Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಪ್ರವಾಸೋದ್ಯಮ ಹೂಡಿಕೆಗೆ ಉತ್ತೇಜನ:...

ಪ್ರವಾಸೋದ್ಯಮ ಹೂಡಿಕೆಗೆ ಉತ್ತೇಜನ: 1,080ಕೋಟಿ ರೂ.ಮೊತ್ತದ 78ಯೋಜನೆಗಳಿಗೆ ಒಪ್ಪಿಗೆ: ಸಚಿವ ಕೆ.ಜೆ.ಜಾರ್ಜ್

ವಾರ್ತಾಭಾರತಿವಾರ್ತಾಭಾರತಿ2 Sept 2026 6:39 PM IST
share
ಪ್ರವಾಸೋದ್ಯಮ ಹೂಡಿಕೆಗೆ ಉತ್ತೇಜನ: 1,080ಕೋಟಿ ರೂ.ಮೊತ್ತದ 78ಯೋಜನೆಗಳಿಗೆ ಒಪ್ಪಿಗೆ: ಸಚಿವ ಕೆ.ಜೆ.ಜಾರ್ಜ್

ಬೆಂಗಳೂರು : ರಾಜ್ಯದಲ್ಲಿ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಬಲಪಡಿಸುವ ಮತ್ತು ಖಾಸಗಿ ಹೂಡಿಕೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಪ್ರವಾಸೋದ್ಯಮ ಸಚಿವ ಕೆ.ಜೆ.ಜಾರ್ಜ್ ಅಧ್ಯಕ್ಷತೆಯಲ್ಲಿ ನಡೆದ ಕರ್ನಾಟಕ ಪ್ರವಾಸೋದ್ಯಮ ನೀತಿಯ ಆರನೆ ಅಧಿಕಾರಯುಕ್ತ ಸಮಿತಿ ಸಭೆಯಲ್ಲಿ ರಾಜ್ಯದ ಹೋಟೆಲ್ ವಲಯದ ಹಲವು ಮಹತ್ವದ ಯೋಜನೆಗಳಿಗೆ ಅನುಮೋದನೆ ನೀಡಲಾಯಿತು.

ಪ್ರವಾಸೋದ್ಯಮ ನೀತಿಯಡಿ 8 ಪ್ರೀಮಿಯಂ ಹಾಗೂ 10 ಬಜೆಟ್ ಹೋಟೆಲ್‍ಗಳು ಸೇರಿದಂತೆ ಒಟ್ಟು 18 ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಈ ಯೋಜನೆಗಳ ಮೂಲಕ ಪ್ರವಾಸೋದ್ಯಮ ವಲಯದಲ್ಲಿ 314.93 ಕೋಟಿ ರೂ.ಹೂಡಿಕೆಯಾಗಿದ್ದು, 655ಹೋಟೆಲ್ ಕೊಠಡಿಗಳು ಸೇರ್ಪಡೆಯಾಗಿವೆ ಹಾಗೂ 1,542 ಉದ್ಯೋಗಗಳು ಸೃಷ್ಟಿಯಾಗಿವೆ. ಈ ಯೋಜನೆಗಳಿಗೆ 47.23ಕೋಟಿ ರೂ.ಸಹಾಯಧನ ನೀಡಲು ಸಭೆಯಲ್ಲಿ ಅನುಮೋದನೆ ನೀಡಲಾಯಿತು.

1,080.97 ಕೋಟಿ ರೂ.ಹೂಡಿಕೆ: ಸಭೆಯಲ್ಲಿ 2024-29ರ ಕರ್ನಾಟಕ ಪ್ರವಾಸೋದ್ಯಮ ನೀತಿಯಡಿ 35 ಪ್ರೀಮಿಯಂ ಹಾಗೂ 43 ಬಜೆಟ್ ಹೋಟೆಲ್‍ಗಳು ಸೇರಿದಂತೆ ಒಟ್ಟು 78 ಯೋಜನೆಗಳಿಗೆ ತಾತ್ವಿಕ ಅನುಮೋದನೆ ನೀಡಲಾಯಿತು.

ಈ ಯೋಜನೆಗಳು ಅನುಷ್ಠಾನಗೊಂಡ ಬಳಿಕ ರಾಜ್ಯದಲ್ಲಿ 1,080.97ಕೋಟಿ ರೂ.ಹೂಡಿಕೆಯಾಗಲಿದ್ದು, 3,424ಹೊಸ ಹೋಟೆಲ್ ಕೊಠಡಿಗಳು ಸೇರ್ಪಡೆಯಾಗುವ ನಿರೀಕ್ಷೆ ಇದೆ. ಇದರೊಂದಿಗೆ 3,707 ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಮಾಹಿತಿ ನೀಡಲಾಗಿದೆ.

