Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಪ್ರಹ್ಲಾದ್ ಜೋಶಿ, ಕುಮಾರಸ್ವಾಮಿಯವರನ್ನು...

ಪ್ರಹ್ಲಾದ್ ಜೋಶಿ, ಕುಮಾರಸ್ವಾಮಿಯವರನ್ನು ಹರಕೆ ಕುರಿ ಮಾಡುತ್ತಿದ್ದಾರೆ : ಬಿ.ಕೆ.ಹರಿಪ್ರಸಾದ್

ವಾರ್ತಾಭಾರತಿವಾರ್ತಾಭಾರತಿ6 July 2026 8:15 PM IST
share
ಪ್ರಹ್ಲಾದ್ ಜೋಶಿ, ಕುಮಾರಸ್ವಾಮಿಯವರನ್ನು ಹರಕೆ ಕುರಿ ಮಾಡುತ್ತಿದ್ದಾರೆ : ಬಿ.ಕೆ.ಹರಿಪ್ರಸಾದ್
"ನಾವು ಎಂದಿಗೂ ಅಕ್ರಮವಾಗಿ ಚುನಾವಣೆ ಗೆಲ್ಲುವ, ಸರಕಾರ ರಚಿಸುವ ಪ್ರಯತ್ನ ಮಾಡಿಲ್ಲ"

ಬೆಂಗಳೂರು : ಬಿಜೆಪಿ ಪಕ್ಷಕ್ಕಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರೆಸ್ಸೆಸ್)ದವರು ಸತ್ತವರ ಪರವಾಗಿಯೂ ಮತ ಚಲಾಯಿಸಿದ್ದು, ಇದನ್ನು ನಾವು ಸಾಕಷ್ಟು ಬಾರಿ ನೋಡಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ.

ಸೋಮವಾರ ನಗರದ ಕ್ವೀನ್ಸ್‍ರಸ್ತೆಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಮನಗರದ ಮಸೀದಿಯಲ್ಲಿ ಕಾಂಗ್ರೆಸ್ ನಾಯಕರ ಮನೆಯಲ್ಲಿ ಗಣತಿ ನಮೂನೆ ತುಂಬಲಾಗುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಈ ಪ್ರಕ್ರಿಯೆಯಲ್ಲಿ ಲೋಪದೋಷವಾದರೆ ಅದನ್ನು ಚುನಾವಣಾ ಆಯೋಗ ನೋಡುತ್ತದೆ. ಆದರೆ, ಬಿಜೆಪಿ ಪರವಾಗಿ ಆರೆಸ್ಸೆಸ್‍ನವರು ಸತ್ತವರ ಪರವಾಗಿ ಮತ ಹಾಕಿರುವುದನ್ನು ನಾವು ಸಾಕಷ್ಟು ಬಾರಿ ನೋಡಿದ್ದೇವೆ. ಇದರಲ್ಲಿ ಬಿಜೆಪಿಯವರು ಡಾಕ್ಟರೇಟ್ ಮಾಡಿದ್ದಾರೆ ಎಂದು ಟೀಕಿಸಿದರು.

ನಾವು ಎಂದಿಗೂ ಅಕ್ರಮವಾಗಿ ಚುನಾವಣೆ ಗೆಲ್ಲುವ, ಸರಕಾರ ರಚಿಸುವ ಪ್ರಯತ್ನ ಮಾಡಿಲ್ಲ. ರಾಮನಗರದಲ್ಲಿ ಉಪಚುನಾವಣೆಯಲ್ಲಿ ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಅವರು 1ಲಕ್ಷ ಮತಗಳ ಅಂತರದಲ್ಲಿ ಗೆದ್ದಾಗ ರಾಮನಗರದಲ್ಲಿ ಬಾಂಗ್ಲಾದೇಶದವರು ಇರಲಿಲ್ಲವೇ? ಎಂದು ಪ್ರಶ್ನಿಸಿದ ಅವರು, ಮಹಾನ್ ನಾಯಕ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕುಮಾರಸ್ವಾಮಿಯವರನ್ನು ಹರಕೆ ಕುರಿ ಮಾಡುತ್ತಿದ್ದಾರೆ. ಇಡೀ ದೇಶದಲ್ಲಿ ಶಿವಸೇನಾ, ಅಕಾಲಿ ದಳ, ಟಿಎಂಸಿ, ಜೆಡಿಯು ಸೇರಿದಂತೆ ಎಲ್ಲ ಪಕ್ಷಗಳನ್ನು ವಿಭಜಿಸಿ ಬೇಳೆ ಬೇಯಿಸಿಕೊಂಡಿರುವ ಬಿಜೆಪಿ ಈಗ ಕರ್ನಾಟಕದಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದೆ. ಪ್ರಹ್ಲಾದ್ ಜೋಶಿ ಅವರ ಪಕ್ಷ, ಕಾಂಗ್ರೆಸ್ ಪಕ್ಷವನ್ನು ನೇರವಾಗಿ ಎದುರಿಸಲು ಸಾಧ್ಯವಿಲ್ಲ. ಅದಕ್ಕಾಗಿ ಕುಮಾರಸ್ವಾಮಿ ಬೆಂಬಲ ಪಡೆದು ದಾಳವಾಗಿ ಬಳಸಿಕೊಳ್ಳುತ್ತಿದ್ದಾರೆ. ಕುಮಾರಸ್ವಾಮಿ ಅವರು ಯಾಕೆ ಅವರ ದಾಳವಾಗಿದ್ದಾರೆ ಎಂಬುದು ತಿಳಿಯುತ್ತಿಲ್ಲ ಎಂದರು.

