Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕೆಪಿಸಿಸಿ ಅಧ್ಯಕ್ಷರಾಗಿ ನೇಮಕ :...

ಕೆಪಿಸಿಸಿ ಅಧ್ಯಕ್ಷರಾಗಿ ನೇಮಕ : ಕಾಂಗ್ರೆಸ್ ಹೈಕಮಾಂಡ್‌ಗೆ ಕೃತಜ್ಞತೆ ಸಲ್ಲಿಸಿದ ಬಿ.ಕೆ.ಹರಿಪ್ರಸಾದ್

ವಾರ್ತಾಭಾರತಿವಾರ್ತಾಭಾರತಿ4 Jun 2026 10:47 AM IST
share
ಕೆಪಿಸಿಸಿ ಅಧ್ಯಕ್ಷರಾಗಿ ನೇಮಕ : ಕಾಂಗ್ರೆಸ್ ಹೈಕಮಾಂಡ್‌ಗೆ ಕೃತಜ್ಞತೆ ಸಲ್ಲಿಸಿದ ಬಿ.ಕೆ.ಹರಿಪ್ರಸಾದ್
"ಅಧಿಕಾರಕ್ಕಿಂತ ಸಿದ್ಧಾಂತ ದೊಡ್ಡದು, ಹುದ್ದೆಗಿಂತ ಜನರ ಹಿತ ಮುಖ್ಯ"

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರಾಗಿ ನೇಮಕಗೊಂಡ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ಗೆ ಬಿ.ಕೆ.ಹರಿಪ್ರಸಾದ್ ಕೃತಜ್ಞತೆ ಸಲ್ಲಿಸಿದ್ದಾರೆ.

ಈ ಕುರಿತು ಸಮಾಜಿಕ ಜಾಲತಾಣ ʼಎಕ್ಸ್‌ʼ ನಲ್ಲಿ ಪೋಸ್ಟ್‌ ಮಾಡಿರುವ ಅವರು, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ನನ್ನನ್ನು ನೇಮಿಸಿದ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ನನ್ನ ಮೇಲೆ ಪ್ರೀತಿ ವಿಶ್ವಾಸ ನಂಬಿಕೆ ಇರಿಸಿ ಜವಾಬ್ದಾರಿ ವಹಿಸಿದ ನನ್ನ ಅಚ್ಚುಮೆಚ್ಚಿನ ನಾಯಕಿ ಸೋನಿಯಾ ಗಾಂಧಿ, ವಿರೋಧ ಪಕ್ಷದ ನಾಯಕರಾದ ರಾಹುಲ್‌ ಗಾಂಧಿ, ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌, ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ್‌ ಗಾಂಧಿ ಹಾಗೂ ಕೆಪಿಸಿಸಿ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರಿಗೆ ಧನ್ಯವಾದ ಹೇಳಲು ಬಯಸುತ್ತೇನೆ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ನ ಕೇಂದ್ರ ನಾಯಕತ್ವದ ಈ ನಿರ್ಧಾರವು ಕೇವಲ ಒಬ್ಬ ವ್ಯಕ್ತಿಗೆ ನೀಡಿರುವ ಹುದ್ದೆಯಲ್ಲ. ಇದು ಕಾಂಗ್ರೆಸ್ ಪಕ್ಷದ ಮೂಲ ಸಿದ್ಧಾಂತಗಳಾದ ಸಾಮಾಜಿಕ ನ್ಯಾಯ, ಜಾತ್ಯತೀಯತೆ, ಪ್ರಜಾಪ್ರಭುತ್ವ, ಸಂವಿಧಾನವಾದ ಮತ್ತು ದುರ್ಬಲ ವರ್ಗಗಳ ಸಬಲೀಕರಣದ ಪರವಾಗಿ ನೀಡಿರುವ ಸ್ಪಷ್ಟ ಸಂದೇಶವಾಗಿದೆ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದ್ದಾರೆ.

