ವಕ್ಫ್ ವಿಚಾರದಲ್ಲಿ ಪ್ರಚೋದನಕಾರಿ ಭಾಷಣ ಪ್ರಕರಣ; ಬಸವರಾಜ ಬೊಮ್ಮಾಯಿ ವಿರುದ್ಧದ ಎರಡು ಎಫ್ಐಆರ್ ರದ್ದು

ಬೆಂಗಳೂರು: ವಕ್ಫ್ ವಿಚಾರದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿಗೆ ಬಿಗ್ ರಿಲೀಫ್ ಸಿಕ್ಕಿದೆ.ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣಗಳನ್ನ ರದ್ದು ಕೋರಿ ಸಂಸದ ಬಸವರಾಜ ಬೊಮ್ಮಾಯಿ ಸಲ್ಲಿಸಿದ್ದ ಅರ್ಜಿಗಳನ್ನು ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ.ಎಸ್.ಆರ್. ಕೃಷ್ಣಕುಮಾರ್ ಅವರಿದ್ದ ಪೀಠ ಆದೇಶಿದೆ.
ವಿಚಾರಣೆ ವೇಳೆ ಬೊಮ್ಮಾಯಿ ಪರ ಹಿರಿಯ ವಕೀಲ ಪ್ರಭುಲಿಂಗ್ ನಾವದಗಿ ವಾದ ಮಂಡಿಸಿ, ಶಿಗ್ಗಾಂವಿಯಲ್ಲಿ ವಕ್ಫ್ ಕುರಿತು ಹೇಳಿಕೆ ನೀಡಿದ್ದರು. ಈ ಹೇಳಿಕೆಯಲ್ಲಿ ಯಾವುದೇ ಪ್ರಚೋದನಕಾರಿ ಅಂಶಗಳಿಲ್ಲ.ಹೀಗಾಗಿ ಪ್ರಕರಣ ರದ್ದುಗೊಳಿಸಬೇಕು ಎಂದು ಮನವಿ ಮಾಡಿದರು. ವಾದ ಪ್ರತಿವಾದ ಆಲಿಸಿದ ಹೈಕೋರ್ಟ್ ಎರಡು ಎಫ್ಐಆರ್ ರದ್ದುಗೊಳಿಸಿದೆ.
Next Story





