಸ್ ಪಕ್ಷದಲ್ಲಿ ಪೇಮೆಂಟ್ ಕೊಟ್ಟು ಅಧ್ಯಕ್ಷರಾಗುವುದು ರೂಢಿಯೂ ಇಲ್ಲ, ಕೊಲೆ ಕೇಸಿನಲ್ಲಿ ಗಡಿಪಾರಾದವರು, ಪೋಕ್ಸೋ ಆರೋಪಿಗಳು, ಕ್ರಿಮಿನಲ್ಸ್ ಹಾಗೂ ಜೈಲುವಾಸಿಗಳನ್ನು ಅಧ್ಯಕ್ಷರನ್ನಾಗಿ ಮಾಡುವ ಕೆಟ್ಟ ಪರಂಪರೆಯೂ ಇಲ್ಲ ಎಂದು ತಿಳಿಸಿದ್ದಾರೆ.
ಯಾವ ಚುನಾವಣೆಯನ್ನೂ ನಡೆಸದೇ, ಕನಿಷ್ಟ ಪಕ್ಷ ಆರೆಸ್ಸೆಸ್ ಸಂಘಪರಿವಾರದಲ್ಲೇ ಚುನಾವಣೆ ಎದುರಿಸದ ಮೋಹನ್ ಭಾಗವತ್ ಗೆ ಯಾವ ಜನರು ಆಯ್ಕೆ ಮಾಡಿದ್ದಾರೆ? "ಜೀ" ಗಳನ್ನು ಚುನಾವಣಾ ಚಾಣಕ್ಯ ಎಂದು "ಹುಜೂರು" ಎನ್ನುವ ಬಿಜೆಪಿ ಪಕ್ಷ ಕರ್ನಾಟಕದಲ್ಲಿ ಎಂದೂ ಸ್ವಂತ ಬಲದಲ್ಲಿ ಅಧಿಕಾರಕ್ಕೆ ಬಂದಿಲ್ಲ, ಬರುವುದೂ ಇಲ್ಲ ಎಂದು ಹೇಳಿದ್ದಾರೆ.
ಬಿಜೆಪಿಯ ಪಾಕಿಸ್ತಾನದ ಮೇಲಿನ ಪ್ರೀತಿಯಂತೂ ನಿನ್ನೆ ಮೊನ್ನೆಯದ್ದಲ್ಲ, ಅದಕ್ಕೆ ಬಹುದೊಡ್ಡ ಇತಿಹಾಸವೇ ಇದೆ. ದ್ವಿ ರಾಷ್ಟ್ರ ಸಿದ್ದಾಂತದ ಪ್ರತಿಪಾದಿಸಿದ ಸಾವರ್ಕರ್ ಇಂದ ಹಿಡಿದು ಇಂದಿನ ರಸಬಾಳೆ, ಹೊಸಬಾಳೆಯ "ಪಾಕಿಸ್ತಾನದೊಂದಿಗೆ ಮಾತುಕತೆಯ ಬಾಗಿಲು ಮುಚ್ಚಬಾರದು" ಎನ್ನುವವರೆಗೂ ಮುಂದುವರೆಯುತ್ತಲೇ ಇದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹೌದು ಆರೆಸ್ಸೆಸ್ ಮತ್ತು ಬಿಜೆಪಿ ಪ್ರತಿಪಾದಿಸುವ ನಕಲಿ ಹಿಂದುತ್ವವನ್ನು ವಿರೋಧಿಸುತ್ತಲೇ ಇದ್ದೇನೆ, ವಿರೋಧಿಸುತ್ತಲೇ ಇರುತ್ತೇನೆ. ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ ಎಂದು ಅವರು ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲಿ ಪೇಮೆಂಟ್ ಕೊಟ್ಟು ಅಧ್ಯಕ್ಷರಾಗುವುದು ರೂಢಿಯೂ ಇಲ್ಲ, ಕೊಲೆ ಕೇಸಿನಲ್ಲಿ ಗಡಿಪಾರಾದವರು, ಪೋಕ್ಸೋ ಆರೋಪಿಗಳು, ಕ್ರಿಮಿನಲ್ಸ್ ಹಾಗೂ ಜೈಲುವಾಸಿಗಳನ್ನು ಅಧ್ಯಕ್ಷರನ್ನಾಗಿ ಮಾಡುವ ಕೆಟ್ಟ ಪರಂಪರೆಯೂ ಇಲ್ಲ.
— Hariprasad.B.K. (@HariprasadBK2) June 6, 2026
ಪಂಚಾಯ್ತಿ ಚುನಾವಣೆಯಲ್ಲೂ ಸ್ಪರ್ದಸದೇ ಇದ್ದ @narendramodiಯನ್ನು ಗುಜರಾತಿನಲ್ಲಿ ಮುಖ್ಯಮಂತ್ರಿ ಮಾಡಿದವರು ಯಾರು?…