ದೀರ್ಘಕಾಲದಿಂದ ಪಕ್ಷದ ವಿವಿಧ ಹಂತಗಳಲ್ಲಿ ಸೇವೆ ಸಲ್ಲಿಸಿರುವ ನಾನು ಯಾವುದೇ ಅಧಿಕಾರದ ಹುದ್ದೆಗಳಿಗಾಗಿ ರಾಜಕೀಯ ಮಾಡದೇ, ನನ್ನ ಜೀವನ ಪೂರ್ತಿ ಕಾಂಗ್ರೆಸ್ ತತ್ವಗಳ ಜಾರಿಗೆ ಮೀಸಲಿಟ್ಟಿದ್ದೇನೆ. ಅಧಿಕಾರಕ್ಕಿಂತ ಸಿದ್ಧಾಂತ ದೊಡ್ಡದು, ಹುದ್ದೆಗಿಂತ ಜನರ ಹಿತ ಮುಖ್ಯ ಎಂಬ ನಿಲುವಿನಂತೆ ನಾನು ರಾಜಕೀಯ ಬದುಕನ್ನು ಕಟ್ಟಿಕೊಂಡಿದ್ದೇನೆ. ಹಾಗಾಗಿ ಕೆಪಿಸಿಸಿ ಅಧ್ಯಕ್ಷ ಹುದ್ದೆ ಎಂಬ ಪಕ್ಷ ಕಟ್ಟುವ ಕಾಯಕವನ್ನು ಅತ್ಯಂತ ಸಂತೋಷದಿಂದ ಸ್ವೀಕರಿಸಿದ್ದೇನೆ ಎಂದು ತಿಳಿಸಿದ್ದಾರೆ.

ದೇಶದಲ್ಲಿ ದ್ವೇಷದ ರಾಜಕಾರಣ, ಧರ್ಮದ ಹೆಸರಿನ ಧ್ರುವೀಕರಣ ಮತ್ತು ಸಂವಿಧಾನ ವಿರೋಧಿ ಪ್ರವೃತ್ತಿಗಳು ಹೆಚ್ಚುತ್ತಿರುವ ಈ ಸಂದರ್ಭದಲ್ಲಿ, ಸಾಮಾಜಿಕ ಸಾಮರಸ್ಯ ಮತ್ತು ಜಾತ್ಯತೀತ ಮೌಲ್ಯಗಳನ್ನು ನಿರಂತರವಾಗಿ ಪ್ರತಿಪಾದಿಸುತ್ತಾ ಬಂದಿರುವ ನನಗೆ, ದೇಶದ ದುರಿತ ಕಾಲದಲ್ಲಿ ಕಾಂಗ್ರೆಸ್ ರಾಜ್ಯ ಘಟಕದ ನೇತೃತ್ವ ಸಿಕ್ಕಿರುವುದು ಹೊಸ ಜವಾಬ್ದಾರಿ, ಸವಾಲು ನೀಡಿದಂತಾಗಿದೆ‌. ಈ ಸವಾಲು ಮತ್ತು ಜವಾಬ್ದಾರಿಯನ್ನು ಪಕ್ಷದ ಸೈದ್ದಾಂತಿಕ ಕಾರ್ಯಕರ್ತರ ಬಲದಿಂದ ಯಶಸ್ವಿಯಾಗಿ ಪೂರೈಸುತ್ತೇನೆ ಎಂಬ ಅಚಲ ನಂಬಿಕೆ ನನಗಿದೆ‌ ಎಂದು ಹೇಳಿದ್ದಾರೆ.

