ಶೀಘ್ರದಲ್ಲೇ ನಿಗಮ-ಮಂಡಳಿ ನೂತನ ಅಧ್ಯಕ್ಷರ ನೇಮಕಾತಿ ಪಟ್ಟಿ ಪ್ರಕಟ : ಬಿ.ಕೆ.ಹರಿಪ್ರಸಾದ್

ಬೆಂಗಳೂರು : ವಿಧಾನ ಪರಿಷತ್ ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರಗಳ ಚುನಾವಣಾ ನೀತಿ ಸಂಹಿತೆ ಮುಕ್ತಾಯದ ಬಳಿಕವೇ ನಿಗಮ ಮಂಡಳಿ ನೂತನ ಅಧ್ಯಕ್ಷರ ನೇಮಕಾತಿ ಪಟ್ಟಿ ಪ್ರಕಟವಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ತಿಳಿಸಿದ್ದಾರೆ.
ಶುಕ್ರವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಚುನಾವಣೆ ಬಳಿಕ ಯಾವುದೇ ಕ್ಷಣದಲ್ಲಿಯಾದರೂ ನಿಗಮ ಮಂಡಳಿ ನೇಮಕ ಪಟ್ಟಿ ಪ್ರಕಟವಾಗಬಹುದು. ಮೊದಲಿಗೆ ನಿರ್ದೇಶಕರು, ಸದಸ್ಯರ ನೇಮಕವಾಗುತ್ತದೆ. ಮುಂದಿನ ದಿನಗಳಲ್ಲಿ ಯಾರನ್ನು ಅಧ್ಯಕ್ಷರನ್ನಾಗಿ ಮಾಡುವುದು ಎಂದು ಗೊತ್ತಾಗಲಿದೆ ಎಂದರು.
ಪಕ್ಷದ ವರಿಷ್ಟರು ನಿಮಗ ಮಂಡಳಿ ಅಧ್ಯಕ್ಷ ಮತ್ತು ಸದಸ್ಯರ ಪಟ್ಟಿಯನ್ನು ಅಂತಿಮಗೊಳಿಸಿದ್ದು, ಈ ವೇಳೆಗೆ ಪಟ್ಟಿ ಬಿಡುಗಡೆ ಆಗಬೇಕಿತ್ತು. ಆದರೆ, ಚುನಾವಣೆ ನೀತಿ ಸಂಹಿತೆ ಜಾರಿ ಇರುವುದರಿಂದ ವಿಳಂಬವಾಗಿದೆ. ಇನ್ನೂ ಕೆಲವೇ ದಿನಗಳಲ್ಲಿ ನಿಗಮ ಮಂಡಳಿ ಪಟ್ಟಿ ಪ್ರಕಟವಾಗಲಿದೆ ಎಂದು ಅವರು ಭರವಸೆ ವ್ಯಕ್ತಪಡಿಸಿದರು.
Next Story