ಕೊಳಗೇರಿ ಪ್ರದೇಶಕ್ಕೆ ಹೋಗಲು ಸಾಧ್ಯವಿಲ್ಲ ಎಂದು ಬಿಎಲ್‍ಒಗಳು ಹೇಳಿದ ಹಿನ್ನೆಲೆಯಲ್ಲಿ ಕಾನೂನುಬದ್ಧವಾಗಿ ಸಮುದಾಯ ಭವನ, ಮಸೀದಿ, ದೇವಾಲಯಗಳಲ್ಲಿ ಗಣತಿ ನಮೂನೆ ತುಂಬಲಾಗುತ್ತಿದೆ. ಈ ಅರ್ಜಿ ತುಂಬಿದ ಬಳಿಕ ಪ್ರಕ್ರಿಯೆಯೂ ಸವಾಲಿನದ್ದಾಗಿದೆ. ಅನಕ್ಷರಸ್ಥರು, ಬಡವರು ಇದನ್ನು ಮಾಡಲು ಹೇಗೆ ಸಾಧ್ಯ? ಹೀಗಾಗಿ ಈ ಪ್ರಕ್ರಿಯೆ ಸುಗಮವಾಗಲಿ ಎಂದು ಈ ರೀತಿ ಮಾಡಲಾಗಿದೆ. ಎರಡು ಮೂರು ಕಡೆ ಮತದಾನದ ಮಾಡುವ ಅವಕಾಶವಿರುವವರು, ನಕಲಿ ಮತದಾರರನ್ನು, ಮೃತಪಟ್ಟಿರುವವರನ್ನು ಕಿತ್ತೊಗೆಯಿರಿ ಎಂದು ನಾವು ಆಗ್ರಹಿಸುತ್ತೇವೆ. ನಮ್ಮ ಕಾಳಜಿ ಇರುವುದು ನೈಜ ಮತದಾರರು ಮತದಾನದ ಹಕ್ಕು ಕಳೆದುಕೊಳ್ಳುವಂತಾಗಬಾರದು ಎಂದು ಅವರು ಹೇಳಿದರು.

