Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಶಾಲಾ-ಕಾಲೇಜುಗಳಲ್ಲಿ ಹರಡುತ್ತಿರುವ...

ಶಾಲಾ-ಕಾಲೇಜುಗಳಲ್ಲಿ ಹರಡುತ್ತಿರುವ ದ್ವೇಷವನ್ನು ಹತ್ತಿಕ್ಕಲು ಶಿಕ್ಷಕರು ಮುಂದಾಗಬೇಕು : ಬಿ.ಕೆ.ಹರಿಪ್ರಸಾದ್

ವಾರ್ತಾಭಾರತಿವಾರ್ತಾಭಾರತಿ5 Sept 2026 8:27 PM IST
share
ಶಾಲಾ-ಕಾಲೇಜುಗಳಲ್ಲಿ ಹರಡುತ್ತಿರುವ ದ್ವೇಷವನ್ನು ಹತ್ತಿಕ್ಕಲು ಶಿಕ್ಷಕರು ಮುಂದಾಗಬೇಕು : ಬಿ.ಕೆ.ಹರಿಪ್ರಸಾದ್


ಬೆಂಗಳೂರು : ‘ಶಾಲಾ-ಕಾಲೇಜುಗಳಲ್ಲಿ ಧರ್ಮ, ಜಾತಿಯ ಹೆಸರಲ್ಲಿ ಹರಡುತ್ತಿರುವ ದ್ವೇಷವನ್ನು ಹತ್ತಿಕ್ಕಲು ಶಿಕ್ಷಕರು ಸಂವಿಧಾನದ ಆಶಯಗಳಿಗೆ ಬದ್ಧರಾಗಿ ನಡೆಯುಬೇಕು. ಭಾರತ ಎಂದರೆ ಬಹುತ್ವದ ಆತ್ಮ, ಸಂವಿಧಾನದಲ್ಲೂ ಬಹುತ್ವದ ಆತ್ಮ ಇದೆ’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಹೇಳಿದರು.

ಶನಿವಾರ ನಗರದ ಕ್ವೀನ್ಸ್‌ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಶಿಕ್ಷಕರ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಜಾತಿ, ಭಾಷೆ, ಧರ್ಮ ಇವೆಲ್ಲವನ್ನೂ ಮೀರಿ ಶಿಕ್ಷಕರು ಮಕ್ಕಳ ಒಳ್ಳೆಯ ಭವಿಷ್ಯಕಾಗಿ ಕೆಲಸ ಮಾಡಿದರೆ ಮಾತ್ರ ನಮ್ಮ ದೇಶ ಅಷ್ಟೇ ಅಲ್ಲ, ಈ ಪ್ರಪಂಚ ಹಾಗೂ ಸಮಾಜವು ಉದ್ಧಾರ ಆಗುತ್ತದೆ ಎಂದು ಹೇಳಿದರು.

ಸಾಕ್ಷರತೆಗೂ, ವಿದ್ಯಾವಂತರಿಗೂ ಬಹಳ ವ್ಯತ್ಯಾಸ ಇದೆ. ವಿದ್ಯಾವಂತರಾಗಬೇಕಾದರೆ ಸಾಕ್ಷರತೆ ಇರಲೇಬೇಕು ಅಂತೇನಿಲ್ಲ. ಈಗ ಸಾಕ್ಷರತೆ ಅನ್ನೋದು ಏನಾಗಿದೆ ಎಂದರೆ ಕೆಲವರು ಪದವಿ ಓದಿರುತ್ತಾರೆ. ಅವರನ್ನು ನೋಡಿದರೆ ಅಂಧ ಭಕ್ತರಾಗಿರುತ್ತಾರೆ. ಅವರಿಗೆ ನೀವು ಶಿಕ್ಷಿತರು ಅಂತ ಹೇಳಕ್ಕಾಗಲ್ಲ, ಅಶಿಕ್ಷಿತರು ಅಂತ ಹೇಳಬೇಕು ಎಂದು ಹರಿಪ್ರಸಾದ್ ಟೀಕಿಸಿದರು.