ಹಿಂದುಳಿದ ವರ್ಗಗಳು, ದಲಿತರು, ಅಲ್ಪಸಂಖ್ಯಾತರು, ರೈತರು, ಕಾರ್ಮಿಕರು, ಮಹಿಳೆಯರು ಮತ್ತು ಯುವಜನರ ಆಶೋತ್ತರಗಳನ್ನು ನಾನು ಅರ್ಥಮಾಡಿಕೊಂಡಿದ್ದೇನೆ. ಹಾಗಾಗಿ ಈ ನಿಟ್ಟಿನಲ್ಲೇ ನಾನು ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತೆ ಬೂತ್ ಮಟ್ಟದಿಂದ ಸಂಘಟಿಸಿ, ಸೈದ್ಧಾಂತಿಕವಾಗಿ ಬಲಪಡಿಸೋಣ. ರಾಜ್ಯದಲ್ಲಿರುವ ಸಮರ್ಥ ಸೈದ್ದಾಂತಿಕ ನಾಯಕರು, ಕಾರ್ಯಕರ್ತರು ಈ ನಿಟ್ಟಿನಲ್ಲಿ ನನ್ನ ಕೈಜೋಡಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಸಾಮಾಜಿಕ ನ್ಯಾಯದ ಪರವಾಗಿ ಧ್ವನಿ ಎತ್ತುವವರು, ಕೋಮುವಾದದ ವಿರುದ್ಧ ಹೋರಾಡುವವರು, ಸಂವಿಧಾನವನ್ನು ರಕ್ಷಿಸುವ ಹೋರಾಟಗಾರರು ಮತ್ತು ಪ್ರಗತಿಪರ ಚಿಂತನೆ ಹೊಂದಿರುವ ಕೋಟ್ಯಾಂತರ ಕಾಂಗ್ರೆಸ್ಸೇತರ ಕಾರ್ಯಕರ್ತರೂ ನಮ್ಮ ದೇಶದ ಈ ದುರಿತ ಕಾಲದಲ್ಲಿ ನಮ್ಮೊಂದಿಗೆ ಕೈ ಜೋಡಿಸಬೇಕಿದೆ. ಕಾಂಗ್ರೆಸ್ಸಿಗರಾದ ನಾವೂ ಕೂಡಾ ಕಾಂಗ್ರೆಸ್ ಮತ್ತು ಕಾಂಗ್ರೆಸ್ಸೇತರ ಜಾತ್ಯಾತೀತ ಯುವ ಸಮುದಾಯವನ್ನು ಒಟ್ಟುಗೂಡಿಸಿಕೊಂಡು ಹೋಗಬೇಕಿದೆ ಎಂಬ ಅರಿವು ನನಗಿದೆ ಎಂದು ಹೇಳಿದ್ದಾರೆ.

ಸಂವಿಧಾನವೇ ನಮ್ಮ ದಾರಿ, ಸಾಮಾಜಿಕ ನ್ಯಾಯವೇ ನಮ್ಮ ಗುರಿ, ಜಾತ್ಯತೀಯತೆಯೇ ನಮ್ಮ ಶಕ್ತಿ ಎಂಬ ಕಾಂಗ್ರೆಸ್‌ನ ಮೂಲ ಸಂದೇಶವನ್ನು ಬಲಪಡಿಸುವ ಈ ನಿರ್ಧಾರದ ಜೊತೆ ಕಾಂಗ್ರೆಸ್ ಕಾರ್ಯಕರ್ತರು, ನಾಯಕರು, ಜಾತ್ಯಾತೀತ ಯುವ ಸಮುದಾಯ, ಕಾಂಗ್ರೆಸ್ಸೇತರ ಜಾತ್ಯಾತೀತ ಪಕ್ಷ, ಸಂಘಟನೆಗಳು ನನ್ನ ಜೊತೆ ಕೈ ಜೋಡಿಸುತ್ತದೆ ಎಂಬ ಭರವಸೆಯಲ್ಲಿ ಎಐಸಿಸಿ ನೀಡಿದ ಜವಾಬ್ದಾರಿಯನ್ನು ಒಪ್ಪಿ ನಿರ್ವಹಿಸುತ್ತೇನೆ ಎಂದು ತಿಳಿಸಿದ್ದಾರೆ.

Tags

high commandKPCCCongressB.K.Hariprasad
share
ವಾರ್ತಾಭಾರತಿ
ವಾರ್ತಾಭಾರತಿ
Next Story
X