ಈ ದೇಶದಲ್ಲಿ ನೆಲೆಸಿರುವವರೆಲ್ಲರೂ ಭಾರತೀಯರು ಎಂದು ಕೇಂದ್ರ ಸಚಿವ ನಿತೀನ್ ಗಡ್ಕರಿ ಅವರೇ ಹೇಳಿದ್ದಾರೆ. ಅವರಿಂದ ಸ್ವಲ್ಪವಾದರೂ ಬುದ್ಧಿ ಕಲಿಯಲಿ ಎಂದು ನಾನು ಪ್ರಹ್ಲಾದ್ ಜೋಷಿ ಅವರಿಗೆ ಹೇಳುವೆ. ಬಿಜೆಪಿಯಲ್ಲಿ ಈ ದ್ವಂದ್ವ ನೀತಿ ಯಾಕೆ? ಎಂದು ಪ್ರಶ್ನಿಸಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್ ಮಾತನಾಡಿ, ಕಳೆದ 1 ವರ್ಷದಿಂದ ಇಡೀ ರಾಜ್ಯಾದ್ಯಂತ ಬಿಎಲ್‍ಎಗಳನ್ನು ನೇಮಕ ಮಾಡಲಾಯಿತು. ಸುಮಾರು 54 ಸಾವಿರ ಬಿಎಲ್‍ಎಗಳ ಪಟ್ಟಿಯನ್ನು ಚುನಾವಣಾ ಆಯೋಗಕ್ಕೆ ನೀಡಲಾಯಿತು. ಬಿಜೆಪಿ ನಮ್ಮ ಅರ್ಧದಷ್ಟು ಮಾಡಿದ್ದರೆ, ಜೆಡಿಎಸ್‍ನವರು ಅತ್ಯಂತ ಕಡಿಮೆ ಮಾಡಿದ್ದಾರೆ. ಎಸ್‍ಐಆರ್ ಅನ್ನು ಏಕೆ ಮಾಡುತ್ತಿದ್ದಾರೆ ಎನ್ನುವುದು ಗೊತ್ತಿದ್ದ ಕಾರಣಕ್ಕೆ ನಾವು ಮುನ್ನೆಚ್ಚರಿಕೆ ಕ್ರಮವಾಗಿ ಇದನ್ನು ಮಾಡಿದ್ದೇವೆ ಎಂದರು.

13 ರಾಜ್ಯಗಳಲ್ಲಿ 6 ಕೋಟಿ ಮತದಾರರ ಹೆಸರನ್ನು ಎಸ್‍ಐಆರ್ ನಡೆಸಿ ಕಿತ್ತುಹಾಕಲಾಗಿದೆ. ಅಂದರೆ ಶೇ.14ರಿಂದ 15ರಷ್ಟು ಮತದಾರರನ್ನು ತೆಗೆದುಹಾಕಲಾಗಿದೆ. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ಬಡಮೇಲು ಮಾಡಲು ಈ ಹುನ್ನಾರ ಮಾಡಲಾಗಿದೆ. ಯಾವುದೇ ಪಕ್ಷದ ಅಭ್ಯರ್ಥಿಯ ಗೆಲುವಿನ ಅಂತರ ಶೇ.3ರಿಂದ4ರಷ್ಟು ಮಾತ್ರ ರಲ್ಲಿ ಇರುತ್ತದೆ. ಇಷ್ಟು ಮತದಾರರನ್ನು ಕಿತ್ತು ಹಾಕಿದ್ದರ ಹಿಂದೆ ರಾಜಕೀಯವಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.

ಮಾಜಿ ಸಭಾಪತಿ ವಿ.ಆರ್.ಸುದರ್ಶನ್ ಮಾತನಾಡಿ, ನಾವು ನಮ್ಮ ಪಕ್ಷದ ಬಿಎಲ್‍ಎಗಳಿಗೆ ಮನೆ-ಮನೆಗೆ ತೆರಳಿ ಎಂದು ಸೂಚನೆ ನೀಡಿದ್ದೇವೆ. ಏಕೆಂದರೆ ಅಲ್ಲಿ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆ ಆದರೂ ಅದನ್ನು ನಿವಾರಿಸಬಹುದು ಎಂದು ಈ ರೀತಿಯ ಸೂಚನೆ ನೀಡಿದ್ದೇವೆ. ಆದರೆ, ಬಿಎಲ್‍ಒಗಳಿಗೆ ಸೂಚನೆ ನೀಡಲು ನಾವು ಯಾರು? ಅವರು ಚುನಾಚಣಾ ಆಯೋಗದ ಮಾತು ಕೇಳುತ್ತಾರೆ. ಇನ್ನೊಂದೆಡೆ ರಾಜ್ಯದ ವಿಪಕ್ಷಗಳು ಜವಾಬ್ದಾರಿಯುತವಾಗಿ ನಡೆದುಕೊಳ್ಳುತ್ತಿಲ್ಲ. ಅವರ ಪಕ್ಷದ ಕಾರ್ಯಕರ್ತರಿಗೆ ಸರಿಯಾಗಿ ಸೂಚನೆ ನೀಡದೆ ಇಲ್ಲಿ ಗೊಂದಲ ಮೂಡಿಸುತ್ತಿದ್ದಾರೆ ಎಂದು ಹೇಳಿದರು.

Tags

BK Hariprasad
share
ವಾರ್ತಾಭಾರತಿ
ವಾರ್ತಾಭಾರತಿ
Next Story
X