ಜವಾಹರ್‌ ಲಾಲ್ ನೆಹರು ಕೇಂಬ್ರಿಡ್ಜ್, ಆಕ್ಸ್‌ ಫರ್ಡ್ ನಂತಹ ಪ್ರತಿಷ್ಠಿತ ವಿವಿಯಲ್ಲಿ ವಿದ್ಯಾಭ್ಯಾಸ ಮಾಡಿದರು, ಮೌಲಾನಾ ಅಬುಲ್ ಕಲಾಂ ಆಝಾದ್, ಸರ್ವಪಲ್ಲಿ ರಾಧಾಕೃಷ್ಣನ್, ನಮ್ಮ ಬಳ್ಳಾರಿಯ ಕೆ.ಆರ್.ವಿ.ರಾವ್ ಶಿಕ್ಷಣ ಸಚಿವರಾಗಿದ್ದರು. ಈಗ ನಾಲ್ಕನೆ ತರಗತಿ ಪಾಸ್ ಮಾಡದೆ ಇರೋನು ‘ಪರೀಕ್ಷಾ ಪೆ ಚರ್ಚಾ’ ಅಂತ ಭಾಷಣ ಮಾಡುತ್ತಾನೆ. ನಕಲಿ ಪ್ರಮಾಣಪತ್ರ ತೋರಿಸಿ ನಾನು ಪದವೀಧರ ಎಂದು ಹೇಳುತ್ತಾನೆ ಎಂದು ಹರಿಪ್ರಸಾದ್ ವ್ಯಂಗ್ಯವಾಡಿದರು.

ಪ್ರಧಾನಮಂತ್ರಿಗೆ ಟೆಲಿಪ್ರಾಂಪ್ಟರ್ ಇಲ್ಲದೆ ಭಾಷಣ ಮಾಡಲು ಆಗೋದಿಲ್ಲ. ಸ್ಮತಿ ಇರಾನಿ ಎಸೆಸೆಲ್ಸಿ ಪಾಸ್ ಮಾಡಿಲ್ಲ, ಇಂತಹವರನ್ನು ದೇಶದ ಶಿಕ್ಷಣ ಸಚಿವರನ್ನಾಗಿ ಮಾಡಿದರೆ, ಶಿಕ್ಷಣ ವ್ಯವಸ್ಥೆ ಏನಾಗಬೇಕು ಎಂದು ಯೋಚನೆ ಮಾಡಿ ಎಂದು ಹರಿಪ್ರಸಾದ್ ಹೇಳಿದರು.

‘ಶಿಕ್ಷಕರ ದಿನಾಚರಣೆಯಂದೆ ಪತ್ರಕರ್ತೆ ಗೌರಿ ಲಂಕೇಶ್ ಕೊಲೆಯಾಗಿದ್ದು, ಇದನ್ನು ನೆನಪಿಸಿಕೊಂಡಾಗಲೆಲ್ಲ ಬಹಳ ದುಃಖವಾಗುತ್ತದೆ. ಆಕೆ ನಮ್ಮ ಮೇಷ್ಟ್ರು ಮಗಳು. ನಮ್ಮ ರಾಜ್ಯ ಸರ್ವಜನಾಂಗದ ಶಾಂತಿಯ ತೋಟ ಆಗಬೇಕು ಎಂಬ ಕಾಳಜಿಯಿಂದ ಹಿಂದೂ, ಮುಸ್ಲಿಂ, ಕ್ರೈಸ್ತ ಸೇರಿದಂತೆ ಸರ್ವ ಜನಾಂಗಗಳ ಪರವಾಗಿ ಹೋರಾಟ ಮಾಡಿದ್ದಕ್ಕಾಗಿ ಆಕೆಯ ಕೊಲೆಯಾಯಿತು’

-ಬಿ.ಕೆ.ಹರಿಪ್ರಸಾದ್, ಕೆಪಿಸಿಸಿ ಅಧ್ಯಕ್ಷ


Tags

BK Hariprasad
share
ವಾರ್ತಾಭಾರತಿ
ವಾರ್ತಾಭಾರತಿ
Next Story
X