Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕೆಪಿಸಿಸಿ ನೂತನ ಅಧ್ಯಕ್ಷರಾಗಿ...

ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ.ಕೆ.ಹರಿಪ್ರಸಾದ್ ನೇಮಕ

ವಾರ್ತಾಭಾರತಿವಾರ್ತಾಭಾರತಿ3 Jun 2026 8:38 PM IST
share
ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ.ಕೆ.ಹರಿಪ್ರಸಾದ್ ನೇಮಕ

ಹೊಸದಿಲ್ಲಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ನೂತನ ಅಧ್ಯಕ್ಷರಾಗಿ ಹಿರಿಯ ನಾಯಕ, ವಿಧಾನ ಪರಿಷತ್‌ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ.

ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ರಾಷ್ಟ್ರೀಯ ಅಧ್ಯಕ್ಷರು ಈ ಆದೇಶ ಹೊರಡಿಸಿದ್ದು, ಇದು ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿರಿಯ ರಾಜಕಾರಣಿ ಬಿ.ಕೆ.ಹರಿಪ್ರಸಾದ್‌ಗೆ ಕರ್ನಾಟಕ ಕಾಂಗ್ರೆಸ್ ನ ಚುಕ್ಕಾಣಿ :

ರಾಜಿಯಿಲ್ಲದ ತೀಕ್ಷ್ಣ ಮಾತುಗಳ ಮೂಲಕ ಜಾತ್ಯತೀತ ನಿಲುವಿನ ಫೈರ್ ಬ್ರಾಂಡ್ ರಾಜಕಾರಣಿಯೆಂದೇ ಗುರುತಿಸಿಕೊಂಡಿರುವ ಬಿ.ಕೆ.ಹರಿಪ್ರಸಾದ್, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ

71ರ ಹರೆಯದ ಬಿ.ಕೆ.ಹರಿಪ್ರಸಾದ್ ಹುಟ್ಟಿದ್ದು ಬೆಂಗಳೂರಿನಲ್ಲಿ. ತಂದೆ ಕೆಂಪಯ್ಯ ತಾಯಿ ಕೆ.ಗುಣವತಿ, ಬೆಂಗಳೂರಿನ ಎಂ.ಇ.ಎಸ್ ಕಾಲೇಜಿನಲ್ಲಿ ಬಿ.ಕಾಂ ಪದವಿ ಪಡೆದಿರುವ ಅವರು, ವಿದ್ಯಾರ್ಥಿ ದೆಸೆಯಿಂದಲೇ ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿ ಗುರುತಿಸಿಕೊಂಡವರು.

ರಾಜ್ಯಸಭಾ ಸದಸ್ಯರಾಗಿ ನಾಲ್ಕು ಬಾರಿ 1990, 2004, 2013, ಮತ್ತು 2014ರ ಉಪಚುನಾವಣೆಯಲ್ಲಿ ಆಯ್ಕೆಯಾದವರು. ಸಂಸತ್ತಿನ ಮೇಲ್ಮನೆಯ ಸದಸ್ಯರಾಗಿ ದಿಲ್ಲಿಯ ರಾಜಕಾರಣದಲ್ಲಿ ಬಹಳ ಸಕ್ರಿಯರಾಗಿದ್ದರು. ರಾಜ್ಯಸಭೆಯ ಉಪಸಭಾಪತಿ ಸ್ಥಾನಕ್ಕೆ ವಿಪಕ್ಷ ಅಭ್ಯರ್ಥಿಯೂ ಆಗಿದ್ದರು. ಸಂಸತ್ತಿನಲ್ಲಿ ತಮ್ಮ ಭಾಷಣಗಳ ಮೂಲಕವೂ ಅವರು ಗಮನ ಸೆಳೆದಿದ್ದರು.

ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ದೀರ್ಘಕಾಲ ಸೇವೆ ಸಲ್ಲಿಸಿದರು. ಗೋವಾ, ಹರಿಯಾಣ, ಒಡಿಶಾ ಸೇರಿದಂತೆ ದೇಶದ ಹಲವು ರಾಜ್ಯಗಳ ಕಾಂಗ್ರೆಸ್ ಉಸ್ತುವಾರಿಯಾಗಿ ಪಕ್ಷವನ್ನು ಸಂಘಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಆಗ ಆ ರಾಜ್ಯಗಳ ಸಿಎಂಗಳು, ಸಚಿವರನ್ನು ಆಯ್ಕೆ ಮಾಡುವಷ್ಟು ಪ್ರಭಾವಶಾಲಿಯಾಗಿದ್ದ ಹರಿಪ್ರಸಾದ್ ಅವರು ಈಗ ತವರು ರಾಜ್ಯ ಕರ್ನಾಟಕದ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿದ್ದಾರೆ

ದಿಲ್ಲಿಯಿಂದ ರಾಜ್ಯ ರಾಜಕಾರಣಕ್ಕೆ ಮರಳಿದ ಅವರು 2020, ಜುಲೈ 1ರಿಂದ ಕರ್ನಾಟಕ ವಿಧಾನ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರ ಶಾಸಕತ್ವದ ಅವಧಿ 2026 ಜೂನ್ 30ರ ತನಕ ಇದೆ. ಜನವರಿ 2022 ರಿಂದ ಮೇ 2023 ರವರೆಗೆ ಕರ್ನಾಟಕ ವಿಧಾನ ಪರಿಷತ್ತಿನ ವಿಪಕ್ಷ ನಾಯಕರಾಗಿ ಜವಾಬ್ದಾರಿ ನಿರ್ವಹಿಸಿದ್ದರು. ಈಗ ಈ ತಿಂಗಳು ನಡೆಯುವ ವಿಧಾನ ಪರಿಷತ್ ಚುನಾವಣೆಯಲ್ಲಿ ಅವರು ಪಕ್ಷದ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ.

Tags

B.K.HariprasaKPCC President
share
ವಾರ್ತಾಭಾರತಿ
ವಾರ್ತಾಭಾರತಿ
Next Story
X