ಹೊಸ ಹೋಟೆಲ್ ಯೋಜನೆಗಳಿಂದ ಪ್ರವಾಸಿ ತಾಣಗಳಲ್ಲಿ ಗುಣಮಟ್ಟದ ವಸತಿ ಸೌಲಭ್ಯ ಹೆಚ್ಚುವುದರ ಜೊತೆಗೆ, ಖಾಸಗಿ ಹೂಡಿಕೆ, ಸ್ಥಳೀಯ ಉದ್ಯೋಗ ಹಾಗೂ ಪ್ರವಾಸೋದ್ಯಮ ಆಧಾರಿತ ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ದೊರೆಯಲಿದೆ ಎಂದು ತಿಳಿಸಲಾಗಿದೆ.

‘ರಾಜ್ಯದ ಪ್ರವಾಸೋದ್ಯಮಕ್ಕೆ ವಿಫುಲ ಅವಕಾಶಗಳಿದ್ದು, ಅದಕ್ಕೆ ಪೂರಕವಾಗಿ ವಸತಿ-ಆತಿಥ್ಯ ಮೂಲ ಸೌಕರ್ಯ ಹೆಚ್ಚಿಸುವುದು ನಮ್ಮ ಆದ್ಯತೆ. ಹೊಸ ಪ್ರವಾಸೋದ್ಯಮ ನೀತಿಯಡಿ ಖಾಸಗಿ ಹೂಡಿಕೆಗೆ ಉತ್ತೇಜನ ನೀಡುವುದರ ಜೊತೆಗೆ, ವಿವಿಧ ಭಾಗಗಳಲ್ಲಿ ಉದ್ಯೋಗ ಮತ್ತು ಸ್ಥಳೀಯ ಆರ್ಥಿಕ ಚಟುವಟಿಕೆಗಳನ್ನು ಹೆಚ್ಚಿಸುವ ಗುರಿ ಹೊಂದಿದ್ದೇವೆ. 1,080 ಕೋಟಿ ರೂ.ಗೂ ಹೆಚ್ಚಿನ ಹೂಡಿಕೆಯೊಂದಿಗೆ 78ಹೊಸ ಹೋಟೆಲ್ ಯೋಜನೆಗಳಿಗೆ ದೊರೆತಿರುವ ತಾತ್ವಿಕ ಅನುಮೋದನೆ ಪ್ರವಾಸೋದ್ಯಮ ವಲಯದ ಬೆಳವಣಿಗೆಗೆ ಉತ್ತಮ ಸೂಚನೆ’

-ಕೆ.ಜೆ.ಜಾರ್ಜ್ ಪ್ರವಾಸೋದ್ಯಮ ಸಚಿವ

‘ಹೊಸ ಹೋಟೆಲ್ ಯೋಜನೆಗಳ ಮೂಲಕ ಕೇವಲ ಕೊಠಡಿಗಳ ಸಂಖ್ಯೆಯನ್ನು ಹೆಚ್ಚಿಸುವುದಲ್ಲದೆ, ಪ್ರವಾಸಿಗರಿಗೆ ವಿವಿಧ ಬೆಲೆ ಶ್ರೇಣಿಗಳಲ್ಲಿ ಉತ್ತಮ ವಸತಿ ಆಯ್ಕೆಗಳನ್ನು ಕಲ್ಪಿಸುವುದು ನಮ್ಮ ಉದ್ದೇಶ. 35 ಪ್ರೀಮಿಯಂ ಮತ್ತು 43 ಬಜೆಟ್ ಹೋಟೆಲ್ ಯೋಜನೆಗಳು ಅನುಷ್ಠಾನಗೊಂಡಾಗ 3,424ಕೊಠಡಿಗಳು ಹಾಗೂ 3,707ಉದ್ಯೋಗಗಳು ಸೇರ್ಪಡೆಯಾಗಲಿವೆ. ಯೋಜನೆಗಳ ಅನುಷ್ಠಾನವನ್ನು ನಿಗದಿತ ಅವಧಿಯಲ್ಲಿ ಮುಂದುವರಿಸಲು ಇಲಾಖೆ ಅಗತ್ಯ ಕ್ರಮ ಕೈಗೊಳ್ಳಲಿದೆ

-ಡಾ.ರಾಮ್ ಪ್ರಸಾತ್ ಮನೋಹರ್, ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ

Tags

TourismInvestmentMinister K.J. George
share
ವಾರ್ತಾಭಾರತಿ
ವಾರ್ತಾಭಾರತಿ
Next Story
X