Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬಿಎಂಆರ್‌ಸಿಎಲ್ ವೆಬ್‌ಸೈಟ್‌ನಲ್ಲಿ ದರ...

ಬಿಎಂಆರ್‌ಸಿಎಲ್ ವೆಬ್‌ಸೈಟ್‌ನಲ್ಲಿ ದರ ನಿಗದಿ ಸಮಿತಿ ವರದಿ ಪ್ರಕಟ; ಸಂಸದ ತೇಜಸ್ವಿ ಸೂರ್ಯ ಅರ್ಜಿ ಇತ್ಯರ್ಥ

ವಾರ್ತಾಭಾರತಿವಾರ್ತಾಭಾರತಿ20 Sept 2025 4:01 PM IST
share
ಬಿಎಂಆರ್‌ಸಿಎಲ್ ವೆಬ್‌ಸೈಟ್‌ನಲ್ಲಿ ದರ ನಿಗದಿ ಸಮಿತಿ ವರದಿ ಪ್ರಕಟ; ಸಂಸದ ತೇಜಸ್ವಿ ಸೂರ್ಯ ಅರ್ಜಿ ಇತ್ಯರ್ಥ

ಬೆಂಗಳೂರು : ಮೆಟ್ರೊ ರೈಲು ಪ್ರಯಾಣ ದರ ಪರಿಷ್ಕರಣೆ ಸಂಬಂಧ ಮದ್ರಾಸ್‌ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ತಾರಿಣಿ ಅವರ ನೇತೃತ್ವದ 'ಮೆಟ್ರೊ ರೈಲು ದರ ನಿಗದಿ ಸಮಿತಿ' ಸಲ್ಲಿಸಿರುವ ವರದಿಯನ್ನು ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತದ (ಬಿಎಂಆರ್‌ಸಿಎಲ್) ವೆಬ್‌ಸೈಟ್‌ನಲ್ಲಿ ಪ್ರಕಟಿಸಿರುವುದನ್ನು ಪರಿಗಣಿಸಿದ ಹೈಕೋರ್ಟ್, ಈ ಸಂಬಂಧ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಇತ್ಯರ್ಥಪಡಿಸಿದೆ.

ದರ ನಿಗದಿ ಸಮಿತಿ ಸಲ್ಲಿಸಿರುವ ವರದಿ ಬಹಿರಗಂಪಡಿಸಲು ಆದೇಶಿಸುವಂತೆ ಕೋರಿ ಸಂಸದ ತೇಜಸ್ವಿ ಸೂರ್ಯ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ಎಂ. ಶ್ಯಾಮ್ ಪ್ರಸಾದ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ವರದಿಯನ್ನು ಆನ್‌ಲೈನ್‌ನಲ್ಲಿ ಅಪ್‌ಲೋಡ್‌ ಮಾಡಿರುವುದರಿಂದ ಅರ್ಜಿಯು ಅಸ್ತಿತ್ವ ಕಳೆದುಕೊಂಡಿದೆ ಎಂದು ತಿಳಿಸಿ ಅದನ್ನು ವಿಲೇವಾರಿ ಮಾಡಿತು.

ವಿಚಾರಣೆ ವೇಳೆ ತೇಜಸ್ವಿ ಸೂರ್ಯ ಪರ ವಕೀಲ ಅನಿರುದ್ಧ್‌ ಕುಲಕರ್ಣಿ ಹಾಜರಾಗಿ, ದರ ನಿಗದಿ ಸಮಿತಿಯ ವರದಿಯನ್ನು ಸೆಪ್ಟೆಂಬರ್ 11ರಂದು ಬಿಎಂಆರ್‌ಸಿಎಲ್‌ ಆನ್‌ಲೈನ್‌ನಲ್ಲಿ ಅಪ್‌ಲೋಡ್‌ ಮಾಡಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು. ಇದನ್ನು ಪರಿಗಣಿಸಿದ ನ್ಯಾಯಪೀಠ, ಅರ್ಜಿ ಇತ್ಯರ್ಥಪಡಿಸಿತು.

ದರ ಏರಿಕೆ ಪ್ರಶ್ನಿಸಿದ ಅರ್ಜಿ ಮುಂದೂಡಿಕೆ:

ಇದೇ ವೇಳೆ, ಮೆಟ್ರೊ ರೈಲು ಪ್ರಯಾಣ ದರ ಹೆಚ್ಚಿಸಿರುವುದನ್ನು ಹಿಂಪಡೆಯಬೇಕು ಮತ್ತು 2025ರ ಫೆಬ್ರವರಿ 19ರಿಂದ ಇದುವರೆಗೆ ಸಂಗ್ರಹಿಸಿರುವ ಹೆಚ್ಚುವರಿ ಮೊತ್ತವನ್ನು ಮರಳಿಸಲು ಬಿಎಂಆರ್‌ಸಿಎಲ್‌ಗೆ ನಿರ್ದೇಶಿಸಬೇಕು ಎಂದು ಕೋರಿ ಬೆಂಗಳೂರಿನ ನಿವಾಸಿ ಎಸ್‌. ಆನಂದ್‌ ಎಂಬುವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ನವೆಂಬರ್ 18ಕ್ಕೆ ಮುಂದೂಡಿತು.

ಪ್ರಕರಣವೇನು?

ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತವು ಕೇಂದ್ರ ಮತ್ತು ರಾಜ್ಯ ಸರಕಾರದ ಉದ್ದಿಮೆಯಾಗಿದೆ. ಸಾರ್ವಜನಿಕ ನಿಧಿಯನ್ನು ಬಳಕೆಯಾಗುತ್ತಿರುವ ನಿಗಮವು ಪಾರದರ್ಶಕವಾಗಿ ಸೇವೆ ಒದಗಿಸಬೇಕಿದ್ದು, ದರ ಏರಿಕೆ ಸಂಬಂಧಿಸಿದ ವರದಿ ಬಹಿರಂಗ ಪಡಿಸುವುದು ಬಿಎಂಆರ್‌ಸಿಎಲ್ ಕರ್ತ್ಯವವಾಗಿರಲಿದೆ. ಸಾರ್ವಜನಿಕ ಆಡಳಿತದಲ್ಲಿ ಪಾರದರ್ಶಕತೆ ಮತ್ತು ನಿರ್ಧಾರ ಕೈಗೊಳ್ಳುವ ನಿಟ್ಟಿನಲ್ಲಿ ದರ ನಿಗದಿಗೆ ಸಂಬಂಧಿಸಿದ ವರದಿಯನ್ನು ಈ ಹಿಂದೆ ದೆಹಲಿ, ಮುಂಬೈ ಮತ್ತು ಹೈದರಾಬಾದ್‌ ಮೆಟ್ರೊ ರೈಲು ನಿಗಮಗಳು ಸಾರ್ವಜನಿಕಗೊಳಿಸಿದ್ದವು. ಆದ್ದರಿಂದ, ಸ್ವೇಚ್ಛೆಯಿಂದ ನಡೆದುಕೊಳ್ಳುವುದನ್ನು ಬಿಟ್ಟು ಬಿಎಂಆರ್‌ಸಿಎಲ್‌ ಸಹ ವರದಿ ಬಹಿರಂಗಗೊಳಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿತ್ತು.

ಅರ್ಜಿದಾರರು ಮೆಟ್ರೊ ರೈಲು ಸಂಚರಿಸುವ ಕ್ಷೇತ್ರ ಪ್ರತಿನಿಧಿಸುವ ಸಂಸದರಾಗಿದ್ದು, ಹಲವು ಸಂದರ್ಭಗಳಲ್ಲಿ ಮೆಟ್ರೊ ರೈಲಿನಲ್ಲಿ ಪ್ರಯಾಣಿಸಿದ್ದಾರೆ. ಆದ್ದರಿಂದ, ವರದಿಯಲ್ಲಿನ ಅಂಶಗಳನ್ನು ತಿಳಿದುಕೊಳ್ಳಲು ಅವಕಾಶ ನೀಡಬೇಕು. ವರದಿ ಬಹಿರಂಗ ಪಡಿಸುವಂತೆ 2025ರ ಏಪ್ರಿಲ್ ತಿಂಗಳಿನಿಂದ ಈವರೆಗೂ 3 ಬಾರಿ ಮನವಿ ಸಲ್ಲಿಸಿದ್ದು, ವರದಿ ಬಹಿರಂಗಪಡಿಸುವಲ್ಲಿ ಬಿಎಂಆರ್‌ಸಿಎಲ್ ವಿಫಲವಾಗಿದೆ. ಸಾರ್ವಜನಿಕ ಪ್ರಾಧಿಕಾರವಾಗಿರುವ ನಿಗಮವು ಜನರ ಮೇಲೆ ಪರಿಣಾಮ ಬೀರುವಂತಹ ನಿರ್ಧಾರಗಳನ್ನು ತೆಗೆದುಕೊಂಡ ಸಂದರ್ಭದಲ್ಲಿ ಅದನ್ನು ಬಹಿರಂಗ ಪಡಿಸಬೇಕಾಗುತ್ತದೆ. ವರದಿಯನ್ನು ಬಹಿರಂಗ ಪಡಿಸದಂತೆ ಯಾವುದೇ ಕಾನೂನಿನಲ್ಲಿ ತಿಳಿಸಿಲ್ಲ. ಆದ್ದರಿಂದ, ಸಾರ್ವಜನಿಕ ಪ್ರಾಧಿಕಾರವಾಗಿರುವ ಬಿಎಂಆರ್‌ಸಿಎಲ್‌ಗೆ ವರದಿ ಬಹಿರಂಗ ಪಡಿಸುವಂತೆ ನಿರ್ದೇಶಿಸಬೇಕೆಂದು ತೇಜಸ್ವಿ ಸೂರ್ಯ ಮನವಿ ಮಾಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X